< ಅಪೊಸ್ತಲರ ಕೃತ್ಯಗಳ 7 >
1 ೧ ಆಗ ಮಹಾಯಾಜಕನು, “ಈ ಸಂಗತಿಗಳು ಸತ್ಯವೋ?” ಎಂದು ಸ್ತೆಫನನನ್ನು ಕೇಳಿದ್ದಕ್ಕೆ ಅವನು, “ಸಹೋದರರೇ, ತಂದೆಗಳೇ, ಕೇಳಿರಿ.
Мареле преот а зис: „Аша стау лукруриле?”
2 ೨ ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;
Штефан а рэспунс: „Фрацилор ши пэринцилор, аскултаць! Думнезеул славей С-а арэтат пэринтелуй ностру Авраам, кынд ера ын Месопотамия, ынаинте ка сэ се ашезе ын Харан.
3 ೩ ‘ನೀನು, ನಿನ್ನ ಸ್ವದೇಶವನ್ನೂ, ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು’ ಎಂದು ಹೇಳಿದನು.
Ши й-а зис: ‘Ешь дин цара та ши дин фамилия та ши ду-те ын цара пе каре ць-о вой арэта.’
4 ೪ “ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.
Ел а ешит атунч дин цара халдеенилор ши с-а ашезат ын Харан. Де аколо, дупэ моартя татэлуй сэу, Думнезеу л-а стрэмутат ын цара ачаста, ын каре локуиць вой акум.
5 ೫ ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.
Дин цара ачея ну й-а дат нимик ын стэпынире, нич мэкар о палмэ де лок, чи й-а фэгэдуит кэ й-о ва да ын стэпынире луй ши семинцей луй дупэ ел, мэкар кэ н-авя ничун копил.
6 ೬ ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’
Думнезеу й-а спус кэ сэмынца луй ва локуи ынтр-о царэ стрэинэ, ва фи робитэ ши ва фи кинуитэ патру суте де ань.
7 ೭ ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.
‘Дар нямул кэруя ый вор фи робь, ыл вой жудека Еу’, а зис Думнезеу. ‘Дупэ ачея, вор еши ши-Мь вор служи ын локул ачеста.’
8 ೮ ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.
Апой й-а дат легэмынтул тэерий ымпрежур, ши астфел Авраам, кынд а нэскут пе Исаак, л-а тэят ымпрежур ын зиуа а опта, Исаак а нэскут ши а тэят ымпрежур пе Иаков, ши Иаков, пе чей дойспрезече патриархь.
9 ೯ “ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,
Яр патриархий, каре пизмуяу пе Иосиф, л-ау вындут, ка сэ фие дус ын Еӂипт. Дар Думнезеу а фост ку ел
10 ೧೦ ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.
ши л-а избэвит дин тоате неказуриле луй; й-а дат ынцелепчуне ши тречере ынаинтя луй Фараон, ымпэратул Еӂиптулуй, каре л-а пус дрегэтор песте Еӂипт ши песте тоатэ каса луй.
11 ೧೧ “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.
А венит о фоамете ын тот Еӂиптул ши Канаанул. Невоя ера маре, ши пэринций ноштри ну гэсяу меринде.
12 ೧೨ ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.
Иаков а аузит кэ ын Еӂипт ера грыу ши а тримис пе пэринций ноштри ынтыяшь датэ аколо.
13 ೧೩ ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.
Ши кынд ау венит а доуа оарэ, Иосиф а фост куноскут де фраций сэй, ши Фараон а афлат дин че ням ера Иосиф.
14 ೧೪ ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.
Апой, Иосиф а тримис сэ кеме пе татэл сэу Иаков ши пе тоатэ фамилия луй, шаптезечь ши чинч де суфлете.
15 ೧೫ ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.
Иаков с-а коборыт ын Еӂипт, унде а мурит, ел ши пэринций ноштри.
16 ೧೬ ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
Ши ау фост стрэмутаць ла Сихем ши пушь ын мормынтул пе каре ыл кумпэрасе Авраам ку о сумэ де бань де ла фиий луй Емор, ын Сихем.
17 ೧೭ “ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.
Се апропия время кынд требуя сэ се ымплиняскэ фэгэдуинца пе каре о фэкусе Думнезеу луй Авраам. Нородул а крескут ши с-а ынмулцит ын Еӂипт,
18 ೧೮ ಕಡೆಗೆ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳ್ವಿಕೆಗೆ ಬಂದನು.
пынэ кынд с-а ридикат ун алт ымпэрат, каре ну куноштя пе Иосиф.
19 ೧೯ ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿಸನು.
Ымпэратул ачеста а унелтит ымпотрива нямулуй ностру ши а кинуит пе пэринций ноштри, пынэ аколо ка сэ-шь лепеде прунчий, ка сэ ну трэяскэ.
