< ಅಪೊಸ್ತಲರ ಕೃತ್ಯಗಳ 1 >
1 ೧ ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,
У моїй першій розповіді, Теофіле, я написав про все, що Ісус робив та чого навчав від початку
2 ೨ ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
до дня Його вознесіння, давши перед цим настанови через Духа Святого апостолам, яких обрав.
3 ೩ ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
Після Свого страждання Ісус з’явився перед ними й дав багато переконливих доказів, що Він живий. Ісус являвся їм упродовж сорока днів та говорив про Царство Боже.
4 ೪ ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,
Одного разу, перебуваючи з ними за столом, [Ісус] наказав їм: «Не відходьте з Єрусалима й чекайте на обітницю Отця, про яку ви чули від Мене;
5 ೫ ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.
бо Іван хрестив водою, ви ж через декілька днів будете хрещені Духом Святим».
6 ೬ ಕೂಡಿಬಂದವರು ಆತನನ್ನು, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು
Коли вони зібралися разом, то спитали Його: ―Господи, чи в цей час Ти маєш намір відновити Царство Ізраїлеві?
7 ೭ ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.
Він відповів: ―Не ваша справа знати часи та строки, котрі Отець установив у Своїй владі.
8 ೮ ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
Але коли Дух Святий зійде на вас, ви отримаєте силу й будете Моїми свідками в Єрусалимі, у всій Юдеї, у Самарії та аж до краю землі.
9 ೯ ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
Після цих слів Ісус на їхніх очах був узятий [на небо], і хмара сховала Його від їхнього зору.
10 ೧೦ ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
Коли вони уважно дивилися на небо, як Він піднімався, раптом з’явилися двоє чоловіків у білих одежах
11 ೧೧ “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
і сказали: «Галілеяни, чому ви стоїте та вдивляєтеся в небо? Цей Ісус, Який був узятий від вас на небо, прийде так само, як оце ви бачили, що Він пішов на небо».
12 ೧೨ ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
Після цього вони повернулися в Єрусалим з гори, яка зветься Оливною й знаходиться на відстані Суботньої дороги від Єрусалима.
13 ೧೩ ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
Коли прийшли, то піднялися до верхньої кімнати та залишалися там. Разом були: Петро, Іван, Яків та Андрій, Филип і Фома, Варфоломій і Матвій, Яків, син Алфеїв, Симон Зилот і Юда, син Якова.
14 ೧೪ ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
Усі вони перебували разом у молитві. З ними були й деякі жінки, а також Марія, мати Ісуса, і Його брати.
15 ೧೫ ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
У ті дні Петро піднявся серед братів (а на зібранні було близько ста двадцяти осіб) і промовив:
16 ೧೬ “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
«Брати! Належало статися тому, що в Писанні прорік Дух Святий через вуста Давида про Юду, який став поводирем тих, хто заарештував Ісуса.
17 ೧೭ ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”
Він був одним із нас і отримав частку в цьому служінні.
18 ೧೮ (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
(Придбавши поле за злочинну винагороду, він упав головою вниз, розбився, і його нутрощі вивалилися.
19 ೧೯ ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
Про це дізналися всі жителі Єрусалима й назвали це поле своєю мовою „Акелдама“, тобто „Криваве Поле“.)
20 ೨೦ ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
Бо в книзі Псалмів написано: „Нехай дім його стане пустелею і не буде мешканця в ньому!“А також: „Нехай інший займе його служіння!“
21 ೨೧ ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
Тому нам необхідно обрати одного з тих людей, що супроводжували нас увесь час, коли Господь Ісус був серед нас, –
починаючи від хрещення Івана й до дня, коли Ісус був узятий від нас. Він, як і ми, повинен стати свідком Його воскресіння».
23 ೨೩ ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
І запропонували двох: Йосифа, званого Варсавою, якого прозвали Юстом, і Маттія.
24 ೨೪ “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
Помолившись, вони сказали: «Господи, Ти знаєш серце кожного, покажи нам, кого з цих двох Ти обрав,
щоб він зайняв місце цього служіння й апостольства, яке Юда залишив, щоб піти на своє місце».
26 ೨೬ ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.
Потім вони кинули жереб, і впав жереб на Маттія, і його було зараховано до одинадцятьох апостолів.