< ಅಪೊಸ್ತಲರ ಕೃತ್ಯಗಳ 28 >
1 ೧ ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು.
Fiya cuwo nya yilau kwamere, nyan nuwa den diiyele cuwa ki malta.
2 ೨ ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
Nubo mwan loro cuwa nung yinen luma nerek cin nuwa nyinen kira, cin yuwo nyo gwam ker mwemer kange cwuii ngir-ngireu.
3 ೩ ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು.
La Bulus mwer bwatiye yo ti kirari, kwentibe ceru, wori kirako cwillen cakkan cinen ti kang.
4 ೪ ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
La nubo mwan loro cuwo to na cuwe yayim kang cek ri, ci tokkangti bwitici ki, “Nii wo nii twal nob ti ci cuku mor bware caji. Kero dong dongeu ciyabo nii a buuti.”
5 ೫ ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.
La con waciken na cuwe kira, kii cobo.
6 ೬ ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ” ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು.
Ci nintanti na ci to bwici fum, ki kwirum bwi na yarke bitine na bwiyam. La cin to co fiya kutangi, cin tobo diker fiya cobo di, cin fulongum ner cero, cin yi ki con bwel.
7 ೭ ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.
La bi dom kange fiye cuwe, take kange wi na nii durece diiyele cuwa, wo ci cuwo ti Babiliya yuwo nyo, ki luma nerek, tam nyo na kume taar ce.
8 ೮ ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.
La te Babiliya cokkati kiwirum bwi kange teka fiya cuwa Bulus ya cinnen kwob cinen dilo, cin yoti kang dor cer con twam co.
9 ೯ ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು.
Bwiko dike woro bwiyeu tangne nube yim diile diile wuro nen nuba. Luma cin bou ken cin twam ci.
10 ೧೦ ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.
Nubo wuro ne nyo dur ti ki dur. La nyon ka bati yamtiri, cin ne nyo dike nyo cwitiyeu.
11 ೧೧ ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.
Bwiko cwak ko taare nyong kwen yambo ki nabire mwenge wo ma tirako wiiye, nsbire Alexandriya, ki bwel do yob ci ywellum tikab dore cike.
12 ೧೨ ನಾವು ಸುರಕೂಸಿಗೆ ತಲುಪಿ ಅಲ್ಲಿ ಮೂರು ದಿನ ತಂಗಿದೆವು.
Bwiko nya yiram cinanr lor ciranku nyon yim wii kume taar.
13 ೧೩ ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.
Wii ri nyon yaken cinan lor Rigiyum ki kume wiin di, yuwa ko bangeu kwenu, la mor kume yobeu nyin lam cinan lor, Butiyoli,
14 ೧೪ ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.
Nyon fiya yitub nyebo kange wii, cin cuwo nyong yii kange ci kume niber, nure wo nya yaken Roma.
15 ೧೫ ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.
Nyo firen di yitub nyebo nuwa fulen nyero cin ceru cin yuwo nyo, tati fiye miyeka dike Abiya kange bituk taar. La Bitrus to yitubori, con fiya bikwan neret.
16 ೧೬ ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.
Kambo nya doken Roma ri, cin dob Bitrus na yi ki kwace kange nii kwene wo to co tiye.
17 ೧೭ ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.
Ki kume taar di Bulus cuwo nubo wuro na dur mor Yahudawa. La cin bou ri, con yiki, “yitub me, ma mabo nob nen dikero bwir kaka, dike ka ciya cike wo tembebo ceu, cin taye. Bwiko cin me ya, ci cwiti naci nyam kang minen ci fiya yebo ki bwirangke wo lam twalka.
18 ೧೮ ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.
Kambo cii merang ye kereri, cin cwi na cin nyemkan minen, wori ci fiya yebo ki bwirang ker wo lam ciya twalye tiye.
19 ೧೯ ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.
La Yahudawa tok diker cwika nerek ciyeu, cin dok ye, ya ki kiyange kaisar nin, muni bou ki kiyange bitineu.
20 ೨೦ ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
Dor kerero wo ma cuwo kom na to kom na yi kom. Nyo neri Israila ci bwam yere.
21 ೨೧ ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.
La cin yi co “nya yuwobo tomange kange Yahudawa dor mwer kaka kange yitubo bou bo nyi nyo dikero bwir dor mwer.
22 ೨೨ ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.
Nyo wcii na yi nuwa muneng ye mo kwatiye dor mwan nibero wo, wori nyon nyimom dike wuro cin toki fiye gwam.
23 ೨೩ ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
cin yo cinen kakuko, nubo ducce bou fiye ci yim wiye con yi ci dikero gwam, con yi cerka liyar kwama, con ken ci dor Yesu ter ti ki Musa ya ciko nob tomangeb ki buri mee doti.
24 ೨೪ ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.
Kangum bo ciya dike co tokkeu, kangumbo ne bo bilenke.
25 ೨೫ ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ
La cin ciya kambo kange butici, Bwiko Bulus dim kere di cin cu. “Yuwa tangbeko wusakke tok ker nyii Ishaya nii tomange teb kimeb bo nin.
26 ೨೬ ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
Yi ki “ya nubo wuro nen, na yi ci,” ki nuwaka, kan nuwa, la ma ka nyomti, ki toka kan to, maka nyomti.
27 ೨೭ ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.
wori ner nibero wuro kuci, ki tuci, bwai naci nuwa, cin kumom nuwe ciye, naci tore ki nuwe ciye, ci nuwa ki tu ci nyimom ki ner cer, na ci yilau na twam ci.
28 ೨೮ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.
Nyori kon nyimom fuloka kwamako, cin ya nubo nyumbo kwama, ciya nuwa.
29 ೨೯ ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು.
La co tokum dike buro di yahudawau kweni, cu lor ki kwobkanka ko dur more ciye.
30 ೩೦ ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.
Bulus yii wi ki chor kambo co co yim loh Aya, cin wab nubo gwam wo bou cineneu.
31 ೩೧ ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.
La ci tok liyar kwamaro ti, ci meran dikero dor Yesu ti kibi kwamer neret ci ywa cobo wii.