< ಆಮೋಸನು 7 >
1 ೧ ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.
Konsa Senyè BONDYE a te montre m e gade byen, Li t ap fòme yon gwo rafal krikèt nan lè jaden prentan an te kòmanse boujonnen an. Epi gade byen, rekòlt la te fèt nan lè wa a te fin koupe zèb la.
2 ೨ ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.
Epi li te vin rive lè li te fin manje tout plant peyi a, ke m te di: “Senyè BONDYE, souple, padone! Kòman Jacob ka kanpe? Li tèlman piti!”
3 ೩ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
SENYÈ a te repanti de sa. “Sa p ap rive,” SENYÈ a te di.
4 ೪ ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.
Konsa Senyè BONDYE a te montre mwen, e gade byen, Senyè BONDYE a t ap rele pou jijman an ak dife a. Li te devore tout gwo pwofondè a, e te kòmanse devore tèren nan.
5 ೫ ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು
Epi mwen te di: “Senyè, souple, sispann! Kòman Jacob ka kanpe? Li tèlman piti!”
6 ೬ ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
SENYÈ a te repanti de sa. “Sa a tou, p ap rive”, Senyè BONDYE a te di.
7 ೭ ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.
Konsa Li te monte m, e gade byen, Senyè a te kanpe akote yon mi ki monte ak yon filaplon nan men L.
8 ೮ ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು.
SENYÈ a te di m: “Se kisa ou wè, Amos?” Mwen te di: “Yon filaplon.” Konsa, Senyè a te di: “Gade byen, Mwen prèt pou plase yon filaplon nan mitan pèp Mwen an, Israël. Mwen p ap kite yo chape ankò.
9 ೯ ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು, ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು.
Wo plas Isaac yo va vin abandone, e sanktyè Israël yo va vin kraze nèt. Answit, Mwen va leve kont lakay Jéroboam ak nepe.”
10 ೧೦ ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.
Konsa, Amatsia, prèt Béthel la te voye pawòl kote Jéroboam, wa Israël la. Li te di: “Amos te fè konplo kont ou nan mitan kay Israël la. Peyi a p ap ka sipòte tout pawòl li yo.
11 ೧೧ ಅದಕ್ಕೆ ಆಮೋಸನು, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಾಯೇಲರು ಖಂಡಿತವಾಗಿ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರು” ಎಂದು ಹೇಳಿಕಳುಹಿಸಿದನು.
Paske konsa Amos di: ‘Jéroboam va mouri pa nepe a, e Israël va anverite kite peyi li pou ale an egzil.’”
12 ೧೨ ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.
Amatsia te di a Amos: “Ale, ou menm ki divinò, sove ale nan peyi Juda. Manje pen e pwofetize la!
13 ೧೩ ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು.
Men pa pwofetize nan Béthel, paske se sanktyè ak rezidans la a wa a!”
14 ೧೪ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
Konsa, Amos te reponn a Amatsia: “Mwen pa t yon pwofèt, ni mwen pa t fis a yon pwofèt; men mwen te yon gadyen bèt ak yon kiltivatè pye fig frans.
15 ೧೫ ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು.
Men SENYÈ a te retire mwen soti dèyè bann mouton an, e SENYÈ a te di mwen: ‘Ale pwofetize a pèp Mwen an, Israël.’
16 ೧೬ “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,
Konsa, tande pawòl SENYÈ a: “W ap di: ‘Ou pa pou pwofetize kont Israël, ni ou pa pou pale kont lakay Isaac.’
17 ೧೭ ‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.
Akoz sa, SENYÈ a di: ‘Madanm ou va devni yon pwostitiye nan vil la, fis ou yo ak fi ou yo va tonbe pa nepe, peyi ou a va divize ak yon lign apantaj, e ou menm, ou va mouri nan yon peyi ki pa pwòp. Anplis, Israël va anverite kite peyi li a pou li ale an egzil.’”