< ಅಪೊಸ್ತಲರ ಕೃತ್ಯಗಳ 2 >
1 ೧ ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.
Đến ngày lễ Ngũ Tuần, các môn đệ Chúa đều họp mặt đông đủ.
2 ೨ ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
Thình lình, có tiếng động từ trời như luồng gió mạnh thổi vào đầy nhà.
3 ೩ ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
Các môn đệ thấy những chiếc lưỡi bằng lửa xuất hiện, đậu trên đầu mỗi người.
4 ೪ ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
Tất cả đều đầy dẫy Chúa Thánh Linh, và bắt đầu nói ngôn ngữ do Chúa Thánh Linh ban cho.
5 ೫ ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
Lúc đó, tại Giê-ru-sa-lem có những người Do Thái và người mộ đạo từ nhiều dân tộc về dự lễ.
6 ೬ ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
Tiếng ồn ào vang ra, một đám đông kéo đến, vô cùng kinh ngạc vì nghe các môn đệ nói đúng ngôn ngữ của chính mình.
7 ೭ ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
Họ sửng sốt hỏi nhau: “Những người này là người Ga-li-lê,
8 ೮ ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?
nhưng chúng ta nghe họ nói ngôn ngữ của chúng ta!
9 ೯ ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
Này, chúng ta đây là người Bạc-thê, Mê-đi, Ê-la-mít, người từ Mê-sô-pô-ta-ni, Giu-đê, Cáp-ba-đốc, Bông-ty, và Tiểu Á,
10 ೧೦ ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ
Phi-ri-gi, Bam-phi-ly, Ai Cập, và các vùng thuộc Ly-bi gần Sy-ren, du khách từ La Mã
11 ೧೧ ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
(cả người Do Thái và người nước ngoài theo đạo Do Thái), người Cơ-rết và A-rập. Tất cả chúng ta đều nghe họ dùng ngôn ngữ của chúng ta để nói về những việc kỳ diệu Đức Chúa Trời đã thực hiện!”
12 ೧೨ ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
Mọi người kinh ngạc, bối rối hỏi nhau: “Việc này có nghĩa gì đây?”
13 ೧೩ ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
Nhưng có người lại chế giễu: “Họ say rượu đó!”
14 ೧೪ ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
Nhưng Phi-e-rơ cùng mười một sứ đồ đứng lên giải thích: “Xin lắng nghe tôi, thưa anh chị em, là người Do Thái, và những người sinh sống tại Giê-ru-sa-lem! Xin đừng hiểu lầm việc này.
15 ೧೫ ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
Những người này không say rượu như anh chị em lầm tưởng. Vì bây giờ mới chín giờ sáng.
16 ೧೬ ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
Nhưng việc này đã được Tiên tri Giô-ên báo trước:
17 ೧೭ “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
Đức Chúa Trời dạy: ‘Trong những ngày cuối cùng, Ta sẽ đổ Thần Ta trên mọi người. Con trai và con gái họ sẽ nói tiên tri. Thanh niên sẽ thấy khải tượng, và phụ lão sẽ được báo mộng.
18 ೧೮ ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.
Trong những ngày ấy, Ta sẽ đổ Thần Ta đầy dẫy trên các đầy tớ Ta—cả nam lẫn nữ— và họ sẽ nói tiên tri.
19 ೧೯ ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
Ta sẽ tạo những hiện tượng lạ trên trời và làm những dấu lạ dưới đất— như máu, lửa, và luồng khói.
Mặt trời sẽ tối đen như mực, và mặt trăng đỏ như máu trước ngày lớn và vinh quang của Chúa Hằng Hữu.
21 ೨೧ ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
Khi ấy, ai cầu khẩn Danh Chúa Hằng Hữu đều được cứu.’
22 ೨೨ “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ; , ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
Thưa toàn dân Ít-ra-ên, xin lắng nghe! Đức Chúa Trời đã công khai xác nhận Giê-xu người Na-xa-rét là Chúa Cứu Thế, bằng cách dùng tay Ngài thực hiện ngay trước mắt anh chị em những phép lạ, dấu lạ và việc phi thường.
23 ೨೩ ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
Đức Chúa Trời đã biết điều sẽ xảy ra, và chương trình của Ngài được thực hiện qua việc Chúa Giê-xu bị phản nộp. Anh chị em đã mượn tay những người vô luật, đóng đinh và giết Ngài trên cây thập tự.
24 ೨೪ ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
Nhưng Đức Chúa Trời cho Ngài sống lại, giải thoát Ngài khỏi nỗi thống khổ của sự chết, vì âm phủ không có quyền giam giữ Ngài.
25 ೨೫ ಆತನ ವಿಷಯದಲ್ಲಿ ದಾವೀದನು; , “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
Như Vua Đa-vít đã chép về Ngài: ‘Tôi luôn thấy Chúa Hằng Hữu trước mặt tôi. Tôi không nao núng, vì Ngài ở bên cạnh tôi.
