< ಕೊಲೊಸ್ಸೆಯರಿಗೆ ಬರೆದ ಪತ್ರಿಕೆ 3 >

1 ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
Nkashele Ongolobhe abhavyosezye pandwemo no Kristi, ganzajiamambo gamwauya gashele o Kristi akhala hukhono gwakwe ogwahushilome wa Ngolobhe.
2 ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.
Sebhaji amambo gagali amwanya gashelesegaoegenzi.
3 ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.
Afwatanaje mfwinye naolukhalo lwenyu gafisilwe pandwemo no Kristi hwa Ngolobhe.
4 ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.
O wakati o Kristi naibhoneha, afwateje lukhalo lwenyu, shashesho namwe nantele mwaibhonehana no mwene hutuntumu.
5 ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
Esho gafisi amambo gagalipansiyai omalaya, ochafu, azilishe shibhibhi, eniyaimbibhi, nanyonywe, eyo mputo oilenka.
6 ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.
Afwataneje amambo ega ilyoyo elya Ngolobhe libhenza, whabhana bhashelesesebha whogopa.
7 ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ.
Afwataneje amambo ega amwe nantele mwajendilehwego nna mwakhalaga hwabhene.
8 ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.
Eshi lazima mgefye amambo ega gonti yau. Ilyoyo, enkuni enia embibhi, indigo, nenongwa embibhi, gagafuma mwilomulyenyu.
9 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
Msakhopelane mwewhamwe afatane mwabhue ubhuntu wenyu owehale ne mbombo yakwe.
10 ೧೦ ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
Mkwate ubhuntu opya, wahwubhombashipya nenjele afume no lengano whayola yabhomba.
11 ೧೧ ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
Hunjele ezi nomo Myunani, no Mmyuhadi atahiliwe nasinte tailiwe, obhazo nosagabhaza otumwa yasagali tumwa lelopesho oKristi yomambo gonti wagonti.
12 ೧೨ ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
Nkashele asalulwe bhangolobhe, abhoziwa naabhelwo vwano, hwikwattizi owhuntu owinza, epyana awhishe opole na ajimbe.
13 ೧೩ ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
Ejelanaji mwemwehwamwe. Sajilanaji shilamuntu nowamwabho, nkashele umntu alamiha whawamwabho asajileshashila, nashi ogosi sabhhasajie amwe.
14 ೧೪ ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
Ega amambo gonti, mganane eshoshenyezyo shegolosi.
15 ೧೫ ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
E amani eya Kristi ebhalongozye amoyo genyu. Ehalishe enashe olweteho eli huje mwakwiziwe hubelegumo mbhenolusalifo.
16 ೧೬ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
Izu elya Kristi likhale mhatiyenyu hubhutajiri. Neshinshi yontii fundizanyaji na ajehane mwemwe namwe nahwembe, enyembo, ne nyembo zya humwoyo e, mbaji salifiaji amogogenyu wha Ngolobhe.
17 ೧೭ ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
Hahonti hambhomba whizu olwe whitawailya Gosi O Yesu, peliensalifyo Ongolobhe oBaba ashilile whamwene.
18 ೧೮ ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
Mbhashe ihaji hwalumebhenyu, nashisasungwa Ogosi.
19 ೧೯ ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
Amwebhalume bhagani abhashe bhenyu msabhebhakhali whabhene.
20 ೨೦ ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
Wana bhogopaji apaji bhenyu humambogoti, eshosasungwa Ogosi.
21 ೨೧ ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
Mwababa mgaje whandizye abahna bhenyu. bhasahilamwe.
22 ೨೨ ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.
Fasontelezi bhogopi agosi bhenyu hubele na mambo gonti, saga huhuduma eyimasonashiabhantu. Nashi abhantu bhasombezye wene nahumoyo uwelwoli mwogopaji Ongolobhe.
23 ೨೩ ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.
Hahonti hambhomba bhombaji afume mioyo genyu nashi Ogosi nate hwabhantu.
24 ೨೪ ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.
Mmenyeaje mbhapate etunzo eyatabhale afumeusha Gosi yo Kristi Ogosi yamhuputa.
25 ೨೫ ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.
Eshiwawhonti yabhomba gasheleseminza abhapate longwe hunjendo zya shelesenyinza gabhombele amnawhemele.

< ಕೊಲೊಸ್ಸೆಯರಿಗೆ ಬರೆದ ಪತ್ರಿಕೆ 3 >