< ಅಪೊಸ್ತಲರ ಕೃತ್ಯಗಳ 16 >

1 ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
Then he came to Derbe and Lystra: and behold, a certain disciple was there, named Timothy, the son of a certain woman who was a Jewess, and believed, but his father [was] a Greek.
2 ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.
Who was well reported of by the brethren that were at Lystra and Iconium.
3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.
Him would Paul have to go forth with him; and took and circumcised him, because of the Jews who were in those quarters: for they all knew that his father was a Greek.
4 ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.
And as they went through the cities, they delivered to them the decrees to keep that were ordained by the apostles and elders who were at Jerusalem.
5 ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.
And so were the churches established in the faith, and increased in number daily.
6 ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
Now when they had gone throughout Phrygia, and the region of Galatia, and were forbidden by the Holy Spirit to preach the word in Asia;
7 ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
After they had come to Mysia, they essayed to go into Bithynia: but the Spirit suffered them not.
8 ಆಗ ಅವರು ಮೂಸ್ಯದ ಮುಖಾಂತಾರವಾಗಿ ತ್ರೋವಕ್ಕೆ ಬಂದರು.
And they, passing by Mysia, came down to Troas.
9 ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
And a vision appeared to Paul in the night: There stood a man of Macedonia, and prayed him, saying, Come over into Macedonia, and help us.
10 ೧೦ ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
And after he had seen the vision, immediately we endeavored to go into Macedonia, assuredly gathering, that the Lord had called us to preach the gospel to them.
11 ೧೧ ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು.
Therefore loosing from Troas, we came with a straight course to Samothracia, and the next [day] to Neapolis;
12 ೧೨ ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
And from thence to Philippi, which is the chief city of that part of Macedonia, [and] a colony: and we were in that city abiding certain days.
13 ೧೩ ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.
And on the sabbath we went out of the city by a river side, where prayer was wont to be made; and we sat down, and spoke to the women who resorted [thither].
14 ೧೪ ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
And a certain woman named Lydia, a seller of purple, of the city of Thyatira, who worshiped God, heard [us]: whose heart the Lord opened, that she attended to the things which were spoken by Paul.
15 ೧೫ ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
And when she was baptized, and her household, she besought [us], saying, If ye have judged me to be faithful to the Lord, come into my house, and abide [there]: And she constrained us.
16 ೧೬ ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.
And it came to pass as we went to prayer, a certain damsel possessed with a spirit of divination, met us, who brought her masters much gain by sooth-saying:
17 ೧೭ ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
The same followed Paul and us, and cried, saying, These men are the servants of the most high God, who show to us the way of salvation.
18 ೧೮ ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
And this she did many days. But Paul being grieved, turned and said to the spirit, I command thee in the name of Jesus Christ to come out of her. And he came out the same hour.
19 ೧೯ ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
And when her masters saw that the hope of their gains was gone, they caught Paul and Silas, and drew [them] into the market-place to the rulers,
20 ೨೦ ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;
And brought them to the magistrates, saying, These men, being Jews, do exceedingly trouble our city,
21 ೨೧ ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.
And teach customs which are not lawful for us to receive, neither to observe, being Romans.
22 ೨೨ ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
And the multitude rose together against them: and the magistrates rent off their clothes, and commanded to beat [them].
23 ೨೩ ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
And when they had laid many stripes upon them, they cast [them] into prison, charging the jailer to keep them safely.
24 ೨೪ ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
Who, having received such a charge, thrust them into the inner prison, and made their feet fast in the stocks.
25 ೨೫ ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
And at midnight Paul and Silas prayed, and sang praises to God: and the prisoners heard them.
26 ೨೬ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
And suddenly there was a great earthquake, so that the foundations of the prison were shaken: and immediately all the doors were opened, and every one's bands were loosed.
27 ೨೭ ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
And the keeper of the prison awaking out of his sleep, and seeing the prison doors open, he drew out his sword, and would have killed himself, supposing that the prisoners had fled.
28 ೨೮ ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.
But Paul cried with a loud voice, saying, Do thyself no harm: for we are all here.
29 ೨೯ ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.
Then he called for a light, and sprang in, and came trembling, and fell down before Paul and Silas;
30 ೩೦ ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,
And brought them out, and said, Sirs, what must I do to be saved?
31 ೩೧ ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,
And they said, Believe on the Lord Jesus Christ, and thou shalt be saved, and thy house.
32 ೩೨ ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.
And they spoke to him the word of the Lord, and to all that were in his house.
33 ೩೩ ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
And he took them the same hour of the night, and washed [their] stripes; and was baptized, he and all his, without delay.
34 ೩೪ ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
And when he had brought them into his house, he set food before them, and rejoiced, believing in God with all his house.
35 ೩೫ ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.
And when it was day, the magistrates sent the sergeants, saying, Let those men go.
36 ೩೬ ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
And the keeper of the prison told this saying to Paul, The magistrates have sent to let you go: now therefore depart, and go in peace.
37 ೩೭ ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
But Paul said to them, They have beaten us openly uncondemned, being Romans, and have cast [us] into prison; and now do they thrust us out privately? no verily; but let them come themselves and bring us out.
38 ೩೮ ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.
And the sergeants told these words to the magistrates: and they feared when they heard that they were Romans.
39 ೩೯ ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
And they came and besought them, and brought [them] out, and desired [them] to depart out of the city.
40 ೪೦ ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.
And they went out of the prison, and entered into [the house of] Lydia: and when they had seen the brethren, they comforted them, and departed.

< ಅಪೊಸ್ತಲರ ಕೃತ್ಯಗಳ 16 >