< ಆಮೋಸನು 8 >
1 ೧ ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ ಪುಟ್ಟಿಯನ್ನು ಕಂಡೆನು!
১প্রভু সদাপ্রভু আমাকে এই দেখালেন। দেখ, এক ঝুড়ি গরমের ফল!
2 ೨ ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.
২তিনি বললেন, “তুমি কি দেখছ, আমোষ?” আমি বললাম, “এক ঝুড়ি গরমের ফল।” তখন সদাপ্রভু আমায় বললেন, “আমার প্রজা ইস্রায়েলের শেষ দিন এসেছে; আমি আর তাদের ছাড়বো না।
3 ೩ ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”
৩মন্দিরের গান কান্নায় পরিণত হবে সেই দিনের।” এই হল প্রভু সদাপ্রভুর ঘোষণা, “মৃতদেহ অনেক হবে, তারা সব জায়গায় তাদের ছুঁড়ে ফেলে দেবে নিঃশব্দে!”
4 ೪ “ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.
৪এটি শুনো, তোমরা যারা দরিদ্রদের পায়ের তলায় মাড়াও এবং গরিবদের দেশ থেকে তাড়িয়ে দাও।
5 ೫ ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?
৫তারা বলে, “কবে অমাবস্যা কাটবে, তাহলে আমরা আবার শস্য বিক্রি করতে পারব? এবং কবে বিশ্রামবার শেষ হবে, তাহলে আমরা গম বিক্রি করতে পারব? আমরা ওজনে কম দেব এবং দাম বাড়িয়ে দেব, যেভাবে আমরা নকল দাঁড়িপাল্লা দিয়ে ঠকাই।
6 ೬ ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!
৬তাহলে আমরা খারাপ গম বিক্রি করতে পারব আর রূপা দিয়ে গরিবকে কিনবো, দরিদ্রকে একজোড়া চটি দিয়ে কিনবো।”
7 ೭ ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
৭সদাপ্রভু যাকোবের গর্বকে নিয়ে শপথ করলেন, “নিশ্চয়ই তাদের কোন কাজ আমি কখনো ভুলবো না।”
8 ೮ ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.
৮এই জন্য কি দেশ কাঁপবে না এবং যারা এতে বাস করে তারা শোক করবে না? এর মধ্যে যা কিছু আছে নীল নদীর মত ফুলে উঠবে আর এটা উপরে লাফিয়ে উঠবে আবার ডুবে যাবে, মিশরের নদীর মত।
9 ೯ ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.
৯“এটা আসবে ঐ দিনের,” এই হল প্রভু সদাপ্রভুর ঘোষণা, “আমি দুপুরে সূর্যকে অস্ত যেতে বাধ্য করব এবং আমি পৃথিবীকে অন্ধকার করব দিনের রবেলায়।
10 ೧೦ ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
১০আমি তোমাদের উৎসব শোকে পরিণত করব এবং তোমাদের সমস্ত গান দুঃখে পরিণত করব। আমি তোমাদের সবাইকে চট পরাব এবং প্রত্যেক মাথায় টাক পড়াব। আমি এটা ঠিক একমাত্র ছেলের জন্য দুঃখের মত করে তুলবো এবং এটার শেষ দিন হবে খুবই তিক্ত।
11 ೧೧ ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
১১দেখ, দিন আসছে,” এই হল প্রভু সদাপ্রভুর ঘোষণা, “যখন আমি এই দেশে দূর্ভিক্ষ পাঠাবো, খাদ্যের জন্য দূর্ভিক্ষ নয়, জলের জন্য দূর্ভিক্ষ নয় কিন্তু সদাপ্রভুর বাক্য শোনার জন্য দূর্ভিক্ষ।
12 ೧೨ ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ.
১২তারা এক সমুদ্র থেকে অন্য সমুদ্র টলতে টলতে যাবে, উত্তর থেকে পূর্বে দিকে সদাপ্রভুর বাক্যের খোঁজে তারা দৌড়াবে কিন্তু তারা তা পাবে না।
13 ೧೩ ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು.
১৩ওই দিনের সুন্দরী মেয়েরা এবং যুবকেরা পিপাসায় অজ্ঞান হয়ে যাবে।
14 ೧೪ ‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.
১৪যারা শমরিয়ার পাপ নিয়ে শপথ করে এবং বলে, ‘দান, তোমার জীবন্ত ঈশ্বরের দিব্যি এবং বের-শেবার জীবন্ত পথের দিব্যি, তারা পড়বে আর কখনো উঠবে না’।”