< ಆಮೋಸನು 8 >

1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ ಪುಟ್ಟಿಯನ್ನು ಕಂಡೆನು!
Thus did the Lord Eternal show unto me: and, behold, there was a basket of summer fruit.
2 ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.
And he said, What dost thou see, 'Amos? And I said, A basket of summer fruit. Then said the Lord unto me, The end is come for my people Israel: I will not farther indulge them any more.
3 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”
And the songs of the temple shall become a wailing on that day, saith the Lord Eternal: many shall be the dead bodies; in every place shall men throw them down, [saying, ] Be silent.
4 “ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.
Hear this, O ye that are greedy to swallow the needy, and to ruin the poor of the land,
5 ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?
Saying, When will the new moon be gone, that we may sell provision? and the sabbath, that we may open the corn-warehouses, making the ephah small, and increasing the shekel, and cheating with deceitful balances?
6 ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!
That we may buy the poor for silver, and the needy for a pair of shoes; and even sell the refuse of the corn?
7 ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
Sworn hath the Lord by the excellency of Jacob, Surely I will not forget to eternity all their works.
8 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.
Shall because of this the land not tremble, and mourn every one that dwelleth therein? and shall it not rise up like a stream wholly, and roll onward and sink again like the stream of Egypt?
9 ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.
And it shall come to pass on that day, saith the Lord Eternal, that I will cause the sun to set at noon, and I will bring darkness over the earth on a bright day;
10 ೧೦ ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
And I will change your feasts into mourning, and all your songs into lamentations; and I will bring upon all loins sackcloth, and upon every head baldness; and I will cause [the land] to mourn as one doth for an only son, and its end to be as a day of bitter [complaint].
11 ೧೧ ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
Behold, days are coming, saith the Lord Eternal, when I will send a famine in the land, not a famine for bread, nor a thirst for water, but to hear the words of the Lord:
12 ೧೨ ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ.
And they will wander about from sea to sea, and from the north even to the east, they will roam about to seek the word of the Lord; but they shall not find it.
13 ೧೩ ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು.
On that day shall the fair virgins and the young men faint for thirst;
14 ೧೪ ‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.
Those that swear by the guilt of Samaria, and say, As thy god liveth, O Dan; and, As liveth the worshipped idol of Beer-sheba', —yea, they shall fall, and never rise up again.

< ಆಮೋಸನು 8 >