< ಅಪೊಸ್ತಲರ ಕೃತ್ಯಗಳ 3 >

1 ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.
A Piotr i Jan społem wstępowali do kościoła w godzinę modlitwy, dziewiątą.
2 ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
A mąż niektóry będąc chromy, zaraz z żywota matki swojej był noszony, którego na każdy dzień sadzano u drzwi kościelnych, które zwano piękne, aby prosił jałmużny od tych, którzy wchodzili do kościoła.
3 ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು.
Ten ujrzawszy Piotra i Jana, że mieli wnijść do kościoła, prosił ich o jałmużnę.
4 ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.
A Piotr z Janem pilnie na niego patrząc, rzekli: Wejrzyj na nas!
5 ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು.
Tedy on z pilnością patrzał na nie, spodziewając się co wziąć od nich.
6 ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,
I rzekł Piotr: Srebra i złota nie mam; lecz co mam, to ci daję: W imieniu Jezusa Chrystusa Nazareńskiego wstań, a chodź.
7 ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.
A ująwszy go za prawą rękę jego, podniósł go, a zarazem utwierdzone były nogi jego i kostki.
8 ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
I wyskoczywszy, stanął i chodził, a wszedł z nimi do kościoła, chodząc i skacząc, a chwaląc Boga.
9 ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;
A widział go wszystek lud chodzącego i chwalącego Boga.
10 ೧೦ ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.
I poznali go, iż to on był, który dla jałmużny siadał u drzwi pięknych kościelnych; i napełnieni są strachu i zdumienia nad tem, co mu się stało.
11 ೧೧ ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.
A gdy się trzymał on chromy, który był uzdrowiony, Piotra i Jana, zbieżał się do nich wszystek lud do przysionka, który zwano Salomonowym, zdumiawszy się.
12 ೧೨ ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
Co widziąc Piotr, przemówił do ludu: Mężowie Izraelscy! cóż się temu dziwujecie, albo czemu się nam tak pilnie przypatrujecie, jakobyśmy to własną mocą albo pobożnością uczynili, aby ten chodził?
13 ೧೩ ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
Bóg Abrahama i Izaaka i Jakóba, Bóg ojców naszych, uwielbił Jezusa, Syna swego, któregoście wy wydali i zaparliście się go przed twarzą Piłatową, który go sądził być godnym wypuszczenia.
14 ೧೪ ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
A wyście się onego świętego i sprawiedliwego zaparli, a prosiliście o mężobójcę, aby wam był darowany.
15 ೧೫ ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
I zabiliście dawcę żywota, którego Bóg wzbudził od umarłych, czego my świadkami jesteśmy.
16 ೧೬ ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.
A przez wiarę w imię jego, tego, którego wy widzicie i znacie, utwierdziło imię jego; wiara, mówię, która przez niego jest, dała temu to zupełne zdrowie przed obliczem was wszystkich.
17 ೧೭ “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.
Ale teraz, bracia! wiem, żeście to z niewiadomości uczynili, jako i książęta wasi.
18 ೧೮ ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.
Lecz Bóg, co przez usta wszystkich proroków swoich przepowiedział, iż Chrystus jego cierpieć miał, to tak ziścił.
19 ೧೯ ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
Przetoż pokutujcie, a nawróćcie się, aby były zgładzone grzechy wasze.
20 ೨೦ ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.
Gdyby przyszły czasy ochłody od obliczności Pańskiej, a posłałby onego, który wam opowiedziany jest, Jezusa Chrystusa.
21 ೨೧ ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ. (aiōn g165)
Który zaiste niebiosa ma objąć aż do czasu naprawienia wszystkich rzeczy, co był przepowiedział Bóg przez usta wszystkich świętych swoich proroków od wieków. (aiōn g165)
22 ೨೨ ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.
Albowiem Mojżesz do ojców rzekł: Proroka wam wzbudzi Pan, Bóg wasz, z braci waszych, jako mię; onego słuchać będziecie we wszystkiem, cokolwiek do was mówić będzie.
23 ೨೩ ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.
I stanie się, że każda dusza, która by nie słuchała tego proroka, będzie wygładzona z ludu.
24 ೨೪ ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.
Aleć i wszyscy prorocy od Samuela i od innych po nim, ilekolwiek ich mówiło, przepowiadali też te dni.
25 ೨೫ ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
Wy jesteście synami prorockimi i przymierza, które postanowił Bóg z ojcami naszymi, mówiąc do Abrahama: A w nasieniu twojem błogosławione będą wszystkie narody ziemi.
26 ೨೬ ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
Wamci naprzód Bóg wzbudziwszy Syna swego Jezusa, posłał go, aby wam błogosławił; żeby się każdy z was odwrócił od złości swoich.

< ಅಪೊಸ್ತಲರ ಕೃತ್ಯಗಳ 3 >