26 ೨೬ ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;
Do đó, lòng tôi hân hoan, lưỡi tôi mừng rỡ tôn ngợi Ngài! Thân xác tôi an nghỉ trong hy vọng.
27 ೨೭ ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. (Hadēs )
Vì Chúa không bỏ rơi linh hồn tôi trong Âm Phủ, cũng chẳng để Đấng Thánh của Chúa bị rữa nát. (Hadēs )
28 ೨೮ ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.
Bởi Chúa đã chỉ cho tôi con đường sống, và cho tôi nức lòng mừng rỡ trước mặt Chúa.’
29 ೨೯ “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
Thưa anh chị em, xin suy nghĩ điều này! Anh chị em đã biết rõ rằng Đa-vít, tổ phụ chúng ta đã qua đời và được an táng trong lăng mộ hiện còn trong thành này.
30 ೩೦ ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
Tuy nhiên, người là một nhà tiên tri, người biết Đức Chúa Trời đã thề hứa sẽ đặt một hậu tự thuộc dòng dõi Đa-vít ngồi trên ngôi báu.
31 ೩೧ ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. (Hadēs )
Đa-vít đã thấy và báo trước sự sống lại của Đấng Mết-si-a. Người nói rằng Đức Chúa Trời sẽ không bỏ Đấng Mết-si-a nơi âm phủ hay để cho thân thể Đấng ấy rữa nát. (Hadēs )
32 ೩೨ ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
Đức Chúa Trời đã khiến Chúa Giê-xu sống lại, và tất cả chúng tôi đều chứng kiến điều này.
33 ೩೩ ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
Ngài được rước lên ngồi bên phải ngai Đức Chúa Trời. Ngài đã nhận lãnh Chúa Thánh Linh theo lời hứa của Đức Chúa Cha và đổ Chúa Thánh Linh xuống cho chúng ta, như anh chị em thấy và nghe hôm nay.
34 ೩೪ ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
Vì chính Đa-vít chưa lên trời nhưng đã nói: ‘Chúa Hằng Hữu phán với Chúa tôi: “Hãy ngồi bên phải Ta
cho đến chừng Ta đặt kẻ thù dưới gót chân Con.”’
36 ೩೬ “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
Vậy, xin mỗi người trong Ít-ra-ên nhận thức cho chắc chắn rằng Chúa Giê-xu mà anh chị em đóng đinh trên cây thập tự đã được Đức Chúa Trời tôn làm Chúa và Đấng Mết-si-a!”
37 ೩೭ ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
Nghe lời giảng giải, dân chúng cảm động sâu xa, liền hỏi Phi-e-rơ và các sứ đồ: “Thưa các ông, chúng tôi phải làm chi?”
38 ೩೮ ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
Phi-e-rơ đáp: “Anh chị em phải ăn năn tội lỗi và trở về cùng Đức Chúa Trời, mỗi người phải nhân danh Chúa Cứu Thế Giê-xu chịu báp-tem để được tha tội. Rồi anh chị em sẽ nhận được Chúa Thánh Linh.
39 ೩೯ ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
Vì Chúa hứa ban Chúa Thánh Linh cho anh chị em và con cháu anh chị em, cho cả dân ngoại—tức những người mà Chúa là Đức Chúa Trời chúng ta kêu gọi.”
40 ೪೦ ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.
Phi-e-rơ tiếp tục giảng dạy, trình bày nhiều bằng chứng rồi khích lệ: “Anh chị em hãy thoát ly thế hệ gian tà này!”
41 ೪೧ ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
Nhiều người tiếp nhận lời Chúa và chịu báp-tem. Trong ngày đó có độ 3.000 người tin Chúa.
42 ೪೨ ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
Các tín hữu chuyên tâm vâng giữ lời dạy của các sứ đồ, thông công, và chia sẻ thức ăn (kể cả lễ bẻ bánh tưởng niệm Chúa), và cầu nguyện.
43 ೪೩ ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.
Mọi tín hữu đều kinh sợ vì các sứ đồ làm nhiều phép lạ và việc phi thường.
44 ೪೪ ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
Tất cả các tín hữu đều sát cánh nhau và góp tài sản làm của chung.
45 ೪೫ ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.
Họ bán của cải, sản nghiệp, rồi chia cho nhau theo nhu cầu mỗi người.
46 ೪೬ ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
Anh chị em tín hữu đồng tâm nhóm họp hằng ngày tại Đền Thờ, rồi về bẻ bánh tưởng niệm Chúa từ nhà này qua nhà khác, ăn chung với nhau cách vui vẻ, chân thành.
47 ೪೭ ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
Họ luôn ca ngợi Đức Chúa Trời và được mọi người quý mến. Mỗi ngày Chúa cứ tăng thêm số người được cứu.