< ಕೊಲೊಸ್ಸೆಯರಿಗೆ ಬರೆದ ಪತ್ರಿಕೆ 1 >
1 ೧ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು,
Manzo Kristi yesu, ni nyme irji mba Timoti vayinbu.
2 ೨ ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.
Hi ni bi tsatra ndi Irji, wandi ba to kponji tre ni miri vayinbu biwandi ki bimba nimi Kristi biwa ba heni Kolosi. Du sisron ni kinklasron ni mi Irji nitimbu shu yiwu.
3 ೩ ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
Kisi ngiri ni Irji itimbu mba ti Baci mbu Kristi. konita kibre Irjhi nitumbi chachu.
4 ೪ ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.
Kiwo njanjinbi nimi Kristi Yesu ni ngyeme iwandi bi heniwu niwandi nitumbi bahe hwahwere ni Irji.
5 ೫ ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.
Biheni iwayi nitu ngyiri u njaji nitu ikpewandi batizi niyiwu nishulu. biwo yanko nikponji tre u jaji blatrerji.
6 ೬ ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.
Iwandi niyimu, tre irji, ningrji mirti na kpobi nigbunglua kigon. ani titombane myimbi Irji niviwandi bi wou' nitindum'u' ni malatiiwandi Irji ujanji.
7 ೭ ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.
Itre irji hibiwandi kiwoni Abafaras, ikpa wandi kinyebeu, ahi kpanbu ubre, ahi jiji kpanbu iwandi kinyebe niwu'a. wawuyi ni kirli nikoshishi Almasihu natre ninyumbu.
8 ೮ ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.
Abafaras a watre nyebenbi nimyimre.
9 ೯ ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
Rjinise tunturmu niviwandi kiwotokima, kikukri nibrerji gbangbanme. Kisi kukrli nibre ninduyi to kpekpeme nikpawandi asirimrenituma nimyitoma mrema ni myi tre Rji ni sisriji.
10 ೧೦ ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
Kisibrerji ninduyi zre ezrewandi irjimiheni kinkla sro'a na ngyemeniyi kibrerjiindu bingirji midi ninko ndu dindi biwlude nimyi trerji
11 ೧೧ ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,
Ki brerji ungwroyi nimiyi kpe wandi bitoti'u nitu ngbegle kwungbarju ni vusro ni gblestro.
12 ೧೨ ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.
Kibrerji bingyiri ni kinkla sronitimbu iwandi ahenishu atinko iwandi bi fe isanbi 'u' gado nimyibiwandi baheni srondidi ni myikpa.
13 ೧೩ ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.
Arutakpani ngbengble bwu yeni jiji vrema.
14 ೧೪ ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
Nitu jijivrema anikarji nawuruhlatrenbu hlega ni'atawu.
15 ೧೫ ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.
wa wui Ivrerji umumla ni gbugluimpempeme kongye aheni kogonma nindidi niwandi anahi dindimana.
16 ೧೬ ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.
Nintuma Irji ati kpibiadi baheshu nibiandi baheni ngbunglu biandi kitoba nibiandi kina tobana ni dindima niwandi ana dindimana.
17 ೧೭ ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.
Ni kosa nibi ngbengble ati kongye chudu.
18 ೧೮ ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.
Ngarli wawu'i hitunza utrarji. ngarli wawu'i hi ri nimyi mumla iwandi akyu na wlundemiyibe, nitukima aheni bubumumla ni kongye.
19 ೧೯ ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,
Don irji aheni kinklansoro nitu Ibrama a shuninema.
20 ೨೦ ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.
Ngarli akarji ni kongye kmahini wawunitu vuvre. irji aji kukla sorn ye nituyi ma iwandi akahlega. irji'a karji kbahini kpama, nikpwiwandi baheni gbuglu nikpi biwandi waheni shulu.
21 ೨೧ ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.
Tunisen bina bitsri nirji, bina kanbiniwu harmyisorombi, binabiandi bitali memekpi'a.
22 ೨೨ ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.
Abayaziza'a na karji niyi'u nitu kyuma ukpa. atitoyi nami son kayinibiandi baheni kinklasro'a biandi bana heni kpeandi batreni tumba mememana.
23 ೨೩ ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
Idanbimlazre nimyi kinkla sroa'a nikukrli ngbangba, binabi kmayagon nimyi yankon niningyiri nitrerjiandi bizi wou. Iwayi hetrerji wandi kowanrji iwandi Irji tiu niza shulu. iwayi hitre Rji iwandi ime Bulus mihgranituma
24 ೨೪ ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
Ziza'a mingyri nitu ya'a wandi misha nitumbi'a nimyi mitikpewandu a don almasihu uwyama nitu kpamawandi wawuyi hetutrerji'a.
25 ೨೫ ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.
Nitu itutrerji mikamatigra, nitu idiwandi izinendumitini tumbi, domin tinduma wawurji kle.
26 ೨೬ ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. (aiōn )
Iwayi'i he gbugblu unjanji iwandi a kuri ise ni se haryeluwa. ziza'a bahla'u kpekesheme nibiandi bangye me niwu. (aiōn )
27 ೨೭ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
Nitumbayi irjison unjanjima nimyinji itsro Almasihumbani myimba, tondi ikimba siye.
28 ೨೮ ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.
Iwayihikpewandi kisidubu. kisi nworo inji mpepembawu kitro kungi, andu to kpewandi aheni kpa. don kimi nji ndi wandi anihurji ngbagbame'a himi ko shishi.
29 ೨೯ ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.
Nitu nayi mitindu ni srori ni ngbengble iwandi ahemi newu ni gbengblenmu