< ಆಮೋಸನು 4 >

1 ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.
שִׁמְע֞וּ הַדָּבָ֣ר הַזֶּ֗ה פָּר֤וֹת הַבָּשָׁן֙ אֲשֶׁר֙ בְּהַ֣ר שֹֽׁמְר֔וֹן הָעֹשְׁק֣וֹת דַּלִּ֔ים הָרֹצְצ֖וֹת אֶבְיוֹנִ֑ים הָאֹמְרֹ֥ת לַאֲדֹֽנֵיהֶ֖ם הָבִ֥יאָה וְנִשְׁתֶּֽה׃
2 ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.
נִשְׁבַּ֨ע אֲדֹנָ֤י יְהוִה֙ בְּקָדְשׁ֔וֹ כִּ֛י הִנֵּ֥ה יָמִ֖ים בָּאִ֣ים עֲלֵיכֶ֑ם וְנִשָּׂ֤א אֶתְכֶם֙ בְּצִנּ֔וֹת וְאַחֲרִיתְכֶ֖ן בְּסִיר֥וֹת דּוּגָֽה׃
3 ಗೋಡೆಯಲ್ಲಿಯ ಬಿರುಕುಗಳ ಮೂಲಕ, ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, ಹರ್ಮೋನಿನ ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” ಇದು ಯೆಹೋವನ ನುಡಿ.
וּפְרָצִ֥ים תֵּצֶ֖אנָה אִשָּׁ֣ה נֶגְדָּ֑הּ וְהִשְׁלַכְתֶּ֥נָה הַהַרְמ֖וֹנָה נְאֻם־יְהוָֽה׃
4 “ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.
בֹּ֤אוּ בֵֽית־אֵל֙ וּפִשְׁע֔וּ הַגִּלְגָּ֖ל הַרְבּ֣וּ לִפְשֹׁ֑עַ וְהָבִ֤יאוּ לַבֹּ֙קֶר֙ זִבְחֵיכֶ֔ם לִשְׁלֹ֥שֶׁת יָמִ֖ים מַעְשְׂרֹֽתֵיכֶֽם׃
5 ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ.
וְקַטֵּ֤ר מֵֽחָמֵץ֙ תּוֹדָ֔ה וְקִרְא֥וּ נְדָב֖וֹת הַשְׁמִ֑יעוּ כִּ֣י כֵ֤ן אֲהַבְתֶּם֙ בְּנֵ֣י יִשְׂרָאֵ֔ל נְאֻ֖ם אֲדֹנָ֥י יְהוִֽה׃
6 “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
וְגַם־אֲנִי֩ נָתַ֨תִּי לָכֶ֜ם נִקְי֤וֹן שִׁנַּ֙יִם֙ בְּכָל־עָ֣רֵיכֶ֔ם וְחֹ֣סֶר לֶ֔חֶם בְּכֹ֖ל מְקוֹמֹֽתֵיכֶ֑ם וְלֹֽא־שַׁבְתֶּ֥ם עָדַ֖י נְאֻם־יְהוָֽה׃
7 “ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.
וְגַ֣ם אָנֹכִי֩ מָנַ֨עְתִּי מִכֶּ֜ם אֶת־הַגֶּ֗שֶׁם בְּע֨וֹד שְׁלֹשָׁ֤ה חֳדָשִׁים֙ לַקָּצִ֔יר וְהִמְטַרְתִּי֙ עַל־עִ֣יר אֶחָ֔ת וְעַל־עִ֥יר אַחַ֖ת לֹ֣א אַמְטִ֑יר חֶלְקָ֤ה אַחַת֙ תִּמָּטֵ֔ר וְחֶלְקָ֛ה אֲשֶֽׁר־לֹֽא־תַמְטִ֥יר עָלֶ֖יהָ תִּיבָֽשׁ׃
8 ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.
וְנָע֡וּ שְׁתַּיִם֩ שָׁלֹ֨שׁ עָרִ֜ים אֶל־עִ֥יר אַחַ֛ת לִשְׁתּ֥וֹת מַ֖יִם וְלֹ֣א יִשְׂבָּ֑עוּ וְלֹֽא־שַׁבְתֶּ֥ם עָדַ֖י נְאֻם־יְהוָֽה׃
9 “ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
הִכֵּ֣יתִי אֶתְכֶם֮ בַּשִּׁדָּפ֣וֹן וּבַיֵּרָקוֹן֒ הַרְבּ֨וֹת גַּנּוֹתֵיכֶ֧ם וְכַרְמֵיכֶ֛ם וּתְאֵנֵיכֶ֥ם וְזֵיתֵיכֶ֖ם יֹאכַ֣ל הַגָּזָ֑ם וְלֹֽא־שַׁבְתֶּ֥ם עָדַ֖י נְאֻם־יְהוָֽה׃ ס
10 ೧೦ “ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
שִׁלַּ֨חְתִּי בָכֶ֥ם דֶּ֙בֶר֙ בְּדֶ֣רֶךְ מִצְרַ֔יִם הָרַ֤גְתִּי בַחֶ֙רֶב֙ בַּח֣וּרֵיכֶ֔ם עִ֖ם שְׁבִ֣י סֽוּסֵיכֶ֑ם וָאַעֲלֶ֞ה בְּאֹ֤שׁ מַחֲנֵיכֶם֙ וּֽבְאַפְּכֶ֔ם וְלֹֽא־שַׁבְתֶּ֥ם עָדַ֖י נְאֻם־יְהוָֽה׃
11 ೧೧ “ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
הָפַ֣כְתִּי בָכֶ֗ם כְּמַהְפֵּכַ֤ת אֱלֹהִים֙ אֶת־סְדֹ֣ם וְאֶת־עֲמֹרָ֔ה וַתִּהְי֕וּ כְּא֖וּד מֻצָּ֣ל מִשְׂרֵפָ֑ה וְלֹֽא־שַׁבְתֶּ֥ם עָדַ֖י נְאֻם־יְהוָֽה׃ ס
12 ೧೨ “ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!
לָכֵ֕ן כֹּ֥ה אֶעֱשֶׂה־לְּךָ֖ יִשְׂרָאֵ֑ל עֵ֚קֶב כִּֽי־זֹ֣את אֶֽעֱשֶׂה־לָּ֔ךְ הִכּ֥וֹן לִקְרַאת־אֱלֹהֶ֖יךָ יִשְׂרָאֵֽל׃
13 ೧೩ ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.
כִּ֡י הִנֵּה֩ יוֹצֵ֨ר הָרִ֜ים וּבֹרֵ֣א ר֗וּחַ וּמַגִּ֤יד לְאָדָם֙ מַה־שֵּׂח֔וֹ עֹשֵׂ֥ה שַׁ֙חַר֙ עֵיפָ֔ה וְדֹרֵ֖ךְ עַל־בָּ֣מֳתֵי אָ֑רֶץ יְהוָ֥ה אֱלֹהֵֽי־צְבָא֖וֹת שְׁמֽוֹ׃ ס

< ಆಮೋಸನು 4 >