< ಅಪೊಸ್ತಲರ ಕೃತ್ಯಗಳ 27 >
1 ೧ ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.
Als es aber beschlossen war, daß wir nach Italien absegeln sollten, überlieferten sie den Paulus und etliche andere Gefangene einem Hauptmann, mit Namen Julius, von der Schar des Augustus.
2 ೨ ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
Als wir aber in ein adramyttisches Schiff gestiegen waren, das im Begriff stand, die Orte längs der Küste Asiens zu befahren, fuhren wir ab; und es war bei uns Aristarchus, ein Macedonier aus Thessalonich.
3 ೩ ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.
Und des anderen Tages legten wir zu Sidon an. Und Julius behandelte den Paulus sehr wohlwollend und erlaubte ihm, zu den Freunden zu gehen, um ihrer Fürsorge teilhaftig zu werden.
4 ೪ ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,
Und von da fuhren wir ab und segelten unter Cypern hin, weil die Winde uns entgegen waren.
5 ೫ ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.
Und als wir das Meer von Cilicien und Pamphylien durchsegelt hatten, kamen wir nach Myra in Lycien;
6 ೬ ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.
und als der Hauptmann daselbst ein alexandrinisches Schiff fand, das nach Italien segelte, brachte er uns auf dasselbe.
7 ೭ ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,
Als wir aber viele Tage langsam segelten und mit Mühe gen Knidus gekommen waren, segelten wir, da uns der Wind nicht heranließ, unter Kreta hin, gegen Salmone;
8 ೮ ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.
und als wir mit Mühe an ihr [d. h. an der Insel Kreta] dahinfuhren, kamen wir an einen gewissen Ort, Schönhafen genannt, in dessen Nähe die Stadt Lasea war.
9 ೯ ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
Da aber viel Zeit verflossen und die Fahrt schon unsicher war, weil auch die Fasten schon vorüber waren, ermahnte Paulus
10 ೧೦ “ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು.
und sprach zu ihnen: Männer, ich sehe, daß die Fahrt mit Ungemach und großem Schaden, nicht nur der Ladung und des Schiffes, sondern auch unseres Lebens geschehen wird.
11 ೧೧ ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.
Der Hauptmann aber glaubte dem Steuermann und dem Schiffsherrn mehr als dem von Paulus Gesagten.
12 ೧೨ ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.
Da aber der Hafen zum Überwintern ungeeignet war, rieten die meisten dazu, von dort abzufahren, ob sie etwa nach Phönix zu gelangen und dort zu überwintern vermöchten, einem Hafen von Kreta, der gegen Nordost und gegen Südost [And. üb.: gegen Südwest und gegen Nordwest] sieht.
13 ೧೩ ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.
Als aber ein Südwind sanft wehte, meinten sie ihren Vorsatz erreicht zu haben, lichteten die Anker und fuhren dicht an Kreta hin.
14 ೧೪ ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನ್ಯ ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು.
Aber nicht lange danach erhob sich von Kreta [W. von derselben] her ein Sturmwind, Euroklydon genannt.
15 ೧೫ ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.
Als aber das Schiff mit fortgerissen wurde und dem Winde nicht zu widerstehen vermochte, gaben wir uns [O. es] preis und trieben dahin.
16 ೧೬ ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.
Als wir aber unter einer gewissen kleinen Insel, Klauda genannt, hinliefen, vermochten wir kaum des Bootes mächtig zu werden.
17 ೧೭ ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.
Dieses zogen sie herauf und bedienten sich der Schutzmittel, indem sie das Schiff umgürteten; und da sie fürchteten, in die Syrte [eine wegen ihrer Untiefen und Sandbänke gefürchtete Bucht an der afrikanischen Küste] verschlagen zu werden, ließen sie das Takelwerk [O. Segelwerk] nieder und trieben also dahin.
18 ೧೮ ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.
Indem wir aber sehr vom Sturme litten, machten sie des folgenden Tages einen Auswurf; [d. h. sie warfen einen Teil der Schiffsladung über Bord]
19 ೧೯ ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.
und am dritten Tage warfen sie mit eigenen Händen das Schiffsgerät fort.
20 ೨೦ ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.
Da aber viele Tage lang weder Sonne noch Sterne schienen und ein nicht geringes Unwetter auf uns lag, war zuletzt alle Hoffnung auf unsere Rettung entschwunden.
21 ೨೧ ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.
Und als man lange Zeit ohne Speise geblieben war, da stand Paulus in ihrer Mitte auf und sprach: O Männer! man hätte mir freilich gehorchen und nicht von Kreta abfahren und dieses Ungemach und den Schaden nicht ernten sollen.
