< ಅಪೊಸ್ತಲರ ಕೃತ್ಯಗಳ 26 >
1 ೧ ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;
Agrippa vero ad Paulum ait: Permittitur tibi loqui pro temetipso. Tunc Paulus extenta manu coepit rationem reddere.
2 ೨ “ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
De omnibus, quibus accusor a Iudaeis, rex Agrippa, aestimo me beatum apud te, cum sim defensurus me hodie,
3 ೩ ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.
maxime te sciente omnia, et quae apud Iudaeos sunt consuetudines, et quaestiones: propter quod obsecro patienter me audias.
4 ೪ “ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.
Et quidem vitam meam a iuventute, quae ab initio fuit in gente mea in Ierosolymis, noverunt omnes Iudaei:
5 ೫ ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.
praescientes me ab initio (si velint testimonium perhibere) quoniam secundum certissimam sectam nostrae religionis vixi Pharisaeus.
6 ೬ ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.
Et nunc in spe, quae ad patres nostros repromissionis facta est a Deo, sto iudicio subiectus:
7 ೭ ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
in quam duodecim tribus nostrae nocte ac die deservientes, sperant devenire. De qua spe accusor a Iudaeis, rex.
8 ೮ ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?
Quid incredibile iudicatur apud vos, si Deus mortuos suscitat?
9 ೯ ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.
Et ego quidem existimaveram, me adversus nomen Iesu Nazareni debere multa contraria agere.
10 ೧೦ ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.
quod et feci Ierosolymis, et multos sanctorum ego in carceribus inclusi, a principibus sacerdotum potestate accepta: et cum occiderentur, detuli sententiam.
11 ೧೧ ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.
Et per omnes synagogas frequenter puniens eos, compellebam blasphemare: et amplius insaniens in eos, persequebar usque in exteras civitates.
12 ೧೨ ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,
In quibus dum irem Damascum cum potestate, et permissu principum sacerdotum,
13 ೧೩ ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.
die media in via, vidi, rex, de caelo supra splendorem solis circumfulsisse me lumen, et eos, qui mecum simul erant.
14 ೧೪ ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.
Omnesque nos cum decidissemus in terram, audivi vocem loquentem mihi Hebraica lingua: Saule, Saule, quid me persequeris? durum est tibi contra stimulum calcitrare.
15 ೧೫ ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‘ನೀನು ಹಿಂಸೆಪಡಿಸುವ ಯೇಸುವೇ ನಾನು.
Ego autem dixi: Quis es Domine? Dominus autem dixit: Ego sum Iesus, quem tu persequeris.
16 ೧೬ ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.
Sed exurge, et sta super pedes tuos: ad hoc enim apparui tibi, ut constituam te ministrum, et testem eorum, quae vidisti, et eorum, quibus apparebo tibi,
17 ೧೭ ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು.
eripiens te de populis, et gentibus, in quas nunc ego mitto te,
18 ೧೮ ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.
aperire oculos eorum, ut convertantur a tenebris ad lucem, et de potestate satanae ad Deum, ut accipiant remissionem peccatorum, et sortem inter sanctos per fidem, quae est in me.
19 ೧೯ ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,
Unde rex Agrippa, non fui incredulus caelesti visioni:
20 ೨೦ ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
sed his, qui sunt Damasci primum, et Ierosolymis, et in omnem regionem Iudaeae, et Gentibus annunciabam, ut poenitentiam agerent, et converterentur ad Deum, digna poenitentiae opera facientes.
21 ೨೧ ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು.
Hac ex causa me Iudaei, cum essem in templo, comprehensum tentabant interficere.
22 ೨೨ ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
Auxilio autem adiutus Dei usque in hodiernum diem sto, testificans minori, atque maiori, nihil extra dicens quam ea, quae Prophetae locuti sunt futura esse, et Moyses,
23 ೨೩ ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.
si passibilis Christus, si primus ex resurrectione mortuorum, lumen annunciaturus est populo, et Gentibus.
24 ೨೪ ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.
Haec loquente eo, et rationem reddente, Festus magna voce dixit: Insanis Paule: multae te litterae ad insaniam convertunt.
25 ೨೫ ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.
Et Paulus: Non insanio (inquit) optime Feste, sed veritatis, et sobrietatis verba loquor.
26 ೨೬ ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.
Scit enim de his rex, ad quem et constanter loquor: latere enim eum nihil horum arbitror. Neque enim in angulo quidquam horum gestum est.
27 ೨೭ ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು.
Credis rex Agrippa prophetis? Scio quia credis.
28 ೨೮ ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು
Agrippa autem ad Paulum: In modico suades me Christianum fieri.
29 ೨೯ ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.
Et Paulus: Opto apud Deum, et in modico, et in magno, non tantum te, sed etiam omnes, qui audiunt, hodie fieri tales, qualis et ego sum, exceptis vinculis his.
30 ೩೦ ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;
Et exurrexit rex, et praeses, et Bernice, et qui assidebant eis.
31 ೩೧ “ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
Et cum secessissent, loquebantur ad invicem, dicentes: Quia nihil morte, aut vinculis dignum quid fecit homo iste.
32 ೩೨ ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.
Agrippa autem Festo dixit: Dimitti poterat homo hic, si non appellasset Caesarem.