< ಅಪೊಸ್ತಲರ ಕೃತ್ಯಗಳ 4 >

1 ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
Поки Петро та Іван говорили до народу, підійшли до них священники, начальник храмової охорони та садукеї.
2 ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
Вони були дуже незадоволені тим, що Петро та Іван навчали народ та звіщали воскресіння з мертвих в Ісусі.
3 ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
Вони схопили їх та кинули у в’язницю до ранку, бо вже був вечір.
4 ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.
Багато з тих, що чули слово, увірували; і число віруючих збільшилося до п’яти тисяч.
5 ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.
Наступного дня керівники, старійшини та книжники зібралися разом у Єрусалимі.
6 ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.
Там були первосвященник Анна, Каяфа, Іван, Олександр та інші з роду первосвященників.
7 ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,
Вони поставили Петра та Івана посередині та запитали: ―Якою силою або чиїм ім’ям ви зробили це?
8 ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ,
Тоді Петро, сповнений Духом Святим, сказав їм: ―Начальники народу та старійшини!
9 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.
Якщо ви сьогодні вимагаєте відповіді від нас за добрий вчинок, зроблений хворій людині, і питаєте, як її було зцілено,
10 ೧೦ ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
тоді ви та весь народ Ізраїлю мусите знати: ім’ям Ісуса Христа з Назарета, Якого ви розіп’яли і Якого Бог воскресив із мертвих, цей чоловік стоїть перед вами зцілений.
11 ೧೧ “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.
Ісус – «Камінь, відкинутий вами, будівничими, Що став наріжним каменем».
12 ೧೨ ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
Немає ні в кому іншому спасіння, бо немає під небом іншого імені, даного людям, яким ми маємо бути спасенні.
13 ೧೩ ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
Побачивши сміливість Петра та Івана й зрозумівши, що це звичайні та неосвічені люди, здивувалися та усвідомили, що вони були з Ісусом.
14 ೧೪ ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
Але оскільки бачили, що біля них стоїть зцілений, не могли їм нічого заперечити.
15 ೧೫ ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,
Тоді наказали їм вийти із Синедріону та почали радитися між собою, кажучи:
16 ೧೬ “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
«Що ж нам робити з цими людьми? Адже всі жителі Єрусалима знають, що через них відбулося явне знамення, і ми не можемо цього спростувати.
17 ೧೭ ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
Однак щоб це не поширювалося далі серед народу, накажімо їм більше не говорити про це ім’я жодній людині».
18 ೧೮ ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
І, покликавши їх, заборонили говорити й навчати в ім’я Ісуса.
19 ೧೯ ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
Але Петро та Іван відповіли їм: «Розсудіть самі, чи справедливо перед Богом слухати більше вас, ніж Бога?
20 ೨೦ ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.
Адже ми не можемо мовчати про те, що чули та бачили».
21 ೨೧ ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
Пригрозивши їм ще раз, вони відпустили їх, бо не знайшли способу, як їх покарати, оскільки весь народ прославляв Бога за те, що сталося.
22 ೨೨ ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
Чоловік, з яким сталося це знамення зцілення, мав більше сорока років.
23 ೨೩ ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
Коли їх відпустили, вони пішли до своїх і розповіли, що їм сказали первосвященники та старійшини.
24 ೨೪ ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು; , “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
Почувши це, усі звернулися разом до Бога, кажучи: «Владико! Ти створив небеса, землю, море й усе, що в них.
25 ೨೫ ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?
Ти промовив Святим Духом через вуста Давида, нашого батька й Твого служителя: „Чому бентежаться народи і племена задумують марне?
26 ೨೬ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?
Повстають царі землі, і можновладці гуртуються разом проти Господа й проти Його Помазанця“.
27 ೨೭ ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
Бо справді об’єдналися в цьому місті Ірод і Понтій Пилат разом з язичниками та народом Ізраїлю проти Твого святого Слуги Ісуса, Якого Ти помазав.
28 ೨೮ ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
Вони зробили те, що Твоя рука й Твоя воля визначили заздалегідь, щоб здійснилося.
29 ೨೯ ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
І тепер, Господи, подивися на їхні погрози і дай рабам Твоїм з усією сміливістю звіщати Твоє Слово.
30 ೩೦ ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.
Простягни руку Свою та зцілюй хворих, роби чудеса та знамення через ім’я Твого святого Слуги Ісуса!»
31 ೩೧ ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
Після того, як вони помолилися, місце, де вони знаходились, затремтіло, усі наповнилися Святим Духом і сміливо почали звіщати Слово Боже.
32 ೩೨ ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
Уся спільнота віруючих була єдина серцем і душею. Ніхто не казав, що його майно належить тільки йому, але все в них було спільне.
33 ೩೩ ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
Апостоли з великою силою свідчили про воскресіння Господа Ісуса, і велика благодать була на всіх.
34 ೩೪ ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು
Серед них не було нужденних, бо власники земель та будинків продавали їх, приносили отримані гроші
35 ೩೫ ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.
та клали їх до ніг апостолів. Ці гроші розподілялися кожному за його потребою.
36 ೩೬ ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
Йосиф, якого апостоли звали Варнавою (що перекладається як «син утіхи»), левіт, родом із Кіпру,
37 ೩೭ ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.
який володів ділянкою землі, продав її та приніс гроші й поклав їх до ніг апостолів.

< ಅಪೊಸ್ತಲರ ಕೃತ್ಯಗಳ 4 >