20 ೨೦ ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
Пе время ачаста с-а нэскут Мойсе, каре ера фрумос ынаинтя луй Думнезеу. Ел а фост хрэнит трей лунь ын каса татэлуй сэу.
21 ೨೧ ಆ ಮೇಲೆ ಅವನನ್ನು ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
Ши кынд а фост лепэдат, л-а луат фийка луй Фараон ши л-а крескут ка пе копилул ей.
22 ೨೨ ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.
Мойсе а ынвэцат тоатэ ынцелепчуня еӂиптенилор ши ера путерник ын кувинте ши ын фапте.
23 ೨೩ “ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.
Ел авя патрузечь де ань кынд й-а венит ын инимэ доринца сэ черчетезе пе фраций сэй, пе фиий луй Исраел.
24 ೨೪ ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.
А вэзут пе унул дин ей суферинд недрептате, й-а луат апэраря, а рэзбунат пе чел асуприт ши а оморыт пе еӂиптян.
25 ೨೫ ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.
Кредя кэ фраций луй вор причепе кэ Думнезеу, прин мына луй, ле ва да избэвиря, дар н-ау причепут.
26 ೨೬ ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
А доуа зи, кынд се бэтяу ей, Мойсе а венит ын мижлокул лор ши й-а ындемнат ла паче. ‘Оаменилор’, а зис ел, ‘вой сунтець фраць; де че вэ недрептэциць унул пе алтул?’
27 ೨೭ “ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?
Дар чел че недрептэця пе апроапеле сэу л-а ымбрынчит ши й-а зис: ‘Чине те-а пус пе тине стэпынитор ши жудекэтор песте ной?
28 ೨೮ ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?’ ಎಂದು ಅವನನ್ನು ನೂಕಿಬಿಟ್ಟನು.
Врей сэ мэ оморь ши пе мине кум ай оморыт ерь пе еӂиптян?’
29 ೨೯ ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾಗಿದ್ದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು.
Ла аузул ачестор ворбе, Мойсе а фуӂит ши с-а дус де а локуит ка стрэин ын пэмынтул Мадиан, унде а нэскут дой фий.
30 ೩೦ “ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.
Песте патрузечь де ань, и с-а арэтат ун ынӂер ын пустиул мунтелуй Синай, ын пара фокулуй унуй руг.
31 ೩೧ ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,
Мойсе, кынд л-а вэзут, с-а мират де арэтаря ачаста ши, пе кынд се апропия сэ вадэ че есте, а аузит гласул Домнулуй,
32 ೩೨ ‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.
каре й-а зис: ‘Еу сунт Думнезеул пэринцилор тэй, Думнезеул луй Авраам, Думнезеул луй Исаак ши Думнезеул луй Иаков.’ Ши Мойсе, тремурынд, н-а ындрэзнит сэ се уйте.
33 ೩೩ ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.
Домнул й-а зис: ‘Скоате-ць ынкэлцэминтя дин пичоаре, кэч локул пе каре стай есте ун пэмынт сфынт.
34 ೩೪ ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.
Ам вэзут суферинца попорулуй Меу, каре есте ын Еӂипт, ле-ам аузит ӂеметеле ши М-ам коборыт сэ-й избэвеск. Акум, ду-те, те вой тримите ын Еӂипт.’
35 ೩೫ “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
Пе ачест Мойсе де каре се лепэдасерэ ей, кынд ау зис: ‘Чине те-а пус пе тине стэпынитор ши жудекэтор?’ Думнезеу л-а тримис ка стэпынитор ши избэвитор, ку ажуторул ынӂерулуй, каре и се арэтасе ын руг.
36 ೩೬ ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.
Ел й-а скос дин Еӂипт ши а фэкут минунь ши семне ын Еӂипт, ла Маря Рошие ши ын пустиу, патрузечь де ань.
37 ೩೭ “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
Ачест Мойсе а зис фиилор луй Исраел: ‘Домнул Думнезеул востру вэ ва ридика динтре фраций воштри ун Пророк ка мине: де Ел сэ аскултаць.’
38 ೩೮ ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.
Ел есте ачела каре, ын адунаря исраелицилор дин пустиу, ку ынӂерул каре й-а ворбит пе мунтеле Синай ши ку пэринций ноштри, а примит кувинте вий, ка сэ ни ле дя ноуэ.
39 ೩೯ “ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.
Пэринций ноштри н-ау врут сэ-л аскулте, чи л-ау несокотит ши, ын инимиле лор, с-ау ынторс спре Еӂипт
40 ೪೦ “ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.
