< ಆಮೋಸನು 5 >

1 ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:
ای خاندان اسرائیل این کلام را که برای مرثیه بر شما می‌خوانم بشنوید.۱
2 ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.
دخترباکره اسرائیل افتاده است و دیگر نخواهدبرخاست. بر زمین خود انداخته شده، و احدی نیست که او را برخیزاند.۲
3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”
زیرا خداوند یهوه چنین می‌گوید: شهری که با هزار نفر بیرون رفت، صد نفر را برای خاندان اسرائیل باقی خواهدداشت و شهری که با صد نفر بیرون رفت، ده نفر راباقی خواهد داشت.۳
4 ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!
زیرا خداوند به خاندان اسرائیل چنین می‌گوید: مرا بطلبید و زنده بمانید.۴
5 ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.
اما بیت ئیل را مطلبید و به جلجال داخل مشویدو به بئرشبع مروید، زیرا جلجال البته به اسیری خواهد رفت و بیت ئیل نیست خواهد شد.۵
6 ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
خداوند را بطلبید و زنده مانید، مبادا او مثل آتش در خاندان یوسف افروخته شده، بسوزاند وکسی در بیت ئیل نباشد که آن را خاموش کند.۶
7 ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”
‌ای شما که انصاف را به افسنتین مبدل می‌سازید و عدالت را به زمین می‌اندازید،۷
8 ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!
آن که ثریا و جبار را آفرید و فجر را به سایه موت مبدل ساخت و روز را مثل شب تاریک گردانید وآبهای دریا را خوانده، آنها را بر روی زمین ریخت، یهوه اسم او می‌باشد؛۸
9 ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ.
آنکه خرابی را برزورآوران می‌رساند چنانکه خرابی بر قلعه ها وارد می‌آید؛۹
10 ೧೦ ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.
ایشان از آنانی که در محکمه حکم می‌کنند، نفرت دارند و راستگویان رامکروه می‌دارند.۱۰
11 ೧೧ ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.
بنابراین چونکه مسکینان راپایمال کردید و هدایای گندم از ایشان گرفتید، خانه‌ها را از سنگهای تراشیده بنا خواهید نموداما در آنها ساکن نخواهید شد و تاکستانهای دلپسند غرس خواهید نمود و لیکن شراب آنها رانخواهید نوشید.۱۱
12 ೧೨ ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.
زیرا تقصیرهای شما رامی دانم که بسیار است و گناهان شما را که عظیم می‌باشد، زیرا عادلان را به تنگ می‌آورید و رشوه می‌گیرید و فقیران را در محکمه از حق ایشان منحرف می‌سازید.۱۲
13 ೧೩ ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.
لهذا هر‌که عاقل باشد در آن زمان خاموش خواهد ماند زیرا که زمان بد خواهد بود.۱۳
14 ೧೪ ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.
نیکویی را بطلبید و نه بدی را تا زنده بمانید وبدین منوال یهوه خدای لشکرها با شما خواهدبود، چنانکه می‌گویید.۱۴
15 ೧೫ ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.
از بدی نفرت کنید ونیکویی را دوست دارید و انصاف را در محکمه ثابت نمایید، شاید که یهوه خدای لشکرها بر بقیه یوسف رحمت نماید.۱۵
16 ೧೬ ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.
بنابراین، خداوند یهوه خدای لشکرهاچنین می‌گوید: در همه چهارسوها نوحه گری خواهد بود و در همه کوچه‌ها وای وای خواهندگفت و فلاحان را برای ماتم و آنانی را که مرثیه خوانی آموخته شده‌اند، برای نوحه گری خواهند خواند.۱۶
17 ೧೭ ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.
و در همه تاکستانها نوحه گری خواهد بود، زیرا خداوند می‌گوید که من در میان تو عبور خواهم کرد.۱۷
18 ೧೮ ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.
وای بر شما که مشتاق روز خداوند می‌باشید. روز خداوند برای شماچه خواهد بود؟ تاریکی و نه روشنایی!۱۸
19 ೧೯ ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
مثل کسی‌که از شیری فرار کند و خرسی بدو برخورد، یا کسی‌که به خانه داخل شده، دست خود را بردیوار بنهد و ماری او را بگزد.۱۹
20 ೨೦ ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!
آیا روز خداوندتاریکی نخواهد بود و نه روشنایی و ظلمت غلیظی که در آن هیچ درخشندگی نباشد؟۲۰
21 ೨೧ “ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.
من از عیدهای شما نفرت و کراهت دارم و(عطر) محفل های مقدس شما را استشمام نخواهم کرد.۲۱
22 ೨೨ ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
و اگر‌چه قربانی های سوختنی وهدایای آردی خود را برای من بگذرانید، آن راقبول نخواهم کرد و ذبایح سلامتی پرواریهای شما را منظور نخواهم داشت.۲۲
23 ೨೩ ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ.
آهنگ سرودهای خود را از من دور کن زیرا نغمه بربطهای تو را گوش نخواهم کرد.۲۳
24 ೨೪ ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.
و انصاف مثل آب و عدالت مانند نهر دایمی جاری بشود.۲۴
25 ೨೫ ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ವತ್ತು ವರ್ಷ ನನಗೆ ಯಜ್ಞಗಳನ್ನೂ, ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ?
‌ای خاندان اسرائیل آیا شما قربانی‌ها و هدایابرای من مدت چهل سال در بیابان گذرانیدید؟۲۵
26 ೨೬ ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು, ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು.
نی بلکه خیمه ملکوم خود و تمثال اصنام خویش و کوکب خدایان خود را که به جهت خویشتن ساخته بودید برداشتید.۲۶
27 ೨೭ ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.
پس یهوه که نام او خدای لشکرها می‌باشد، می‌فرماید که من شما را به آن طرف دمشق جلای وطن خواهم ساخت.۲۷

< ಆಮೋಸನು 5 >