< ಅಪೊಸ್ತಲರ ಕೃತ್ಯಗಳ 25 >

1 ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
Festus tehát, miután bement a tartományba, három nap mulva felméne Jeruzsálembe Czézáreából.
2 ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ,
Panaszt tőnek pedig néki a főpap és a zsidók főemberei Pál ellen, és kérék őt,
3 ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.
Kérvén magok számára jóindulatát ő ellene, hogy hozassa át őt Jeruzsálembe, lest vetvén, hogy megölhessék őt az úton.
4 ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.
Festus azonban azt felelé, hogy Pált Czézáreában őrzik, ő maga pedig csakhamar ki fog menni:
5 ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.
A kik azért köztetek, úgymond, főemberek, velem alájővén, ha valami gonoszság van abban a férfiúban, emeljenek vádat ellene.
6 ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.
Miután pedig tíz napnál tovább időzött közöttük, lemenvén Czézáreába, másnap ítélőszékibe üle, és Pált előhozatá.
7 ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,
Mikor pedig az megjelent, körülállák a zsidók, kik alámentek vala Jeruzsálemből, sok és súlyos vádat hozván fel Pál ellen, melyeket nem bírtak bebizonyítani;
8 ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.
Mivelhogy ő a maga mentségére ezt feleli vala: Sem a zsidók törvénye ellen, sem a templom ellen, sem a császár ellen semmit sem vétettem.
9 ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;
Festus pedig a zsidóknak kedveskedni akarván, felelvén Pálnak, monda: Akarsz-é Jeruzsálembe felmenni és ott ítéltetni meg ezekről én előttem?
10 ೧೦ “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
Pál azonban monda: A császár ítélőszéke előtt állok, itt kell nékem megítéltetnem. A zsidóknak semmit sem vétettem, miként te is jól tudod.
11 ೧೧ ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.
Mert ha vétkes vagyok és valami halálra méltót cselekedtem, nem vonakodom a haláltól; ha azonban semmi sincs azokban, a mikkel ezek vádolnak engem, senki sem ajándékozhat oda engem azoknak. A császárra appellálok!
12 ೧೨ ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.
Akkor Festus tanácsával értekezvén, felele: A császárra appelláltál, a császár elé fogsz menni!
13 ೧೩ ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.
Néhány nap elmúltával pedig Agrippa király és Bernicé érkezék Czézáreába, hogy köszöntsék Festust.
14 ೧೪ ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.
Mikor pedig több napig időztek ott, Festus elébe adá a királynak a Pál dolgát, mondván: Van itt egy férfiú, kit Félix hagyott fogva.
15 ೧೫ ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.
Ki felől, mikor Jeruzsálembe mentem, jelentést tőnek a főpapok és a zsidóknak vénei, kérve ő ellene ítéletet.
16 ೧೬ “ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.
Kiknek azt felelém, hogy nem szokásuk a rómaiaknak, hogy valamely embert halálra adjanak, mielőtt a vádlott szembe nem állíttatik vádlóival, és alkalmat nem nyer a vád felől való mentségére.
17 ೧೭ ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.
Mikor azért ők ide gyűltek, minden haladék nélkül másnap az ítélőszékbe ülvén, előhozatám azt a férfiút,
18 ೧೮ ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,
Ki ellen, mikor vádlói előálltak, semmi bűnt nem hoztak fel azok közül, a miket én sejtettem:
19 ೧೯ ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
Hanem valami vitás kérdéseik valának ő vele az ő tulajdon babonaságuk felől, és bizonyos megholt Jézus felől, kiről Pál azt állítja vala, hogy él.
20 ೨೦ ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.
Én pedig bizonytalanságban lévén az e felől való vitára nézve, kérdém, vajjon akar-é Jeruzsálembe menni, és ott ítéltetni meg ezek felől.
21 ೨೧ ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
Pál azonban appellálván, hogy ő Augustus döntésére tartassék fenn, parancsolám, hogy tartassék fogva, míg őt a császárhoz nem küldhetem.
22 ೨೨ ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.
Agrippa pedig monda Festusnak: Szeretném magam is azt az embert hallani. Ő pedig monda: Holnap meg fogod őt hallani.
23 ೨೩ ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.
Másnap tehát eljővén Agrippa és Bernicé nagy pompával, és bemenvén a kihallgatási terembe az ezredesekkel és a város főfőpolgáraival együtt, Festus parancsolatjára előhozák Pált.
24 ೨೪ ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.
És monda Festus: Agrippa király, és ti férfiak mindnyájan, kik velünk egybe itt vagytok! Látjátok őt, ki felől a zsidóknak egész sokasága megkeresett engem, mind Jeruzsálemben, mind itt, azt kiáltva, hogy nem kell néki tovább élnie.
25 ೨೫ ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.
Én pedig, ámbár megértém, hogy semmi halálra méltó dolgot sem cselekedett, de mivel éppen ő maga appellált Augustusra, elvégeztem, hogy elküldöm őt.
26 ೨೬ ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.
Ki felől nem tudok valami bizonyost írni az én uramnak. Ezért hoztam őt előtökbe, és kiváltképen te elődbe, Agrippa király, hogy a kihallgatás megtörténtével tudjak mit írni.
27 ೨೭ ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.
Mert esztelen dolognak látszik nékem, hogy a ki foglyot küld, az ellene való vádakat is meg ne jelentse.

< ಅಪೊಸ್ತಲರ ಕೃತ್ಯಗಳ 25 >