< ಅಪೊಸ್ತಲರ ಕೃತ್ಯಗಳ 3 >
1 ೧ ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.
Linu Pitrosi ni Joani vavakuya kuyenda kwi Tempele mwinako ya milapelo, mwinako yavutantu.
2 ೨ ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
Mukwame zumwi, yavali chihole kumatende, Avaku nyemunwanga nakalalikwa hamu lyango we Tempele, uvakusupwa mulutu. ilikuti akumbile itunso kuvatu vava kuya mwi Tempele,
3 ೩ ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು.
chinga bona Pitrosi ni Joani chivasaka kwinjira mwi Tempele, chakumbila intuso.
4 ೪ ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.
Pitrosi, nicha muluvukila nimenso akwe, ni Johani, chati, 'Lole kwetu.”
5 ೫ ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು.
Mukwame wechihole chava lola, nalitukiseze kutambula chimwi kuvali.
6 ೬ ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,
Linu Pitrosi chati, “Isillivera ni gauda kani zikwete, kono chitukwete, mutuchikuhe. Mwizina lya Jesu Kereste, Yende.”
7 ೭ ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.
Pitrosi nicha mukwata kwiyaza lya chilyo, niku munyemuna mwiwulu, inako ininizana matende ningongo chiza tambula ziho,
8 ೮ ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
Chatanga kuchukuta mwiwulu, mukwame wachihole nicha zimana nikutanga kuyenda; Linu niche njila ne Pitrosi ne Joani mwi Tempele, naka buyenda, nachukuta, nikutemba Ireeza.
9 ೯ ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;
Bantu vonse nichiva muvona naka vutemba Ireeza.
10 ೧೦ ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.
Nicha valemuha kuti njiyena mukwame wilanga natambula itunso ha Vuluntu bwa mulyango we Tempele; bavezwile kumakala ni kukomokwa chizi chiva pangahali kwali.
11 ೧೧ ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.
Linu havali kukwatilile kwa Pitrosi ni Joani, Bantu vonse nichi vantilila hamwina kuvali muchivaka chisumpwa Solomoni, niva komoketwe ahulu.
12 ೧೨ ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
Pitorosi havona ichi, chave tava vantu, “Nikuti inwe vantu va Isiraele, chinzi hamukomokwa? Chinzi hamu lolelera kwetu bulyo, uvu jenswe twamuleta kuti awole kuyenda cheziho zetu kamba chovu laperi bwetu?
13 ೧೩ ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
Ireeza wa Ambrahama, ni wa Isaka, niwa Jakovo, Ireeza uve sukwezwetu, wakuteka muhikana wakwe Jesu. Jiyena yenke umuba tambiki ni kukana havusu bwa Pilato, Hacha vali kusaka kumu lukukulula kuti aliyendeze.
14 ೧೪ ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
Mubakani yo Jolola ni Kuluka yenke, imi chimwa kumbira kuhewa mwihayi kuti a lukululwe ni kuhewa kwenu.
15 ೧೫ ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
Muve hayi Mukwaye wo vuhalo, uzo Ireeza ava vusi kuva fwire - imi twi mpanki bechi chivapangahali.
16 ೧೬ ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.
Linu, che tumero mwi zina lyakwe - uzu mukwame umubwene ni kwiziba - ili izina liswana lyamu koza. Itumero ina cha Jesu yaha kwali kuhozwa kuyenderele muvusu bwenu mwense.
17 ೧೭ “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.
Linu, basakiwa, Nizi kuti muva pangi chokuseziba, uvu muvava pangiri vayendisi venu.
18 ೧೮ ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.
Kono zintu inzo Ireeza ava wambi kuvusu cha kaholo kava porofita vonse, kuti uzu Keresite uswanera kunyanda, hanumchave zuzirizi.
19 ೧೯ ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
Muvake, cwale he, mi musanduke, iri kuti zivi zenu ziwole kuzwiswa kwenu, iri kuti kuwole kwiza inko zo kuli joloza kuzwamhavusu bwa Ireeza;
20 ೨೦ ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.
mi kuti na tumine Keresite yava keterwa inwe, Jesu.
21 ೨೧ ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ. (aiōn )
Jiyena yenke Iwulu liswanera kutambula kusikira inako yo kuvozekezwa kwezitu zonse, kuamana nezo Ireeza ava wambi kale chatuholo twava porofita bakwe va jolola. (aiōn )
22 ೨೨ ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.
Mushe chovuniti avati, “' Simwine wetu Ireeza kavuse mukati kenu muporofita yo swana name. Kamu teke zintu zonse zasana kawambe kwenu.
23 ೨೩ ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.
Kakupangahale kuti muntu yense yasana kakane kuteka uzo muporofita ke hayiwe kuzwiswa kuvantu vakwe.'
24 ೨೪ ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.
Eni, mi vonse Vaporofita kuzwa kwa Samuere navo vavakezi muma sule akwe, vavezi kuwamba nikwiza kwi zivahaza aya mazuva.
25 ೨೫ ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
Inwe muvana vamaPorofita mi nive chilikani icho Ireeza avapangi nive sukuzwenu, sina mwavateri kwa Abrahama, 'Mulusika lwako jimona masika onse e ikanda ka afuyaulwe.'
26 ೨೬ ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
Kasamulaho Ireeza hacha zimikite muhikana wakwe, ava mutumini kwenu chetanzi, iri kuti awole kumi fuyola cho sundukira kuzumwi ni zumwi kumuzwisa kuvuvi bwakwe.”