< ಆಮೋಸನು 7 >

1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.
כֹּ֤ה הִרְאַ֙נִי֙ אֲדֹנָ֣י יְהוִ֔ה וְהִנֵּה֙ יוֹצֵ֣ר גֹּבַ֔י בִּתְחִלַּ֖ת עֲל֣וֹת הַלָּ֑קֶשׁ וְהִ֨נֵּה־לֶ֔קֶשׁ אַחַ֖ר גִּזֵּ֥י הַמֶּֽלֶךְ׃
2 ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.
וְהָיָ֗ה אִם־כִּלָּה֙ לֶֽאֱכוֹל֙ אֶת־עֵ֣שֶׂב הָאָ֔רֶץ וָאֹמַ֗ר אֲדֹנָ֤י יְהוִה֙ סְֽלַֽח־נָ֔א מִ֥י יָק֖וּם יַֽעֲקֹ֑ב כִּ֥י קָטֹ֖ן הֽוּא׃
3 ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
נִחַ֥ם יְהוָ֖ה עַל־זֹ֑את לֹ֥א תִהְיֶ֖ה אָמַ֥ר יְהוָֽה׃
4 ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.
כֹּ֤ה הִרְאַ֙נִי֙ אֲדֹנָ֣י יְהוִ֔ה וְהִנֵּ֥ה קֹרֵ֛א לָרִ֥ב בָּאֵ֖שׁ אֲדֹנָ֣י יְהוִ֑ה וַתֹּ֙אכַל֙ אֶת־תְּה֣וֹם רַבָּ֔ה וְאָכְלָ֖ה אֶת־הַחֵֽלֶק׃
5 ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು
וָאֹמַ֗ר אֲדֹנָ֤י יְהוִה֙ חֲדַל־נָ֔א מִ֥י יָק֖וּם יַעֲקֹ֑ב כִּ֥י קָטֹ֖ן הֽוּא׃
6 ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
נִחַ֥ם יְהוָ֖ה עַל־זֹ֑את גַּם־הִיא֙ לֹ֣א תִֽהְיֶ֔ה אָמַ֖ר אֲדֹנָ֥י יְהוִֽה׃ ס
7 ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.
כֹּ֣ה הִרְאַ֔נִי וְהִנֵּ֧ה אֲדֹנָ֛י נִצָּ֖ב עַל־חוֹמַ֣ת אֲנָ֑ךְ וּבְיָד֖וֹ אֲנָֽךְ׃
8 ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು.
וַיֹּ֨אמֶר יְהוָ֜ה אֵלַ֗י מָֽה־אַתָּ֤ה רֹאֶה֙ עָמ֔וֹס וָאֹמַ֖ר אֲנָ֑ךְ וַיֹּ֣אמֶר אֲדֹנָ֗י הִנְנִ֨י שָׂ֤ם אֲנָךְ֙ בְּקֶ֙רֶב֙ עַמִּ֣י יִשְׂרָאֵ֔ל לֹֽא־אוֹסִ֥יף ע֖וֹד עֲב֥וֹר לֽוֹ׃
9 ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು, ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು.
וְנָשַׁ֙מּוּ֙ בָּמ֣וֹת יִשְׂחָ֔ק וּמִקְדְּשֵׁ֥י יִשְׂרָאֵ֖ל יֶחֱרָ֑בוּ וְקַמְתִּ֛י עַל־בֵּ֥ית יָרָבְעָ֖ם בֶּחָֽרֶב׃ פ
10 ೧೦ ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.
וַיִּשְׁלַ֗ח אֲמַצְיָה֙ כֹּהֵ֣ן בֵּֽית־אֵ֔ל אֶל־יָרָבְעָ֥ם מֶֽלֶךְ־יִשְׂרָאֵ֖ל לֵאמֹ֑ר קָשַׁ֨ר עָלֶ֜יךָ עָמ֗וֹס בְּקֶ֙רֶב֙ בֵּ֣ית יִשְׂרָאֵ֔ל לֹא־תוּכַ֣ל הָאָ֔רֶץ לְהָכִ֖יל אֶת־כָּל־דְּבָרָֽיו׃
11 ೧೧ ಅದಕ್ಕೆ ಆಮೋಸನು, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಾಯೇಲರು ಖಂಡಿತವಾಗಿ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರು” ಎಂದು ಹೇಳಿಕಳುಹಿಸಿದನು.
כִּי־כֹה֙ אָמַ֣ר עָמ֔וֹס בַּחֶ֖רֶב יָמ֣וּת יָרָבְעָ֑ם וְיִ֨שְׂרָאֵ֔ל גָּלֹ֥ה יִגְלֶ֖ה מֵעַ֥ל אַדְמָתֽוֹ׃ ס
12 ೧೨ ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.
וַיֹּ֤אמֶר אֲמַצְיָה֙ אֶל־עָמ֔וֹס חֹזֶ֕ה לֵ֥ךְ בְּרַח־לְךָ֖ אֶל־אֶ֣רֶץ יְהוּדָ֑ה וֶאֱכָל־שָׁ֣ם לֶ֔חֶם וְשָׁ֖ם תִּנָּבֵֽא׃
13 ೧೩ ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು.
וּבֵֽית־אֵ֔ל לֹֽא־תוֹסִ֥יף ע֖וֹד לְהִנָּבֵ֑א כִּ֤י מִקְדַּשׁ־מֶ֙לֶךְ֙ ה֔וּא וּבֵ֥ית מַמְלָכָ֖ה הֽוּא׃ ס
14 ೧೪ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
וַיַּ֤עַן עָמוֹס֙ וַיֹּ֣אמֶר אֶל־אֲמַצְיָ֔ה לֹא־נָבִ֣יא אָנֹ֔כִי וְלֹ֥א בֶן־נָבִ֖יא אָנֹ֑כִי כִּֽי־בוֹקֵ֥ר אָנֹ֖כִי וּבוֹלֵ֥ס שִׁקְמִֽים׃
15 ೧೫ ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು.
וַיִּקָּחֵ֣נִי יְהוָ֔ה מֵאַחֲרֵ֖י הַצֹּ֑אן וַיֹּ֤אמֶר אֵלַי֙ יְהוָ֔ה לֵ֥ךְ הִנָּבֵ֖א אֶל־עַמִּ֥י יִשְׂרָאֵֽל׃
16 ೧೬ “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,
וְעַתָּ֖ה שְׁמַ֣ע דְּבַר־יְהוָ֑ה אַתָּ֣ה אֹמֵ֗ר לֹ֤א תִנָּבֵא֙ עַל־יִשְׂרָאֵ֔ל וְלֹ֥א תַטִּ֖יף עַל־בֵּ֥ית יִשְׂחָֽק׃
17 ೧೭ ‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.
לָכֵ֞ן כֹּה־אָמַ֣ר יְהוָ֗ה אִשְׁתְּךָ֞ בָּעִ֤יר תִּזְנֶה֙ וּבָנֶ֤יךָ וּבְנֹתֶ֙יךָ֙ בַּחֶ֣רֶב יִפֹּ֔לוּ וְאַדְמָתְךָ֖ בַּחֶ֣בֶל תְּחֻלָּ֑ק וְאַתָּ֗ה עַל־אֲדָמָ֤ה טְמֵאָה֙ תָּמ֔וּת וְיִ֨שְׂרָאֵ֔ל גָּלֹ֥ה יִגְלֶ֖ה מֵעַ֥ל אַדְמָתֽוֹ׃ ס

< ಆಮೋಸನು 7 >