ши ау зис луй Аарон: ‘Фэ-не ниште думнезей, каре сэ мяргэ ынаинтя ноастрэ, кэч ачест Мойсе, каре не-а скос дин цара Еӂиптулуй, ну штим че с-а фэкут.’
41 ೪೧ ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.
Ши ын зилеле ачеля, ау фэкут ун вицел, ау адус жертфэ идолулуй ши с-ау букурат де лукрул мынилор лор.
42 ೪೨ ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;
Атунч, Думнезеу С-а ынторс де ла ей ши й-а дат сэ се ынкине оштирий черулуй, дупэ кум есте скрис ын картя пророчилор: ‘Мь-аць адус вой вите жунгияте ши жертфе тимп де патрузечь де ань ын пустиу, касэ а луй Исраел?
43 ೪೩ ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ.
Аць пуртат кортул луй Молох ши кипул стелей зеулуй Ремфан, кипуриле ачеля, пе каре ле-аць фэкут ка сэ вэ ынкинаць лор! Де ачея вэ вой стрэмута динколо де Бабилон.’
44 ೪೪ “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.
Пэринций ноштри авяу ын пустиу кортул ынтылнирий, аша кум ыл рындуисе Чел че а спус луй Мойсе сэ-л факэ дупэ кипул пе каре-л вэзусе.
45 ೪೫ ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.
Ши пэринций ноштри л-ау адус, ла рындул лор, суб повэцуиря луй Иосуа, кынд ау интрат ын цара стэпынитэ де нямуриле пе каре Думнезеу ле-а изгонит динаинтя пэринцилор ноштри, ши а рэмас аколо пынэ ын зилеле луй Давид.
46 ೪೬ ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.
Давид а кэпэтат милэ ынаинтя луй Думнезеу ши а черут сэ ридиче о локуинцэ пентру Думнезеул луй Иаков.
47 ೪೭ ಆದರೆ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.
Ши Соломон а фост ачела каре Й-а зидит о касэ.
48 ೪೮ ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.
Дар Чел Пряыналт ну локуеште ын локашурь фэкуте де мынь оменешть, кум зиче пророкул:
49 ೪೯ “‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
‘Черул есте скаунул Меу де домние, ши пэмынтул есте аштернутул пичоарелор Меле. Че фел де касэ Ымь вець зиди вой Мие, зиче Домнул, сау каре ва фи локул Меу де одихнэ?
50 ೫೦ ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬುದಾಗಿ ಕರ್ತನು ಹೇಳುತ್ತಾನೆ’ ಎಂದು ಪ್ರವಾದಿಯು ನುಡಿದಿದ್ದಾನೆ.
Н-а фэкут мына Мя тоате ачесте лукрурь?’…
51 ೫೧ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
Оамень тарь ла чербиче, нетэяць ымпрежур ку инима ши ку урекиле! Вой тотдяуна вэ ымпотривиць Духулуй Сфынт. Кум ау фэкут пэринций воштри, аша фачець ши вой.
52 ೫೨ ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
Пе каре дин пророчь ну й-ау пригонит пэринций воштри? Ау оморыт пе чей че вестяу май динаинте вениря Челуй Неприхэнит, пе каре Л-аць вындут акум ши Л-аць оморыт,
53 ೫೩ ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ” ಎಂದು ಹೇಳಿದನು.
вой, каре аць примит Леӂя датэ прин ынӂерь, ши н-аць пэзит-о!…”
54 ೫೪ ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.
Кынд ау аузит ей ачесте ворбе, ый тэя пе инимэ ши скрышняу дин динць ымпотрива луй.
55 ೫೫ ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;
Дар Штефан, плин де Духул Сфынт, шь-а пиронит окий спре чер, а вэзут слава луй Думнезеу ши пе Исус стынд ын пичоаре ла дряпта луй Думнезеу
56 ೫೬ “ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.
ши а зис: „Ятэ, вэд черуриле дескисе ши пе Фиул омулуй стынд ын пичоаре ла дряпта луй Думнезеу.”
57 ೫೭ ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,
Ей ау ынчепут атунч сэ рэкняскэ, шь-ау аступат урекиле ши с-ау нэпустит тоць ынтр-ун гынд асупра луй.
58 ೫೮ ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
Л-ау тырыт афарэ дин четате ши л-ау учис ку петре. Марторий шь-ау пус хайнеле ла пичоареле унуй тынэр, нумит Саул.
59 ೫೯ ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,
Ши арункау ку петре ын Штефан, каре се руга ши зичя: „Доамне Исусе, примеште духул меу!”
60 ೬೦ ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.
Апой, а ынӂенункят ши а стригат ку глас таре: „Доамне, ну ле цине ын сямэ пэкатул ачеста!” Ши дупэ ачесте ворбе, а адормит.