< ಅಪೊಸ್ತಲರ ಕೃತ್ಯಗಳ 19 >
1 ೧ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;
Коли Аполлос був у Коринфі, Павло, пройшовши через внутрішні райони високогір’я, дістався до Ефеса. [Там] він зустрів деяких учнів
2 ೨ “ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.
і спитав їх: ―Чи отримали ви Святого Духа, коли увірували? Вони відповіли: ―Ми навіть не чули про Святого Духа.
3 ೩ ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.
Тоді він спитав їх: ―Тож у що ви були охрещені? Вони відповіли: ―У хрещення Івана.
4 ೪ ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,
Павло сказав: ―Іван хрестив хрещенням покаяння. Він закликав народ увірувати в Того, Хто мав прийти після Нього, тобто в Ісуса.
5 ೫ ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
Почувши це, вони були охрещені в ім’я Господа Ісуса.
6 ೬ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
Коли Павло поклав на них руки, Дух Святий зійшов на них, і вони почали говорити мовами й пророкувати.
7 ೭ ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು.
Усього їх було близько дванадцяти осіб.
8 ೮ ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
Потім він зайшов у синагогу, де упродовж трьох місяців сміливо говорив та переконував про Царство Боже.
9 ೯ ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
Коли ж деякі з них стали опиратися й не вірили, зневажаючи Шлях перед громадою, [Павло] залишив їх. Він відокремив учнів і щодня говорив із ними в школі Тиранна.
10 ೧೦ ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.
Це продовжувалося два роки, так що всі мешканці Азії, юдеї та греки, почули Слово Господнє.
11 ೧೧ ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,
Бог робив надзвичайні чудеса через Павла:
12 ೧೨ ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.
хустини або пояси, яких він торкався, клали на хворих, і хвороби залишали їх, а злі духи виходили.
13 ೧೩ ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
Деякі з мандрівних юдейських екзорцистів теж спробували використати ім’я Господа Ісуса для звільнення тих, що мали злих духів, кажучи: ―Заклинаємо вас Ісусом, Якого проповідує Павло!
14 ೧೪ ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು.
Це робили семеро синів Скеви, юдейського первосвященника.
15 ೧೫ ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;
Але злий дух відповів їм: ―Ісуса я знаю, і Павло мені відомий, а ви хто такі?
16 ೧೬ ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.
І чоловік, у якому був злий дух, кинувся на них і переміг усіх. Вони вибігли з дому голі та поранені.
17 ೧೭ ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.
Про це стало відомо всім юдеям та грекам, які жили в Ефесі. Усіх охопив страх, і звеличували ім’я Господа Ісуса.
18 ೧೮ ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
Багато з тих, хто увірував, приходили та відверто визнавали й відкривали свої вчинки.
19 ೧೯ ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.
Чимало з тих, хто раніше займався чаклунством, зібрали свої книжки та спалили їх перед усіма. Коли порахували ціну всіх книжок, вона склала п’ятдесят тисяч [драхм].
20 ೨೦ ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.
Так, завдяки Господній силі Слово зростало та зміцнювалось.
21 ೨೧ ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
Після тих подій Павло в дусі вирішив пройти через Македонію й Ахаю та піти до Єрусалима. Він сказав: «Після того, як побуваю там, мені потрібно побачити Рим».
22 ೨೨ ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
Він надіслав до Македонії двох своїх помічників, Тимофія та Ераста, а сам залишився на деякий час в Азії.
23 ೨೩ ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
У той час розпочалося велике заворушення проти Шляху.
24 ೨೪ ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
Певний срібний майстер, на ім’я Деметріос, який робив зі срібла копії храму Артеміди, давав чималий дохід своїм ремісникам.
25 ೨೫ ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.
Зібравши їх та інших робітників, що займалися подібним ремеслом, сказав: «Ви знаєте, що ця робота дає нам хороший дохід.
26 ೨೬ ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.
Але ви бачите й чуєте, що не тільки в Ефесі, але й в усій Азії цей Павло переконав та увів в оману багатьох людей, кажучи, що боги, зроблені руками [людей], не є богами.
27 ೨೭ ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.
Це загрожує не тільки тим, що наш труд зазнає зневаги, але й тим, що храм великої богині Артеміди, перед якою вклоняється вся Азія й весь світ, буде нічим, і вся її велич буде зруйнована».
28 ೨೮ ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.
Почувши це, вони сповнились люттю й почали кричати: «Велика Артеміда Ефеська!»
29 ೨೯ ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
Місто наповнилося заворушенням, і всі разом кинулися до театру, схопивши Павлових супутників, Гайя та Аристарха, які були з Македонії.
30 ೩೦ ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
Павло хотів вийти до народу, але учні не дозволили йому.
31 ೩೧ ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.
Навіть деякі з керівників Азії, які були друзями Павла, надіслали до нього попередження, щоб він не з’являвся в театрі.
32 ೩೨ ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.
Зібрання було в сум’ятті: одні кричали одне, а інші – інше. Більшість же навіть не розуміла, навіщо вони зібралися.
33 ೩೩ ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.
З натовпу взяли Олександра, бо юдеї його виштовхали. Олександр дав знак рукою, бажаючи виправдатись перед народом.
34 ೩೪ ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು.
Але довідавшись, що він юдей, натовп упродовж двох годин викрикував в один голос: «Велика Артеміда Ефеська!»
35 ೩೫ ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?
Тоді до народу вийшов один із чиновників [міста], заспокоїв натовп та сказав: «Ефесяни, чи є якась людина, яка не знає, що місто Ефес – хранитель храму великої Артеміди та її [зображення], яке впало з неба?
36 ೩೬ ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.
Це безперечний факт, тому вам належить зберігати спокій і не діяти необачно.
37 ೩೭ ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
А ви привели сюди цих людей, хоча жоден із них не є грабіжником храму й не богохульствував проти нашої богині.
38 ೩೮ ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.
Отже, якщо в Деметріоса та інших майстрів є звинувачення проти когось, то на це є суди й проконсули. Нехай [туди] приносять обвинувачення один на одного.
39 ೩೯ ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
Якщо ж у вас є щось інше, це вирішиться на законному зібранні.
40 ೪೦ ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.
Бо є небезпека, що нас можуть за сьогоднішнє обвинуватити в заколоті, адже не маємо жодного виправдання цьому збіговиську».
41 ೪೧ ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು.
Сказавши це, він розпустив зібрання.