< ಆಮೋಸನು 9 >

1 ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.
רָאִ֨יתִי אֶת־אֲדֹנָ֜י נִצָּ֣ב עַֽל־הַמִּזְבֵּ֗חַ וַיֹּאמֶר֩ הַ֨ךְ הַכַּפְתּ֜וֹר וְיִרְעֲשׁ֣וּ הַסִּפִּ֗ים וּבְצַ֙עַם֙ בְּרֹ֣אשׁ כֻּלָּ֔ם וְאַחֲרִיתָ֖ם בַּחֶ֣רֶב אֶהֱרֹ֑ג לֹֽא־יָנ֤וּס לָהֶם֙ נָ֔ס וְלֹֽא־יִמָּלֵ֥ט לָהֶ֖ם פָּלִֽיט׃
2 ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು. (Sheol h7585)
אִם־יַחְתְּר֣וּ בִשְׁא֔וֹל מִשָּׁ֖ם יָדִ֣י תִקָּחֵ֑ם וְאִֽם־יַעֲלוּ֙ הַשָּׁמַ֔יִם מִשָּׁ֖ם אוֹרִידֵֽם׃ (Sheol h7585)
3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.
וְאִם־יֵחָֽבְאוּ֙ בְּרֹ֣אשׁ הַכַּרְמֶ֔ל מִשָּׁ֥ם אֲחַפֵּ֖שׂ וּלְקַחְתִּ֑ים וְאִם־יִסָּ֨תְר֜וּ מִנֶּ֤גֶד עֵינַי֙ בְּקַרְקַ֣ע הַיָּ֔ם מִשָּׁ֛ם אֲצַוֶּ֥ה אֶת־הַנָּחָ֖שׁ וּנְשָׁכָֽם׃
4 ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”
וְאִם־יֵלְכ֤וּ בַשְּׁבִי֙ לִפְנֵ֣י אֹֽיבֵיהֶ֔ם מִשָּׁ֛ם אֲצַוֶּ֥ה אֶת־הַחֶ֖רֶב וַהֲרָגָ֑תַם וְשַׂמְתִּ֨י עֵינִ֧י עֲלֵיהֶ֛ם לְרָעָ֖ה וְלֹ֥א לְטוֹבָֽה׃
5 ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.
וַאדֹנָ֨י יְהוִ֜ה הַצְּבָא֗וֹת הַנּוֹגֵ֤עַ בָּאָ֙רֶץ֙ וַתָּמ֔וֹג וְאָבְל֖וּ כָּל־י֣וֹשְׁבֵי בָ֑הּ וְעָלְתָ֤ה כַיְאֹר֙ כֻּלָּ֔הּ וְשָׁקְעָ֖ה כִּיאֹ֥ר מִצְרָֽיִם
6 ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.
הַבּוֹנֶ֤ה בַשָּׁמַ֙יִם֙ מעלותו וַאֲגֻדָּת֖וֹ עַל־אֶ֣רֶץ יְסָדָ֑הּ הַקֹּרֵ֣א לְמֵֽי־הַיָּ֗ם וַֽיִּשְׁפְּכֵ֛ם עַל־פְּנֵ֥י הָאָ֖רֶץ יְהוָ֥ה שְׁמֽוֹ׃
7 ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?
הֲל֣וֹא כִבְנֵי֩ כֻשִׁיִּ֨ים אַתֶּ֥ם לִ֛י בְּנֵ֥י יִשְׂרָאֵ֖ל נְאֻם־יְהוָ֑ה הֲל֣וֹא אֶת־יִשְׂרָאֵ֗ל הֶעֱלֵ֙יתִי֙ מֵאֶ֣רֶץ מִצְרַ֔יִם וּפְלִשְׁתִּיִּ֥ים מִכַּפְתּ֖וֹר וַאֲרָ֥ם מִקִּֽיר׃
8 ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.
