< ಅಪೊಸ್ತಲರ ಕೃತ್ಯಗಳ 21 >

1 ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್‍ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು.
Da muka rabu da su, muka shiga jirgin ruwa muka mike hanya zuwa birnin Kos, washegari sai birnin Rodusa, daga nan sai kuma zuwa birnin Batara.
2 ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು, ಅದರಲ್ಲಿ ಪ್ರಯಾಣವನ್ನು ಮುಂದುವರೆಸಿದೆವು.
Da muka sami jirgi mai hayewa zuwa Fonisiya sai muka shiga.
3 ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.
Da muka hango tsibirin Kubrus muka bar shi a hagun mu muka nufi Suriya, muka sauka a birnin Taya domin a nan ne jirgin ruwan zai sauke kayansa.
4 ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.
Bayan mun sami almajirai sai muka zauna can kwana bakwai. Al'majiran suka ce ma Bulus, ta wurin Ruhu, kada ma ya je Urushalima.
5 ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,
Bayan 'yan kwanaki muka cigaba da tafiyarmu. Dukansu da matansu da 'ya'yansu suka raka mu har bayan birnin. Sa'annan muka durkusa a bakin gacci muka yi addu'a muka yi sallama da juna.
6 ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು.
Sai muka shiga jirgin ruwa, su kuma suka koma gida.
7 ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,
Da muka gama tafiyarmu a Taya muka iso Talamayas. A nan ne muka gaisa da 'yan'uwa, muka zamna kwana daya da su.
8 ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.
Washegari muka tashi muka tafi Kaisariya. Muka shiga gidan Filibus mai shaida bishara, daya daga cikin bakwai din, muka zauna da shi.
9 ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.
Wannan mutum yana da 'ya'ya hudu mata, budurwai masu yin annabci.
10 ೧೦ ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು,
Sa'anda muka zauna can 'yan kwanaki, wani annabi ya zo daga Yahudiya mai suna Agabus.
11 ೧೧ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.
Ya zo wurinmu ya dauki damarar Bulus ya daure tasa kafar da hannayensa ya ce, “Ruhu Mai Tsarki ya ce, 'Haka Yahudawa za su daure mai wannan damarar, zasu kuma bashe shi ga al'ummai.'”
12 ೧೨ ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು.
Da muka ji wannan sakon, sai dukanmu da mazaunan wurin muka roki Bulus kada ya tafi Urushalima.
13 ೧೩ ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.
Sai Bulus ya amsa ya ce, “Me kuke yi, kuna kuka kuna karya mani zuciya? Bama a shirye don dauri kadai nake ba har ma da mutuwa a Urushalima, sabili da sunan Ubangiji Yesu.”
14 ೧೪ ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.
Tun da Bulus bashi da niyyar a rinjaye shi, muka daina kuka muka ce, “Bari nufin Ubangiji ya tabbata.”
15 ೧೫ ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು.
Bayan wadannan kwanaki, muka dauki jakkunanmu muka haura Urushalima.
16 ೧೬ ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.
Wadansu almjirai daga Kaisariya suka bi mu. Sun zo ne tare da wani ana ce da shi Manason, mutumin Kuburus mai bi na farko, wanda za mu zauna da shi.
17 ೧೭ ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು.
Da muka isa Urushalima, 'yan'uwa suka marabce mu da farin ciki.
18 ೧೮ ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.
Washegari Bulus ya tafi tare da mu zuwa wurin Bitrus, dukan dattawa kuma suna nan.
19 ೧೯ ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.
Bayan ya gaishe su, sai ya shaida masu daya bayan daya abubuwan da Allah ya yi cikin al'ummai ta wurin hidimarsa.
20 ೨೦ ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.
Da suka ji haka, suka yabi Ubangiji suka ce masa, “Ka gani, dan'uwa, dubban Yahudawa sun bada gaskiya suna kuma da niyyar kiyaye shari'a.
21 ೨೧ ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.
An kuma gaya masu a kanka cewa, kana koya wa Yahudawan da suke zaune cikin al'ummai su yi watsi da Musa. Kana koya masu kada su yi wa 'ya'yansu kaciya, kada kuma su bi tsofaffin al'adu.
22 ೨೨ ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು?
