< ಅಪೊಸ್ತಲರ ಕೃತ್ಯಗಳ 2 >

1 ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.
Da ranar Fentekos ta yi, dukansu suna tare wuri ɗaya.
2 ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
Ba zato ba tsammani sai aka ji motsi kamar ta babbar iska tana hurowa daga sama ta kuma cika dukan gidan da suke zaune.
3 ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
Suka ga wani abin da ya yi kama da harsunan wuta, suka rarrabu suna kuma sassauka a kan kowannensu.
4 ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
Dukansu kuwa suka cika da Ruhu Mai Tsarki suka kuma fara magana da waɗansu harsuna yadda Ruhu ya sa suka iya.
5 ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
To, a Urushalima akwai Yahudawa masu tsoron Allah, daga kowace ƙasa a duniya.
6 ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
Da suka ji wannan motsi, taro ya haɗu wuri ɗaya a ruɗe, domin kowannensu ya ji suna magana da yarensa.
7 ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
Cike da mamaki, suka yi tambaya suna cewa, “Ashe, duk waɗannan mutane masu magana ba Galiliyawa ba ne?
8 ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?
To, yaya kowannenmu yana ji suna yarensa?
9 ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
Fartiyawa, Medes da Elamawa; mazaunan Mesofotamiya, Yahudiya da Kaffadokiya, Fontus da Asiya,
10 ೧೦ ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ
Firjiya da Famfiliya, Masar da sassa Libiya kusa da Sairin; baƙi daga Roma
11 ೧೧ ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
(Yahudawa da kuma waɗanda suka tuba suka shiga Yahudanci); Kiretawa da Larabawa, mun ji su suna shelar abubuwan banmamaki na Allah da yarenmu!”
12 ೧೨ ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
A ruɗe kuma cike da mamaki, suka tambayi junansu cewa, “Mene ne wannan yake nufi?”
13 ೧೩ ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
Duk da haka waɗansu suka yi musu ba’a suka ce, “Sun yi tatil da ruwan inabi ne.”
14 ೧೪ ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
Sai Bitrus ya miƙe tsaye tare da Sha Ɗayan nan, ya ɗaga muryarsa ya yi wa taron jawabi ya ce, “’Yan’uwana Yahudawa da dukanku da kuke zama cikin Urushalima, bari in bayyana muku wannan, ku saurara da kyau ga abin da zan faɗa.
15 ೧೫ ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
Waɗannan mutane ba su bugu ba, kamar yadda kuka ɗauka. Yanzu ƙarfe tara na safe ne kawai!
16 ೧೬ ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
A’a, ai, abin da aka yi magana ta bakin annabi Yowel ke nan cewa,
17 ೧೭ “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
“Allah ya ce, ‘A kwanakin ƙarshe, zan zubo Ruhuna bisa dukan mutane.’Ya’yanku maza da mata za su yi annabci, samarinku za su ga wahayoyi, dattawanku kuma za su yi mafarkai.
18 ೧೮ ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.
Kai, har ma a kan bayina, maza da mata, zan zubo Ruhuna a waɗancan kwanaki, za su kuwa yi annabci.
19 ೧೯ ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
Zan nuna abubuwan banmamaki a sararin sama da alamu a nan ƙasa, jini da wuta da kuma hauhawan hayaƙi.
20 ೨೦
Za a mai da rana duhu, wata kuma ya zama jini, kafin zuwa rana mai girma da kuma ta ɗaukaka ta Ubangiji.
21 ೨೧ ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
Kuma duk wanda ya kira bisa sunan Ubangiji zai sami ceto.’
22 ೨೨ “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ; , ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
“Mutanen Isra’ila, ku saurari wannan. Yesu Banazare shi ne mutumin da Allah ya tabbatar muku ta wurin mu’ujizai, ayyukan banmamaki, da kuma alamu, waɗanda Allah ya yi a cikinku ta wurinsa, kamar yadda ku kanku kuka sani.
23 ೨೩ ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
An ba da wannan mutum gare ku bisa ga nufin Allah da kuma rigyasaninsa, ku kuma tare da taimakon mugayen mutane, kuka kashe shi ta wurin kafa shi a kan gicciye.
24 ೨೪ ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
Amma Allah ya tashe shi daga matattu, ya’yantar da shi daga azabar mutuwa, don ba ya yiwuwa mutuwa ta riƙe shi.
