< ಅಪೊಸ್ತಲರ ಕೃತ್ಯಗಳ 20 >
1 ೧ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.
Iar după ce a încetat tumultul, Pavel a chemat la el pe discipoli și i-a îmbrățișat și a ieșit să plece în Macedonia.
2 ೨ ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.
Iar după ce a traversat părțile acelea și i-a îndemnat cu multe cuvinte, a venit în Grecia,
3 ೩ ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.
Și a rămas trei luni. Și după ce iudeii au complotat împotriva lui, pe când intenționa să navigheze spre Siria, s-a hotărât să se întoarcă prin Macedonia.
4 ೪ ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.
Și l-au însoțit până în Asia, Sopater din Bereea; și dintre tesaloniceni, Aristarh și Secundus; și Gaiu din Derbe și Timotei; iar din Asia, Tihic și Trofim.
5 ೫ ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು
Aceștia, mergând înainte, ne-au așteptat în Troas.
6 ೬ ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.
Iar noi am navigat din Filipi după zilele azimelor și am venit la ei în Troas în cinci zile; unde am rămas șapte zile.
7 ೭ ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
Și în prima zi a săptămânii, când discipolii s-au adunat să frângă pâinea, Pavel le-a predicat, pregătit să plece a doua zi; și a continuat vorbirea până la miezul nopții.
8 ೮ ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
Și erau multe lumini în camera de sus, unde erau adunați.
9 ೯ ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
Și în fereastră a șezut un tânăr, unul numit Eutih, fiind cufundat într-un somn adânc; și pe când Pavel predica îndelung, s-a adâncit în somn și a căzut jos de la al treilea etaj și a fost ridicat mort.
10 ೧೦ ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.
Iar Pavel a coborât și s-a aplecat peste el și, îmbrățișându-l, a spus: Nu vă tulburați; fiindcă viața lui este în el.
11 ೧೧ ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
Și după ce a urcat din nou și a frânt pâine și a mâncat și a vorbit timp îndelungat, până în zorii zilei, astfel a plecat.
12 ೧೨ ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.
Și l-au adus pe tânăr viu și nu puțin au fost mângâiați.
13 ೧೩ ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.
Iar noi ne-am dus înainte la corabie și am navigat spre Assos, vrând să îl luăm de acolo pe Pavel; fiindcă astfel rânduise el, el însuși gândindu-se să meargă pe jos.
14 ೧೪ ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು.
Și când s-a întâlnit cu noi la Assos, l-am luat și am venit la Mitilene.
15 ೧೫ ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು.
Și de acolo am navigat și în următoarea zi am ajuns față în față cu Chios; și în următoarea zi am ajuns la Samos și am rămas la Troghilion și în următoarea zi am venit la Milet.
16 ೧೬ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
Fiindcă Pavel a decis să navigheze pe lângă Efes, pentru că el a refuzat să întârzie în Asia; fiindcă se grăbea, dacă i-ar fi posibil, ca el să fie la Ierusalim de ziua cincizecimii.
17 ೧೭ ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.
Iar din Milet a trimis la Efes și a chemat bătrânii bisericii.
18 ೧೮ ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
Și după ce au venit la el, le-a spus: Știți din prima zi de când am venit în Asia, cum m-am purtat cu voi în toate timpurile,
19 ೧೯ ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.
Servind pe Domnul cu toată umilința minții și cu multe lacrimi și ispite, care mi s-au întâmplat prin comploturile iudeilor;
20 ೨೦ ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ
Cum nu am ascuns nimic ce vă era de folos, ci v-am arătat și v-am învățat public și din casă în casă,
21 ೨೧ ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
Adeverind deopotrivă iudeilor și grecilor, pocăință față de Dumnezeu și credință față de Domnul nostru Isus Cristos.
22 ೨೨ ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.
Și acum, iată, eu mă duc, legat în duhul, la Ierusalim, neștiind lucrurile care au să mi se întâmple acolo,
23 ೨೩ ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.
Decât că Duhul Sfânt adeverește în fiecare cetate, spunând că mă așteaptă lanțuri și nenorociri.
24 ೨೪ ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
Dar niciunul dintre aceste lucruri nu mă mișcă, nici nu consider a mea viață de preț pentru mine însumi, așa încât să îmi termin alergarea cu bucurie și serviciul pe care l-am primit de la Domnul Isus, să adeveresc evanghelia harului lui Dumnezeu.
25 ೨೫ ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
Și acum, iată, eu știu că voi toți, printre care am umblat predicând împărăția lui Dumnezeu, nu îmi veți mai vedea fața.
26 ೨೬ ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.
De aceea vă iau ca mărturie în această zi, că eu sunt curat de sângele tuturor.
27 ೨೭ ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.
Fiindcă nu m-am ferit niciodată să vă fac cunoscut întregul sfat al lui Dumnezeu.
28 ೨೮ ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
Așadar luați seama la voi înșivă și la întreaga turmă peste care Duhul Sfânt v-a făcut supraveghetori, să pașteți biserica lui Dumnezeu, pe care a cumpărat-o cu propriul său sânge.
29 ೨೯ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.
Fiindcă știu aceasta, că după plecarea mea, vor intra printre voi lupi apăsători, necruțând turma.
30 ೩೦ ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
Și dintre voi înșivă se vor scula bărbați vorbind lucruri perverse, să atragă discipoli după ei.
31 ೩೧ ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
Vegheați așadar și amintiți-vă, că timp de trei ani nu am încetat să vă avertizez cu lacrimi, noapte și zi, pe fiecare.
32 ೩೨ ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
Și acum fraților, vă încredințez lui Dumnezeu și cuvântului harului său, care este în stare să vă edifice și să vă dea o moștenire printre toți cei sfințiți.
33 ೩೩ ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.
Nu am poftit argintul sau aurul sau hainele nimănui.
34 ೩೪ ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.
Da, voi înșivă știți că mâinile acestea au servit nevoilor mele și celor ce erau cu mine.
35 ೩೫ ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.
V-am arătat toate lucrurile; că, muncind astfel, ar trebui să susțineți pe cei slabi și să vă amintiți cuvintele Domnului Isus, cum el a spus: Este mai binecuvântat a da decât a primi.
36 ೩೬ ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.
Și după ce a vorbit astfel, el a îngenunchiat și s-a rugat cu ei toți.
37 ೩೭ ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.
Iar ei toți au plâns mult și au căzut la gâtul lui Pavel și îl sărutau,
38 ೩೮ ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.
Întristându-se mai ales pentru cuvintele pe care le-a spus, că nu îi vor mai vedea fața. Și l-au însoțit la corabie.