22 ೨೨ ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.
Und jetzt ermahne ich euch, gutes Mutes zu sein, denn kein Leben von euch wird verloren gehen, nur das Schiff.
23 ೨೩ ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
Denn ein Engel des Gottes, dessen ich bin und dem ich diene, stand in dieser Nacht bei mir
24 ೨೪ ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
und sprach: Fürchte dich nicht, Paulus! du mußt vor den Kaiser gestellt werden; und siehe, Gott hat dir alle geschenkt, die mit dir fahren.
25 ೨೫ ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.
Deshalb seid gutes Mutes, ihr Männer! denn ich vertraue Gott, daß es so sein wird, wie zu mir geredet worden ist.
26 ೨೬ ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ” ಎಂದು ಹೇಳಿದನು.
Wir müssen aber auf eine gewisse Insel verschlagen werden.
27 ೨೭ ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ,
Als aber die vierzehnte Nacht gekommen war, und wir in dem Adriatischen Meere umhertrieben, meinten gegen Mitternacht die Matrosen, daß sich ihnen ein Land nahe.
28 ೨೮ ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.
Und als sie das Senkblei ausgeworfen hatten, fanden sie zwanzig Faden; nachdem sie aber ein wenig weiter gefahren waren und das Senkblei wiederum ausgeworfen hatten, fanden sie fünfzehn Faden.
29 ೨೯ ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.
Und indem sie fürchteten, wir möchten etwa auf felsige Orte verschlagen werden, warfen sie vom Hinterteil vier Anker aus und wünschten, daß es Tag würde.
30 ೩೦ ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,
Als aber die Matrosen aus dem Schiffe zu fliehen suchten und das Boot unter dem Vorwande, als wollten sie vom Vorderteil Anker auswerfen, in das Meer hinabließen,
31 ೩೧ ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.
sprach Paulus zu dem Hauptmann und den Kriegsleuten: Wenn diese nicht im Schiffe bleiben, könnt ihr nicht gerettet werden.
32 ೩೨ ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
Dann hieben die Kriegsleute die Taue des Bootes ab und ließen es hinabfallen.
33 ೩೩ ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.
Als es aber Tag werden wollte, ermahnte Paulus alle, Speise zu nehmen, und sprach: Heute ist der vierzehnte Tag, daß ihr zuwartend ohne Essen geblieben seid, indem ihr nichts zu euch genommen habt.
34 ೩೪ ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,
Deshalb ermahne ich euch, Speise zu nehmen, denn dies gehört zu eurer Erhaltung; [O. Rettung] denn keinem von euch wird ein Haar des Hauptes verloren gehen.
35 ೩೫ ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.
Und als er dies gesagt und Brot genommen hatte, dankte er Gott vor allen, und als er es gebrochen hatte, begann er zu essen.
36 ೩೬ ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.
Alle aber, gutes Mutes geworden, nahmen auch selbst Speise zu sich.
37 ೩೭ ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು.
Wir waren aber in dem Schiffe, alle Seelen, zweihundertsechsundsiebzig.
38 ೩೮ ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.
Als sie sich aber mit Speise gesättigt hatten, erleichterten sie das Schiff, indem sie den Weizen in das Meer warfen.
39 ೩೯ ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.
Als es aber Tag wurde, erkannten sie das Land nicht; sie bemerkten aber einen gewissen Meerbusen, der einen Strand hatte, auf welchen sie, wenn möglich, das Schiff zu treiben gedachten.
40 ೪೦ ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.
Und als sie die Anker gekappt hatten, ließen sie sie im Meere und machten zugleich die Bande der Steuerruder los und hißten das Vordersegel vor den Wind und hielten auf den Strand zu.
41 ೪೧ ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.
Da sie aber auf eine Landzunge gerieten, ließen sie das Schiff stranden; und das Vorderteil saß fest und blieb unbeweglich, das Hinterteil aber wurde von der Gewalt der Wellen zerschellt.
42 ೪೨ ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.
Der Kriegsknechte Rat [O. Plan, Absicht] aber war, daß sie die Gefangenen töten sollten, damit nicht jemand fortschwimmen und entfliehen möchte.
43 ೪೩ ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,
Der Hauptmann aber, der den Paulus retten wollte, hinderte sie an ihrem Vorhaben und befahl, daß diejenigen, welche schwimmen könnten, sich zuerst hinabwerfen und an das Land gehen sollten;
44 ೪೪ ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.
und die übrigen teils auf Brettern, teils auf Stücken vom Schiffe. Und also geschah es, daß alle an das Land gerettet wurden.