< ಅಪೊಸ್ತಲರ ಕೃತ್ಯಗಳ 8 >
1 ೧ ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
Páli líkaði vel líflát Stefáns og þennan sama dag hófst mikil ofsókn gegn kirkjunni í Jerúsalem. Allir hinir trúuðu, nema postularnir, flýðu þá út um byggðir Júdeu og Samaríu.
2 ೨ ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
Nokkrir guðræknir Gyðingar tóku lík Stefáns og grófu með miklum söknuði.
3 ೩ ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.
Páll varð nú enn ákveðnari en áður í að útrýma hinum trúuðu. Hann æddi um og fór jafnvel inn á einkaheimili, dró þaðan bæði karla og konur og lét varpa þeim í fangelsi.
4 ೪ ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
Trúaða fólkið, sem flúið hafði Jerúsalem, fór nú víða og boðaði fagnaðarerindið um Jesú.
5 ೫ ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.
Filippus fór til dæmis til borgarinnar í Samaríu og sagði fólkinu þar frá Kristi.
6 ೬ ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.
Menn hlustuðu með athygli á mál hans,
7 ೭ ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
einkum vegna kraftaverkanna sem hann vann. Margir illir andar voru reknir út – þeir yfirgáfu fórnarlömb sín með miklum óhljóðum. Fjöldi lamaðra og bæklaðra hlaut einnig lækningu,
8 ೮ ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
og sannkallaður fögnuður ríkti í borginni.
9 ೯ ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
Maður nokkur hét Símon. Hann hafði verið galdramaður árum saman og mjög áhrifamikill. Leit hann stórt á sig vegna galdranna sem hann vann. Sumt fólk í Samaríu talaði jafnvel um hann sem sinn Krist.
10 ೧೦ ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.
11 ೧೧ ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.
12 ೧೨ ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
Nú trúði fólkið hins vegar orðum Filippusar, að Jesús væri Kristur. Einnig trúði það orðum hans um guðsríkið og fjöldi karla og kvenna tók skírn.
13 ೧೩ ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
Símon tók líka trú, var skírður og fylgdi síðan Filippusi hvert sem hann fór, undrandi á kraftaverkunum sem hann vann.
14 ೧೪ ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
Þegar postularnir í Jerúsalem fréttu að íbúar Samaríu hefðu tekið við boðskap Guðs, sendu þeir þangað Pétur og Jóhannes.
15 ೧೫ ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
Við komuna fóru þeir að biðja fyrir hinum nýkristnu, að þeir mættu taka á móti heilögum anda,
16 ೧೬ ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
því að enn hafði hann ekki komið yfir neinn þeirra, þó þeir hefðu verið skírðir í nafni Drottins Jesú.
17 ೧೭ ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
Og Pétur og Jóhannes lögðu hendur yfir þá sem trúðu, og fengu þeir þá heilagan anda.
18 ೧೮ ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
Þegar Símon sá að fólkið hlaut heilagan anda við handayfirlagningu postulanna, kom hann með peninga og vildi kaupa þennan kraft.
19 ೧೯ “ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.
„Leyfið mér líka að eignast þennan kraft, “bað hann, „svo að ég geti einnig lagt hendur yfir fólk og það fengið heilagan anda.“
20 ೨೦ ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
Pétur svaraði: „Fé þitt verði að engu, né þú sjálfur, fyrst þú heldur að hægt sé að kaupa gjöf Guðs fyrir peninga!
21 ೨೧ ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
Þú getur ekki tekið þátt í þessu, því að þú ert ekki einlægur gagnvart Guði.
22 ೨೨ ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
Snúðu þér frá illsku þinni og biddu Guð að fyrirgefa þér þessa vondu hugmynd þína.
23 ೨೩ ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು
Ég finn að þú ert afbrýðisamur og það er synd.“
24 ೨೪ ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.
„Æ, biddu til Drottins fyrir mér!“hrópaði Símon, „að ekkert af því komi yfir mig, sem þú sagðir!“
25 ೨೫ ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.
Þegar Pétur og Jóhannes höfðu vitnað og predikað í Samaríu, fóru þeir aftur til Jerúsalem. Á heimleiðinni komu þeir við í nokkrum samverskum bæjum og þar fluttu þeir einnig gleðiboðskapinn.
26 ೨೬ ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
En varðandi Filippus, þá sagði engill frá Drottni við hann: „Farðu veginn sem liggur frá Jerúsalem og niður til Gasa – hann liggur um eyðimörk – og vertu kominn þangað um hádegisbilið.“
27 ೨೭ ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
Það gerði hann og þá var þar á ferð sjálfur fjármálaráðherra Eþíópíu. Sá var í miklu áliti hjá Kandake Eþíópíudrottningu. Hann hafði farið til Jerúsalem, til að biðjast fyrir í musterinu,
28 ೨೮ ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
en var nú á heimleið í vagni sínum og las upphátt úr spádómsbók Jesaja.
29 ೨೯ ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.
Þá sagði heilagur andi við Filippus: „Flýttu þér til hans og gakktu við hliðina á vagninum.“
30 ೩೦ ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
Filippus hlýddi og þegar hann var kominn að vagninum, heyrði hann hvað maðurinn var að lesa. „Skilur þú þetta?“spurði Filippus.
31 ೩೧ ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
„Nei, sannarlega ekki.“svaraði maðurinn. „Hvernig ætti ég að geta það? Ég hef engan til að útskýra það fyrir mér.“Síðan bauð hann Filippusi að koma upp í vagninn og setjast hjá sér.
32 ೩೨ ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.
Kaflinn, sem hann var að lesa, var þannig: „Eins og lamb var hann leiddur til slátrunar og eins og kind þegir hjá þeim er klippir hana, þannig lauk hann ekki upp munni sínum.
33 ೩೩ ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.
Hann var auðmýktur og réttur hans frá honum tekinn. Endir var bundinn á ævi hans – hver getur lýst illsku samtíðar hans?“
34 ೩೪ ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
Maðurinn spurði nú Filippus: „Átti Jesaja hér við sjálfan sig eða einhvern annan?“
35 ೩೫ ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
Filippus útskýrði þá ritningarstaðinn og benti honum á marga aðra til að fræða hann um Jesú.
36 ೩೬ ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
Þegar þeir höfðu ekið nokkurn spöl, komu þeir að litlu vatni. „Sjáðu!“sagði maðurinn. „Þarna er vatn. Getur þú ekki skírt mig hér?“
37 ೩೭ ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
„Jú, það get ég, ef þú trúir af öllu hjarta, “svaraði Filippus. Þá sagði hinn: „Ég trúi að Jesús Kristur sé sonur Guðs.“
38 ೩೮ ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
Síðan stöðvaði hann vagninn, þeir stigu út í vatnið og Filippus skírði hann.
39 ೩೯ ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
Þegar þeir komu upp úr vatninu, hreif andi Drottins Filippus burt, og maðurinn sá hann ekki framar, en hélt leiðar sinnar fagnandi.
40 ೪೦ ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
Seinna kom Filippus fram í Asdód, og einnig þar flutti hann fagnaðarerindið, svo og í öllum bæjum á leið sinni til Sesareu.