< ದಾನಿಯೇಲನು 1 >
1 ೧ ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
Jojaķima, Jūda ķēniņa, trešā valdīšanas gadā Nebukadnecars, Bābeles ķēniņš, nāca uz Jeruzālemi un apmetās pret to.
2 ೨ ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.
Un Tas Kungs nodeva Jojaķimu, Jūda ķēniņu, viņa rokā un vienu daļu Dieva nama trauku, un viņš tos noveda uz Sineāra zemi sava dieva namā, un tos traukus viņš nolika sava dieva mantu namā.
3 ೩ ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ
Un ķēniņš sacīja uz Aspenasu, savu kambarjunkuru uzraugu, lai no Israēla bērniem, no ķēniņu un lielkungu dzimuma izlasa
4 ೪ ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.
Jaunekļus, kas bez vainas, skaistus vaigā un samanīgus visādā gudrībā un labi mācītus un kam gudrs prāts, un kas būtu derīgi ķēniņa pilī stāvēt, ka tie taptu mācīti Kaldeju rakstā un valodā.
5 ೫ ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.
Un ķēniņš tiem sprieda, ko tiem ikdienas būs dot no ķēniņa ēdiena un no tā vīna, ko pats dzēra, un ka tie trīs gadus tā taptu audzināti, un ka pēc stāvētu ķēniņa priekšā.
6 ೬ ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.
Starp tiem nu bija no Jūda bērniem Daniēls, Ananija, Mišaēls un Azarija.
7 ೭ ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
Un kambarjunkuru uzraugs tiem deva citus vārdus un nosauca Daniēli par Beltsacaru un Ananiju par Sadrahu un Mišaēli par Mesahu un Azariju par AbedNegu.
8 ೮ ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.
Bet Daniēls apņēmās savā sirdī, nesagānīties ar ķēniņa ēdienu nedz ar to vīnu, ko viņš dzēra, tādēļ tas lūdza kambarjunkuru uzraugam, lai viņam atļautu nesagānīties.
9 ೯ ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.
Un Dievs Daniēlim deva žēlastību un apžēlošanu kambarjunkuru uzrauga priekšā.
10 ೧೦ ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ತೆಗೆಯಿಸಲು ನೀವು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು.
Un kambarjunkuru uzraugs sacīja uz Daniēli: es bīstos savu kungu, ķēniņu, kas jūsu ēdienu un dzērienu tā nospriedis, ka viņš neierauga, ka jūsu vaigi vājāki nekā to citu jaunekļu, kas jūsu vecumā. Tad jūs pār manu galvu vestu gatavu nāvi no ķēniņa.
11 ೧೧ ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು
Bet Daniēls sacīja uz to barības sargu, ko kambarjunkuru uzraugs bija iecēlis pār Daniēli, Ananiju, Mišaēli un Azariju:
12 ೧೨ ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.
Raugi jel saviem kalpiem dot kādas desmit dienas zemes augļus ēst un ūdeni dzert.
13 ೧೩ ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು.
Un tad lai apskata, kāds mūsu ģīmis būs tavā priekšā, un kāds to jaunekļu ģīmis, kas ķēniņa ēdienu ēd, un dari tad ar saviem kalpiem, kā tu pats redzēsi.
14 ೧೪ ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.
Un viņš tiem paklausīja šinī lietā un raudzīja desmit dienas ar tiem tā darīt.
15 ೧೫ ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.
Un pēc desmit dienām tas atrada viņu izskatu skaistāku un viņu miesas pilnīgākas, nekā visu citu jaunekļu, kas ēda no ķēniņa ēdiena.
16 ೧೬ ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.
Tad tas barības sargs atņēma to viņiem nospriesto ēdienu un vīnu un tiem deva ēst zemes augļus.
17 ೧೭ ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.
Un šiem četriem jaunekļiem Dievs deva zināšanu un saprašanu visādā rakstā un gudrībā, bet Daniēlim viņš deva saprast visādas parādīšanas un sapņus.
18 ೧೮ ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.
Un kad tas laiks bija pagājis, ko ķēniņš bija pavēlējis, viņus priekšā vest, tad kambarjunkuru uzraugs tos veda pie Nebukadnecara.
19 ೧೯ ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.
Un ķēniņš ar tiem runāja, bet starp visiem neatradās neviena tāda, kā Daniēls, Ananija, Mišaēls un Azarija, un tie kalpoja ķēniņa priekšā.
20 ೨೦ ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
Un visādā gudrībā un zināšanā, ko ķēniņš tiem jautāja, viņš tos atrada desmitkārt pārākus nekā visus zīlniekus un vārdotājus pa visu savu valsti.
21 ೨೧ ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.
Un Daniēls tur palika līdz ķēniņa Kirus pirmam gadam.