< ಅಪೊಸ್ತಲರ ಕೃತ್ಯಗಳ 17 >
1 ೧ ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.
Пройшовши через Амфіполь та Аполлонію, прийшли в Солунь, де була юдейська синагога.
2 ೨ ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,
Павло, за своїм звичаєм, пішов до них і три Суботи говорив із ними про Писання,
3 ೩ ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
пояснюючи та доводячи, що Христос повинен був постраждати й воскреснути з мертвих. Він казав: «Ісус, Якого я вам проповідую, і є Христос».
4 ೪ ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
Декого з них це переконало, і вони приєдналися до Павла та Сили, а також багато богобоязних греків і чимало поважних жінок.
5 ೫ ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
Це розлютило інших юдеїв, і вони, узявши якихось негідних людей з ринку, зібрали натовп та розпочали заворушення в місті. Вони прийшли до дому Ясона й шукали Павла та Силу, щоб вивести їх до натовпу.
6 ೬ ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
Не знайшовши їх, вони повели Ясона та деяких братів до керівників міста, викрикуючи: «Ті, що збунтували весь світ, прийшли й сюди,
7 ೭ ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.
а Ясон прийняв їх! Усі вони діють проти наказів Кесаря й говорять, що є інший цар – Ісус!»
8 ೮ ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು
Натовп та керівники міста, почувши ці слова, збентежились.
9 ೯ ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.
Але, отримавши від Ясона та інших поруку, відпустили їх.
10 ೧೦ ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
Тієї ж ночі брати відіслали Павла та Силу до Верії. Прибувши туди, вони пішли в юдейську синагогу.
11 ೧೧ ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
Верійці були більш відкриті, ніж солуняни: прийняли Слово з усім запалом. Щодня ретельно досліджували Писання, [щоб перевірити], чи так воно є.
12 ೧೨ ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.
Багато з них, а також чимало поважних грецьких жінок та чоловіків увірували.
13 ೧೩ ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
Та коли юдеї з Солуня дізналися, що Павло проповідує Слово Боже у Верії, прийшли також туди й почали підбурювати та бунтувати народ.
14 ೧೪ ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.
Брати відразу ж відіслали Павла до моря, а Сила та Тимофій залишилися там.
15 ೧೫ ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.
Ті, хто супроводжував Павла, провели його до Афін і повернулися з наказом до Сили та Тимофія, щоб вони негайно прийшли до нього.
16 ೧೬ ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.
Чекаючи на них в Афінах, Павло засмутився у своєму дусі, побачивши, що місто наповнене ідолами.
17 ೧೭ ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.
Він розмовляв з юдеями та богобоязними в синагозі й щоденно з тими, хто був на ринку.
18 ೧೮ ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
Деякі філософи з епікурейців та стоїків почали сперечатися з ним. Одні з них говорили: ―Що хоче сказати цей базіка? Інші казали: ―Здається, він звіщає чужих богів! Це тому, що він проповідував Добру Звістку про воскресіння Ісуса.
19 ೧೯ ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?
Вони взяли його та повели до Ареопагу, кажучи: ―Чи можемо ми знати, що це за нове навчання, про яке ти говориш?
20 ೨೦ ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.
Бо щось дивне ти вкладаєш нам у вуха, і хотілося б знати, що це означає.
21 ೨೧ ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.
Усі афіняни й чужинці, які там мешкали, нічим іншим не займались, як аби щось нове говорити чи слухати.
22 ೨೨ ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.
Павло став посередині Ареопагу та промовив: ―Афіняни! З усього бачу, що ви дуже релігійні!
23 ೨೩ ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.
Бо коли я проходив та роздивлявся ваші святині, то знайшов і жертовник, на якому було написано: невідомому богові. Отже, цього невідомого [Бога], Якому ви поклоняєтесь, не знаючи, я вам проповідую.
24 ೨೪ “ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
Бог, Який сотворив світ і все, що в ньому, є Господом неба і землі. Він не живе в храмах, збудованих руками людей,
25 ೨೫ ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.
і не вимагає служіння людських рук, ніби в чомусь має потребу. Він сам дає всім життя, дихання й усе [інше].
26 ೨೬ ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,
З одного чоловіка Він сотворив усі народи, щоб вони заселили цілу землю. Він установив часи та межі їхнього проживання,
27 ೨೭ ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.
щоб вони шукали Бога й, відчуваючи Його, мабуть, знайшли, хоча Він і недалеко від кожного з нас.
28 ೨೮ ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
Бо в Ньому ми живемо, рухаємось та існуємо, як про це казали деякі з ваших поетів: «Ми Його нащадки».
29 ೨೯ “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.
Будучи нащадками Бога, ми не повинні думати, що божество – це щось майстерно виготовлене за замислом людей із золота, срібла або каміння.
30 ೩೦ ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
Отже, не зважаючи на часи незнання, Бог тепер наказує всім людям усюди покаятись;
31 ೩೧ ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
бо Він призначив день, коли судитиме світ по правді через Чоловіка, Якого обрав для цього, і дав усім незаперечні докази цього, воскресивши Його з мертвих.
32 ೩೨ ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.
Почувши про воскресіння з мертвих, одні почали насміхатися, а інші сказали: ―Про це ми послухаємо тебе іншим разом!
33 ೩೩ ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
Так Павло вийшов з-поміж них.
34 ೩೪ ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.
Однак деякі люди приєдналися до нього й увірували. Серед них Діонісій Ареопагіт, одна жінка, на ім’я Дамаріс, та інші разом із ними.