< ಅಪೊಸ್ತಲರ ಕೃತ್ಯಗಳ 23 >
1 ೧ ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.
Paul in sanhedrin te tangtak in en a, u le nau te awng, tu ni dong Pathian mai ah sia le pha khentel theina thinsung pha taw ka nungta hi.
2 ೨ ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;
Taciang thiampi sang Ananias in Paul hui ah ding a, Paul i muk pan sat tu in thupia hi.
3 ೩ “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು.
Tua zawkciang in Paul in, nang a ngo ki zut pangpi, Pathian in hong sat tu hi: banghangziam cile thukham bang in thukhen tu in to napi, banghang thukham taw ki lebul in keima sat tu in thu pia ni ziam? ci hi.
4 ೪ ಹತ್ತಿರ ನಿಂತಿದ್ದವರು; “ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ?” ಅನ್ನಲು,
Taciang Paul hui ah a ding te in, Pathian i thiampi sang thusimngawl ni ziam? ci uh hi.
5 ೫ ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.
Tua zawkciang in Paul in, suapui te awng, ama sia thiampi sang hi, ci ka he bua hi: banghangziam cile, na mihing lampui te phatngawlna kampau heak in, ci in ki atsa om hi, ci hi.
6 ೬ ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.
Ahihang Paul in pawlkhat te sia Saducee te hi a, a dang te sia Pharisee te hi, ci a heak ciang in, sanhedrin te sung ah, u le nau te awng, keima sia Pharisee ka hihi, Pharisee i tapa ka hihi: mithi te lametna le thawkikna thu dong tu in hongsam uh hi, ci au hi.
7 ೭ ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.
Tabang in a son zawkciang in, Pharisee te le Saducee te ki laklaw ah ki thusik ngawl na hong om a: mihonpi kikhen siat hi.
8 ೮ ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.
Banghangziam cile Saducee te in thawkikna, vantungmi le thaa om ngawl hi ci uh hi: ahihang Pharisee te in a vekpi in om hi, ci uh hi.
9 ೯ ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.
Nasiatak in au ngawp uh hi: taciang Pharisee te sung pan in thukhamhil te hong ding uh a, hisia pa sia a phatngawlna ka mu bua uh hi: ahihang thaa a hibale, vantungmi in paupui ahile, Pathian i do batu hi, ci in nasiatak in nial uh hi.
10 ೧೦ ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
A thu kisik ngawlna a nasiat seseam ciang in, tulkhat uk ngalkap mangpa in, Paul sia amate in a laithap tu uh lau ahikom, ngalkap te tuaksuk in, amate sung pan lakeak tu le, ngalkap inn huang sung ah paipui tu in thupia hi.
11 ೧೧ ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.
Taciang a zingzan ciang in Topa sia paul kung ah ding a, Paul, hangsantak in om in: banghangziam cile Jerusalem ah keima thu tetti na pan bang in, Rome ah zong pang hamtang tu ni hi, ci hi.
12 ೧೨ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.
A zingsang ciang in, Judah mi pawlkhat te ki kaikhawm uh a, Paul a thalup mateng, an ne ngawl le tui dawn ngawl tu, ci in kiciam na vawt uh hi.
13 ೧೩ ಹೀಗೆ ಮಾಡಿದವರು ನಲವತ್ತು ಮಂದಿಗಿಂತ ಹೆಚ್ಚಾಗಿದ್ದರು.
Hi kiciamna a vawt te sia mihing sawmli val pha uh hi.
14 ೧೪ ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.
Taciang amate thiampi lian te le ulian te kung ah pai uh a, Paul ka thalup uh mateng bangma ne ngawl tu in kiciamna lianpi ka vawt zo uh hi, ci uh hi.
15 ೧೫ ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.
Tua ahikom tu in, noma le sanhedrin te in tulkhat uk ngalkap mangpa kung ah, Paul thu a kicingzaw dong tu bang in na kung ah a zingciang hong paipui tu in son vun: taciang kote in, a nai na pan, that tu in ka kinging khol tu uh hi, ci uh hi.
16 ೧೬ ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.
Taciang amate in tabang in suam tu a ngeal khop uh sia Paul i nau nu i tapa in a zak ciang in, ngalkap inn huang sung ah tum a, Paul tung ah son hi.
