< ಆಮೋಸನು 3 >

1 ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,
以色列人哪,你們全家是我從埃及地領上來的,當聽耶和華攻擊你們的話:
2 ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.
在地上萬族中,我只認識你們; 因此,我必追討你們的一切罪孽。
3 ಗೊತ್ತುಮಾಡಿಕೊಳ್ಳದೆ ಯಾರಾದರಿಬ್ಬರು ಜೊತೆಯಾಗಿ ನಡೆಯುವುದುಂಟೆ?
二人若不同心,豈能同行呢?
4 ಬೇಟೆಯ ಬಲಿ ಕಾಣದೇ ಸಿಂಹವು ಅರಣ್ಯದಲ್ಲಿ ಗರ್ಜಿಸುವುದೋ? ಏನನ್ನೂ ಬೇಟೆಯಾಡದೆ ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ?
獅子若非抓食,豈能在林中咆哮呢? 少壯獅子若無所得,豈能從洞中發聲呢?
5 ಕಾಳಿಲ್ಲದೆ ಪಕ್ಷಿಯು ನೆಲದಲ್ಲಿನ ಬಲೆಯೊಳಗೆ ಬೀಳುವುದೋ? ಏನೂ ಬಲೆಗೆ ಸಿಕ್ಕಿಕೊಳ್ಳದೇ ಬೋನು ಉರುಲಾಗುವುದೋ?
若沒有機檻,雀鳥豈能陷在網羅裏呢? 網羅若無所得,豈能從地上翻起呢?
6 ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?
城中若吹角,百姓豈不驚恐呢? 災禍若臨到一城,豈非耶和華所降的嗎?
7 ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.
主耶和華若不將奧祕指示他的僕人-眾先知, 就一無所行。
8 ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?
獅子吼叫,誰不懼怕呢? 主耶和華發命,誰能不說預言呢?
9 ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.
要在亞實突的宮殿中 和埃及地的宮殿裏傳揚說: 你們要聚集在撒馬利亞的山上, 就看見城中有何等大的擾亂與欺壓的事。
10 ೧೦ ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.
那些以強暴搶奪財物、 積蓄在自己家中的人 不知道行正直的事。 這是耶和華說的。
11 ೧೧ ಹೀಗಿರಲು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ: “ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು. ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು ಮತ್ತು ನಿನ್ನ ಅರಮನೆಗಳು ಸೂರೆಯಾಗುವವು.”
所以主耶和華如此說: 敵人必來圍攻這地, 使你的勢力衰微, 搶掠你的家宅。
12 ೧೨ ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”
耶和華如此說:「牧人怎樣從獅子口中搶回兩條羊腿或半個耳朵,住撒馬利亞的以色列人躺臥在床角上或鋪繡花毯的榻上,他們得救也不過如此。」
13 ೧೩ ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ; ಕೇಳಿರಿ, ಯಾಕೋಬ ವಂಶದವರಿಗೆ ವಿರುದ್ಧವಾಗಿ ಸಾಕ್ಷಿಕೊಡಿರಿ.
主耶和華-萬軍之上帝說: 當聽這話,警戒雅各家。
14 ೧೪ “ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು.
我討以色列罪的日子,也要討伯特利祭壇的罪; 壇角必被砍下,墜落於地。
15 ೧೫ ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.
我要拆毀過冬和過夏的房屋。 象牙的房屋也必毀滅; 高大的房屋都歸無有。 這是耶和華說的。

< ಆಮೋಸನು 3 >