< ಅಪೊಸ್ತಲರ ಕೃತ್ಯಗಳ 15 >
1 ೧ ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
१फिर कुछ लोग यहूदिया से आकर भाइयों को सिखाने लगे: “यदि मूसा की रीति पर तुम्हारा खतना न हो तो तुम उद्धार नहीं पा सकते।”
2 ೨ ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
२जब पौलुस और बरनबास का उनसे बहुत मतभेद और विवाद हुआ तो यह ठहराया गया, कि पौलुस और बरनबास, और उनमें से कुछ व्यक्ति इस बात के विषय में प्रेरितों और प्राचीनों के पास यरूशलेम को जाएँ।
3 ೩ ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
३अतः कलीसिया ने उन्हें कुछ दूर तक पहुँचाया; और वे फीनीके और सामरिया से होते हुए अन्यजातियों के मन फिराने का समाचार सुनाते गए, और सब भाइयों को बहुत आनन्दित किया।
4 ೪ ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
४जब वे यरूशलेम में पहुँचे, तो कलीसिया और प्रेरित और प्राचीन उनसे आनन्द के साथ मिले, और उन्होंने बताया कि परमेश्वर ने उनके साथ होकर कैसे-कैसे काम किए थे।
5 ೫ ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.
५परन्तु फरीसियों के पंथ में से जिन्होंने विश्वास किया था, उनमें से कितनों ने उठकर कहा, “उन्हें खतना कराने और मूसा की व्यवस्था को मानने की आज्ञा देनी चाहिए।”
6 ೬ ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;
६तब प्रेरित और प्राचीन इस बात के विषय में विचार करने के लिये इकट्ठे हुए।
7 ೭ “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.
७तब पतरस ने बहुत वाद-विवाद हो जाने के बाद खड़े होकर उनसे कहा, “हे भाइयों, तुम जानते हो, कि बहुत दिन हुए, कि परमेश्वर ने तुम में से मुझे चुन लिया, कि मेरे मुँह से अन्यजातियाँ सुसमाचार का वचन सुनकर विश्वास करें।
8 ೮ ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
८और मन के जाँचने वाले परमेश्वर ने उनको भी हमारे समान पवित्र आत्मा देकर उनकी गवाही दी;
9 ೯ ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
९और विश्वास के द्वारा उनके मन शुद्ध करके हम में और उनमें कुछ भेद न रखा।
10 ೧೦ ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
१०तो अब तुम क्यों परमेश्वर की परीक्षा करते हो, कि चेलों की गर्दन पर ऐसा जूआ रखो, जिसे न हमारे पूर्वज उठा सकते थे और न हम उठा सकते हैं।
11 ೧೧ ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.
११हाँ, हमारा यह तो निश्चय है कि जिस रीति से वे प्रभु यीशु के अनुग्रह से उद्धार पाएँगे; उसी रीति से हम भी पाएँगे।”
12 ೧೨ ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
१२तब सारी सभा चुपचाप होकर बरनबास और पौलुस की सुनने लगी, कि परमेश्वर ने उनके द्वारा अन्यजातियों में कैसे-कैसे बड़े चिन्ह, और अद्भुत काम दिखाए।
13 ೧೩ ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;
१३जब वे चुप हुए, तो याकूब कहने लगा, “हे भाइयों, मेरी सुनो।
14 ೧೪ “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
१४शमौन ने बताया, कि परमेश्वर ने पहले-पहल अन्यजातियों पर कैसी कृपादृष्टि की, कि उनमें से अपने नाम के लिये एक लोग बना ले।
15 ೧೫ ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;
१५और इससे भविष्यद्वक्ताओं की बातें भी मिलती हैं, जैसा लिखा है,
16 ೧೬ “‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.
१६‘इसके बाद मैं फिर आकर दाऊद का गिरा हुआ डेरा उठाऊँगा, और उसके खंडहरों को फिर बनाऊँगा, और उसे खड़ा करूँगा,
17 ೧೭ ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು
१७इसलिए कि शेष मनुष्य, अर्थात् सब अन्यजाति जो मेरे नाम के कहलाते हैं, प्रभु को ढूँढ़ें,
18 ೧೮ ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ. (aiōn )
१८यह वही प्रभु कहता है जो जगत की उत्पत्ति से इन बातों का समाचार देता आया है।’ (aiōn )
19 ೧೯ “ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
१९“इसलिए मेरा विचार यह है, कि अन्यजातियों में से जो लोग परमेश्वर की ओर फिरते हैं, हम उन्हें दुःख न दें;
20 ೨೦ ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
२०परन्तु उन्हें लिख भेजें, कि वे मूरतों की अशुद्धताओं और व्यभिचार और गला घोंटे हुओं के माँस से और लहू से परे रहें।
21 ೨೧ ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.