17 ೧೭ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.
Tua zawkciang in Paul in zakhat uk ngalkap mangpa te sung pan khat a kung ah sam a, hi tangvalpa tulkhat uk ngalkap mangpa kung ah paipui tu in son hi: banghangziam cile ama in tulkhat uk ngalkap mangpa tung sonnop nei hi, ci hi.
18 ೧೮ ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,
Tua ahikom tua ngalkap mangpa in tangvalpa sia tulkhat uk ngalkap mangpa kung ah paipui a, thongtak pa Paul in keima hong sam hi, taciang na kung ah thuson tu a nei hi tangvalpa paipui tu in hong ngen hi, ci hi.
19 ೧೯ ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.
Tua zawkciang in tulkhat uk ngalkap mangpa in tangvalpa a khut pan len a, a tuam in paipui hi, taciang bang hong son nuam ni ziam? ci in dong hi.
20 ೨೦ ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.
Tangvalpa in, Judah mite in Paul thu a cingzaw dong tu bang in zingciang sanhedrin te kung ah paipui tu in hong ngen tu ci in, lungkim zo uh hi.
21 ೨೧ ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.
Ahihang amate thu zui heak in: banghangziam cile mihing sawmli val in Paul suam nuam in pang uh hi, Paul a thalup uh mateng an ne ngawl le tui dawn ngawl tu in, kiciamna nei zo uh hi: taciang, amate sia nangma tung pan kamciam ngak in kinging khol in om uh hi, ci hi.
22 ೨೨ ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.
Tua ahikom tulkhat uk ngalkap mangpa in tangval pa kung ah, hi thu te nong son sia kuama tung son heak in, ci in vaitha a, ciasak hi.
23 ೨೩ ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”
Taciang ama in zakhat uk ngalkap mangpa sam a, ngalkap za ni, siphu ngalkap sawm sali le teipi ngalkap za ni te tu zan nai kua in Caesarea pai tu in kinging khol vun;
24 ೨೪ ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.
Paul i to tu nganhing te zong vaihawmsak vun a, taciang ngam uk Felix tung ah bangma tat ngawl in puak vun, ci hi.
25 ೨೫ ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನೆಂದರೆ;
Taciang hibang in laithak at hi:
26 ೨೬ “ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
Claudius Lysias in a phabel ngam uk Felix tung ah paupuina lai kong thak hi.
27 ೨೭ ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
Hisia pa sia Judah te in man uh a, a thalup tu uh hi napi: Rome mi hi, ci ka he a, ngalkap te taw pai in ka hun hi.
28 ೨೮ ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.
Taciang amate i mawsiat na thu ka heak nop hu in sanhedrin te kung ah ka paipui hi:
29 ೨೯ ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
Ama a mawsiatna uh sia amate thukham thu ki dokna te hi, ci ka he hi, ahihang thina tak le thongtak khop tu mawna bangma nei ngawl hi.
30 ೩೦ ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.
Taciang Judah mite in hisia pa suam sawm tawntung uh hi, ci thu hong ki son pociang in, na kung ah hong puak khi hi, taciang a mawsiat te zong nangma mai ah son tu in thu ka pia hi, Na dam ta in, ci hi.
31 ೩೧ ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.
Tua zawkciang in ngalkap te zong thupiakna bang in Paul la uh a, Antipatris ah zan ciang in paipui uh hi.
32 ೩೨ ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.
A zingciang in siphu ngalkap te sia ama taw pai tu in nusia a, a dang te ngalkap huang sung ah heakkik uh hi:
33 ೩೩ ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.
Caesaria a thet uh ciang in, laithak sia ngam uk pa tung ah ap uh a, Paul zong a mai ah ap uh hi.
34 ೩೪ ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;
Ngam uk pa in laithak a sim zawkciang, koisung pan ziam, ci in dong hi, Taciang Caesaria pan hi, ci a heak ciang in;
35 ೩೫ “ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.
Nangma hong mawsiat te hong thet ciang in, na thu ka ngai kik tu hi, ci hi. Taciang Herod i thukhen mun innpi sung ah keam tu in thupia hi.