Me ya kamata mu yi? Hakika za su ji ka zo.
23 ೨೩ ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ.
Sabo da haka ka yi abin da muka fada maka yanzu. Muna da maza hudu da suka dauki wa'adi.
24 ೨೪ ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.
Tafi da wadannan ka tsarkake kanka tare da su, ka dauki dukan dawainiyar su dana askin kai. Ta haka kowanne mutum zai sani abubuwan da ake fadi a kanka karya ne. Za su sani cewa kai mai kiyaye shari'a ne.
25 ೨೫ ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ” ಎಂದು ಹೇಳಿದರು.
Game da al'umman da suka bada gaskiya mun yi masu wasika, mun bada umarni su kaurace kansu daga sadakokin da aka mika wa gumaku, da jini, da abin da aka makare da kuma fasikanci.
26 ೨೬ ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
Sai Bulus ya dauki mazannan, washegari ya tsarkake kansa tare da su, suka shiga haikali, domin ya sanar da cikar ranakun tsarkakewarsu, wato ranar ba da sadaka domin kowanne dayansu.
27 ೨೭ ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;
Da kwanakin nan bakwai suka yi gab da cika, wadansu Yahudawa daga Asiya suka ga Bulus a haikali, sai suka zuga taro, suka danke shi.
28 ೨೮ “ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.
Suna ta kururuwa, “Mutanen Isra'ila ku taimaka mana. Wannan shine mutumin da ke koya wa dukan mutane ko'ina abubuwa gaba da mutane, da shari'a da kuma wannan wurin. Banda haka ya kawo Helenawa cikin haikalin nan ya kazantar da wannan wuri tsatsarka.”
29 ೨೯ ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.
Domin dama sun ga Tarofimas mutumin Afisa tare da Bulus cikin birni, suka yi zaton ya kawo shi cikin haikali.
30 ೩೦ ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.
Sai duk gari ya rude, mutane suka runtuma suka danke Bulus. Suka ja shi waje daga cikin haikalin, nan da nan aka rufe kofofin.
31 ೩೧ ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.
Suna kokarin kashe shi kenan, sai labari ya kai wurin hafsan sojoji cewa Urushalima duk ta yamutse da tarzoma.
32 ೩೨ ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.
Nan take ya dauki mayaka da jarumawa, suka sheka da gudu wurin taron. Da mutane suka ga hafsan sojoji da rundunansa sai suka daina dukan Bulus.
33 ೩೩ ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
Sai hafsan ya tafi ya danke Bulus ya sa aka daure shi da sarkoki biyu. Ya tambaya ko shi wanene da kuma laifinsa.
34 ೩೪ ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.
Wadansu cikin taron suna ta kururuwa wadansu su ce wannan, wadansu su ce, wancan. Tunda hafsan bai fahimci abin da suke fadi ba, sabo da ihunsu, ya dokaci a shigar da Bulus farfajiyar sojoji.
35 ೩೫ ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.
Da suka kai matakala, sojoji suka dauki Bulus sabo da tsananin husatar taron jama'a.
36 ೩೬ ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; “ಅವನನ್ನು ಕೊಲ್ಲಿರಿ” ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು.
Domin taron suka biyo baya suna ihu suna cewa, “A kashe shi.”
37 ೩೭ ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ”? ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ?
An kusa shigar da shi farfajiyan kenan sai Bulus ya ce wa babban hafsan, “Ko ka yarda inyi magana da kai?” Hafsan ya ce, “Ka iya Helenanci?
38 ೩೮ ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.
Ashe ba kai ne Bamasaren nan da kwanakin baya ka haddasa tawaye, ka dauki 'yan ta'adda dubu hudu ka kai su jeji ba?”
39 ೩೯ ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
Bulus ya ce, “Ni Ba'ibrane ne daga birnin Tarsus a Kilikiya. Ni dan kasar babban birni ne. Ka amince mani in yi magana da mutanen.”
40 ೪೦ ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,
Da hafsan ya bashi izni, Bulus ya mike a kan matakala ya daga hannayensa sama ya yi nuni su yi shuru. Da wuri ya yi tsit, Bulus ya yi masu magana da Ibraniyanci. Ya ce,

< ಅಪೊಸ್ತಲರ ಕೃತ್ಯಗಳ 21 >