הִנֵּ֞ה עֵינֵ֣י ׀ אֲדֹנָ֣י יְהוִ֗ה בַּמַּמְלָכָה֙ הַֽחַטָּאָ֔ה וְהִשְׁמַדְתִּ֣י אֹתָ֔הּ מֵעַ֖ל פְּנֵ֣י הָאֲדָמָ֑ה אֶ֗פֶס כִּ֠י לֹ֣א הַשְׁמֵ֥יד אַשְׁמִ֛יד אֶת־בֵּ֥ית יַעֲקֹ֖ב נְאֻם־יְהוָֽה׃
9 “ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.
כִּֽי־הִנֵּ֤ה אָֽנֹכִי֙ מְצַוֶּ֔ה וַהֲנִע֥וֹתִי בְכָֽל־הַגּוֹיִ֖ם אֶת־בֵּ֣ית יִשְׂרָאֵ֑ל כַּאֲשֶׁ֤ר יִנּ֙וֹעַ֙ בַּכְּבָרָ֔ה וְלֹֽא־יִפּ֥וֹל צְר֖וֹר אָֽרֶץ׃
10 ೧೦ ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.
בַּחֶ֣רֶב יָמ֔וּתוּ כֹּ֖ל חַטָּאֵ֣י עַמִּ֑י הָאֹמְרִ֗ים לֹֽא־תַגִּ֧ישׁ וְתַקְדִּ֛ים בַּעֲדֵ֖ינוּ הָרָעָֽה׃
11 ೧೧ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
בַּיּ֣וֹם הַה֔וּא אָקִ֛ים אֶת־סֻכַּ֥ת דָּוִ֖יד הַנֹּפֶ֑לֶת וְגָדַרְתִּ֣י אֶת־פִּרְצֵיהֶ֗ן וַהֲרִֽסֹתָיו֙ אָקִ֔ים וּבְנִיתִ֖יהָ כִּימֵ֥י עוֹלָֽם׃
12 ೧೨ ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು” ಎಂಬುದಾಗಿ ಯೆಹೋವನು ನುಡಿದಿದ್ದಾನೆ.
לְמַ֨עַן יִֽירְשׁ֜וּ אֶת־שְׁאֵרִ֤ית אֱדוֹם֙ וְכָל־הַגּוֹיִ֔ם אֲשֶׁר־נִקְרָ֥א שְׁמִ֖י עֲלֵיהֶ֑ם נְאֻם־יְהוָ֖ה עֹ֥שֶׂה זֹּֽאת׃ פ
13 ೧೩ ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.
הִנֵּ֨ה יָמִ֤ים בָּאִים֙ נְאֻם־יְהוָ֔ה וְנִגַּ֤שׁ חוֹרֵשׁ֙ בַּקֹּצֵ֔ר וְדֹרֵ֥ךְ עֲנָבִ֖ים בְּמֹשֵׁ֣ךְ הַזָּ֑רַע וְהִטִּ֤יפוּ הֶֽהָרִים֙ עָסִ֔יס וְכָל־הַגְּבָע֖וֹת תִּתְמוֹגַֽגְנָה׃
14 ೧೪ ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.
וְשַׁבְתִּי֮ אֶת־שְׁב֣וּת עַמִּ֣י יִשְׂרָאֵל֒ וּבָנ֞וּ עָרִ֤ים נְשַׁמּוֹת֙ וְיָשָׁ֔בוּ וְנָטְע֣וּ כְרָמִ֔ים וְשָׁת֖וּ אֶת־יֵינָ֑ם וְעָשׂ֣וּ גַנּ֔וֹת וְאָכְל֖וּ אֶת־פְּרִיהֶֽם׃
15 ೧೫ ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.
וּנְטַעְתִּ֖ים עַל־אַדְמָתָ֑ם וְלֹ֨א יִנָּתְשׁ֜וּ ע֗וֹד מֵעַ֤ל אַדְמָתָם֙ אֲשֶׁ֣ר נָתַ֣תִּי לָהֶ֔ם אָמַ֖ר יְהוָ֥ה אֱלֹהֶֽיךָ׃

< ಆಮೋಸನು 9 >