२१क्योंकि पुराने समय से नगर-नगर मूसा की व्यवस्था के प्रचार करनेवाले होते चले आए है, और वह हर सब्त के दिन आराधनालय में पढ़ी जाती है।”
22 ೨೨ ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
२२तब सारी कलीसिया सहित प्रेरितों और प्राचीनों को अच्छा लगा, कि अपने में से कुछ मनुष्यों को चुनें, अर्थात् यहूदा, जो बरसब्बास कहलाता है, और सीलास को जो भाइयों में मुखिया थे; और उन्हें पौलुस और बरनबास के साथ अन्ताकिया को भेजें।
23 ೨೩ ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
२३और उन्होंने उनके हाथ यह लिख भेजा: “अन्ताकिया और सीरिया और किलिकिया के रहनेवाले भाइयों को जो अन्यजातियों में से हैं, प्रेरितों और प्राचीन भाइयों का नमस्कार!
24 ೨೪ “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
२४हमने सुना है, कि हम में से कुछ ने वहाँ जाकर, तुम्हें अपनी बातों से घबरा दिया; और तुम्हारे मन उलट दिए हैं परन्तु हमने उनको आज्ञा नहीं दी थी।
25 ೨೫ ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,
२५इसलिए हमने एक चित्त होकर ठीक समझा, कि चुने हुए मनुष्यों को अपने प्रिय बरनबास और पौलुस के साथ तुम्हारे पास भेजें।
26 ೨೬ ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.
२६ये तो ऐसे मनुष्य हैं, जिन्होंने अपने प्राण हमारे प्रभु यीशु मसीह के नाम के लिये जोखिम में डाले हैं।
27 ೨೭ ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
२७और हमने यहूदा और सीलास को भेजा है, जो अपने मुँह से भी ये बातें कह देंगे।
28 ೨೮ ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
२८पवित्र आत्मा को, और हमको भी ठीक जान पड़ा कि इन आवश्यक बातों को छोड़; तुम पर और बोझ न डालें;
29 ೨೯ ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
२९कि तुम मूरतों के बलि किए हुओं से, और लहू से, और गला घोंटे हुओं के माँस से, और व्यभिचार से दूर रहो। इनसे दूर रहो तो तुम्हारा भला होगा। आगे शुभकामना।”
30 ೩೦ ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
३०फिर वे विदा होकर अन्ताकिया में पहुँचे, और सभा को इकट्ठी करके उन्हें पत्री दे दी।
31 ೩೧ ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
३१और वे पढ़कर उस उपदेश की बात से अति आनन्दित हुए।
32 ೩೨ ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
३२और यहूदा और सीलास ने जो आप भी भविष्यद्वक्ता थे, बहुत बातों से भाइयों को उपदेश देकर स्थिर किया।
33 ೩೩ ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
३३वे कुछ दिन रहकर भाइयों से शान्ति के साथ विदा हुए कि अपने भेजनेवालों के पास जाएँ।
34 ೩೪ ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.
३४(परन्तु सीलास को वहाँ रहना अच्छा लगा।)
35 ೩೫ ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
३५और पौलुस और बरनबास अन्ताकिया में रह गए: और अन्य बहुत से लोगों के साथ प्रभु के वचन का उपदेश करते और सुसमाचार सुनाते रहे।
36 ೩೬ ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
३६कुछ दिन बाद पौलुस ने बरनबास से कहा, “जिन-जिन नगरों में हमने प्रभु का वचन सुनाया था, आओ, फिर उनमें चलकर अपने भाइयों को देखें कि कैसे हैं।”
37 ೩೭ ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು
३७तब बरनबास ने यूहन्ना को जो मरकुस कहलाता है, साथ लेने का विचार किया।
38 ೩೮ ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.
३८परन्तु पौलुस ने उसे जो पंफूलिया में उनसे अलग हो गया था, और काम पर उनके साथ न गया, साथ ले जाना अच्छा न समझा।
39 ೩೯ ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
३९अतः ऐसा विवाद उठा कि वे एक दूसरे से अलग हो गए; और बरनबास, मरकुस को लेकर जहाज से साइप्रस को चला गया।
40 ೪೦ ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ
४०परन्तु पौलुस ने सीलास को चुन लिया, और भाइयों से परमेश्वर के अनुग्रह में सौंपा जाकर वहाँ से चला गया।
41 ೪೧ ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.
४१और कलीसियाओं को स्थिर करता हुआ, सीरिया और किलिकिया से होते हुए निकला।