25 ೨೫ ಆತನ ವಿಷಯದಲ್ಲಿ ದಾವೀದನು; , “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
Dawuda ya yi faɗi game da shi cewa, “‘Kullum ina ganin Ubangiji a gabana. Gama yana a hannuna na dama, ba zan jijjigu ba.
26 ೨೬ ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;
Saboda haka, zuciyata na farin ciki, harshena kuma na murna, jikina kuma zai kasance da bege,
27 ೨೭ ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. (Hadēs g86)
gama ba za ka bar ni cikin kabari ba, ba kuwa za ka yarda Mai Tsarkinka yă ruɓa ba. (Hadēs g86)
28 ೨೮ ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.
Ka sanar da ni hanyoyin rai, za ka cika ni da farin ciki a gabanka.’
29 ೨೯ “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
“’Yan’uwa, zan iya tabbatar muku gabagadi cewa kakanmu Dawuda ya mutu aka kuma binne shi, kabarinsa kuwa yana a nan har yă zuwa yau.
30 ೩೦ ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
Amma shi annabi ne ya kuma san abin da Allah ya yi masa alkawari da rantsuwa cewa zai ɗora ɗaya daga cikin zuriyarsa a kan gadon sarautarsa.
31 ೩೧ ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. (Hadēs g86)
Ganin abin da yake gaba, ya yi magana a kan tashin Kiristi daga matattu cewa, ba a bar shi a kabari ba, jikinsa kuma bai ruɓa ba. (Hadēs g86)
32 ೩೨ ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
Allah ya tashe wannan Yesu zuwa rai, mu kuwa duk shaidu ne ga wannan.
33 ೩೩ ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
An ɗaukaka shi zuwa ga hannun dama na Allah, ya karɓi alkawarin Ruhu Mai Tsarki daga Uba, ya kuma zubo abin da yanzu kuke gani kuke kuma ji.
34 ೩೪ ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
Gama Dawuda bai hau zuwa sama ba, duk da haka ya ce, “‘Ubangiji ya ce wa Ubangijina, “Zauna a hannun damana,
35 ೩೫
sai na sa abokan gābanka su zama matashin sawunka.”’
36 ೩೬ “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
“Saboda haka bari dukan Isra’ila su tabbatar da wannan. Allah ya mai da wannan Yesu, da kuka gicciye, Ubangiji da kuma Kiristi.”
37 ೩೭ ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
Sa’ad da mutane suka ji wannan, sai suka soku a zuci sai suka ce wa Bitrus da sauran manzanni, “’Yan’uwa, me za mu yi?”
38 ೩೮ ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
Bitrus ya amsa, “Ku tuba a kuma yi muku baftisma, kowannenku a cikin sunan Yesu Kiristi domin gafarar zunubanku. Za ku kuwa karɓi kyautar Ruhu Mai Tsarki.
39 ೩೯ ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
Alkawarin dominku ne da’ya’yanku da kuma dukan waɗanda suke da nesa, domin dukan waɗanda Ubangiji Allahnmu zai kira.”
40 ೪೦ ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.
Da waɗansu kalmomi masu yawa ya gargaɗe su; ya kuma roƙe su cewa, “Ku ceci kanku daga wannan lalataccen zamani.”
41 ೪೧ ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
Waɗanda suka yarda da saƙonsa kuwa aka yi musu baftisma, a ranar kuwa yawansu ya ƙaru da mutum kusan dubu uku.
42 ೪೨ ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
Suka ba da kansu ga koyarwar manzanni da kuma ga zumunci, ga gutsuttsura burodin da kuma ga addu’a.
43 ೪೩ ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.
Kowa ya cika da tsoro, manzannin kuwa suka aikata abubuwan banmamaki da alamu masu yawa.
44 ೪೪ ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
Dukan masu bi suna tare, suna kuma mallakar kome tare.
45 ೪೫ ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.
Suka dinga sayar da ƙaddarorinsu da kayayyakinsu, suka ba wa kowa gwargwadon bukatarsa.
46 ೪೬ ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
Kowace rana suka ci gaba da taruwa a filin haikali. Suka gutsuttsura burodi a gidajensu suna cin abinci tare da farin ciki da zuciya ɗaya,
47 ೪೭ ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
suna yabon Allah suna kuma samun tagomashin dukan mutane. Ubangiji kuwa ya ƙara yawansu kowace rana na waɗanda suke samun ceto.

< ಅಪೊಸ್ತಲರ ಕೃತ್ಯಗಳ 2 >