< ಆಮೋಸನು 1 >

1 ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.
דִּבְרֵ֣י עָמ֔וֹס אֲשֶׁר־הָיָ֥ה בַנֹּקְדִ֖ים מִתְּק֑וֹעַ אֲשֶׁר֩ חָזָ֨ה עַל־יִשְׂרָאֵ֜ל בִּימֵ֣י ׀ עֻזִיָּ֣ה מֶֽלֶךְ־יְהוּדָ֗ה וּבִימֵ֞י יָרָבְעָ֤ם בֶּן־יוֹאָשׁ֙ מֶ֣לֶךְ יִשְׂרָאֵ֔ל שְׁנָתַ֖יִם לִפְנֵ֥י הָרָֽעַשׁ׃
2 ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”
וַיֹּאמַ֓ר ׀ יְהוָה֙ מִצִיּ֣וֹן יִשְׁאָ֔ג וּמִירוּשָׁלִַ֖ם יִתֵּ֣ן קוֹל֑וֹ וְאָֽבְלוּ֙ נְא֣וֹת הָרֹעִ֔ים וְיָבֵ֖שׁ רֹ֥אשׁ הַכַּרְמֶֽל׃ פ
3 ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.
כֹּ֚ה אָמַ֣ר יְהוָ֔ה עַל־שְׁלֹשָׁה֙ פִּשְׁעֵ֣י דַמֶּ֔שֶׂק וְעַל־אַרְבָּעָ֖ה לֹ֣א אֲשִׁיבֶ֑נּוּ עַל־דּוּשָׁ֛ם בַּחֲרֻצ֥וֹת הַבַּרְזֶ֖ל אֶת־הַגִּלְעָֽד׃
4 ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು.
וְשִׁלַּ֥חְתִּי אֵ֖שׁ בְּבֵ֣ית חֲזָאֵ֑ל וְאָכְלָ֖ה אַרְמְנ֥וֹת בֶּן־הֲדָֽד׃
5 ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.
וְשָֽׁבַרְתִּי֙ בְּרִ֣יחַ דַּמֶּ֔שֶׂק וְהִכְרַתִּ֤י יוֹשֵׁב֙ מִבִּקְעַת־אָ֔וֶן וְתוֹמֵ֥ךְ שֵׁ֖בֶט מִבֵּ֣ית עֶ֑דֶן וְגָל֧וּ עַם־אֲרָ֛ם קִ֖ירָה אָמַ֥ר יְהוָֽה׃ פ
6 ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.
כֹּ֚ה אָמַ֣ר יְהוָ֔ה עַל־שְׁלֹשָׁה֙ פִּשְׁעֵ֣י עַזָּ֔ה וְעַל־אַרְבָּעָ֖ה לֹ֣א אֲשִׁיבֶ֑נּוּ עַל־הַגְלוֹתָ֛ם גָּל֥וּת שְׁלֵמָ֖ה לְהַסְגִּ֥יר לֶאֱדֽוֹם׃
7 ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.
וְשִׁלַּ֥חְתִּי אֵ֖שׁ בְּחוֹמַ֣ת עַזָּ֑ה וְאָכְלָ֖ה אַרְמְנֹתֶֽיהָ׃
8 ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.
וְהִכְרַתִּ֤י יוֹשֵׁב֙ מֵֽאַשְׁדּ֔וֹד וְתוֹמֵ֥ךְ שֵׁ֖בֶט מֵֽאַשְׁקְל֑וֹן וַהֲשִׁיב֨וֹתִי יָדִ֜י עַל־עֶקְר֗וֹן וְאָֽבְדוּ֙ שְׁאֵרִ֣ית פְּלִשְׁתִּ֔ים אָמַ֖ר אֲדֹנָ֥י יְהוִֽה׃ פ
9 ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.
כֹּ֚ה אָמַ֣ר יְהוָ֔ה עַל־שְׁלֹשָׁה֙ פִּשְׁעֵי־צֹ֔ר וְעַל־אַרְבָּעָ֖ה לֹ֣א אֲשִׁיבֶ֑נּוּ עַֽל־הַסְגִּירָ֞ם גָּל֤וּת שְׁלֵמָה֙ לֶאֱד֔וֹם וְלֹ֥א זָכְר֖וּ בְּרִ֥ית אַחִֽים׃
10 ೧೦ ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”
וְשִׁלַּ֥חְתִּי אֵ֖שׁ בְּח֣וֹמַת צֹ֑ר וְאָכְלָ֖ה אַרְמְנֹתֶֽיהָ׃ פ
11 ೧೧ ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.
כֹּ֚ה אָמַ֣ר יְהוָ֔ה עַל־שְׁלֹשָׁה֙ פִּשְׁעֵ֣י אֱד֔וֹם וְעַל־אַרְבָּעָ֖ה לֹ֣א אֲשִׁיבֶ֑נּוּ עַל־רָדְפ֨וֹ בַחֶ֤רֶב אָחִיו֙ וְשִׁחֵ֣ת רַחֲמָ֔יו וַיִּטְרֹ֤ף לָעַד֙ אַפּ֔וֹ וְעֶבְרָת֖וֹ שְׁמָ֥רָה נֶֽצַח׃
12 ೧೨ ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”
וְשִׁלַּ֥חְתִּי אֵ֖שׁ בְּתֵימָ֑ן וְאָכְלָ֖ה אַרְמְנ֥וֹת בָּצְרָֽה׃ פ
13 ೧೩ ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.
כֹּ֚ה אָמַ֣ר יְהוָ֔ה עַל־שְׁלֹשָׁה֙ פִּשְׁעֵ֣י בְנֵֽי־עַמּ֔וֹן וְעַל־אַרְבָּעָ֖ה לֹ֣א אֲשִׁיבֶ֑נּוּ עַל־בִּקְעָם֙ הָר֣וֹת הַגִּלְעָ֔ד לְמַ֖עַן הַרְחִ֥יב אֶת־גְּבוּלָֽם׃
14 ೧೪ ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.
וְהִצַּ֤תִּי אֵשׁ֙ בְּחוֹמַ֣ת רַבָּ֔ה וְאָכְלָ֖ה אַרְמְנוֹתֶ֑יהָ בִּתְרוּעָה֙ בְּי֣וֹם מִלְחָמָ֔ה בְּסַ֖עַר בְּי֥וֹם סוּפָֽה
15 ೧೫ ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.
וְהָלַ֥ךְ מַלְכָּ֖ם בַּגּוֹלָ֑ה ה֧וּא וְשָׂרָ֛יו יַחְדָּ֖ו אָמַ֥ר יְהוָֽה׃ פ

< ಆಮೋಸನು 1 >