< ದಾನಿಯೇಲನು 10 >
1 ೧ ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.
Fars padşahı Kirin hökmranlığının üçüncü ilində Belteşassar adlanan Danielə bir vəhy gəldi. Bu vəhy həqiqi idi, amma anlaşılması çox çətin oldu. Görüntü ilə izah ediləndə o bu vəhyi dərk etdi.
2 ೨ ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.
O günlər mən Daniel üç həftə yas tutdum.
3 ೩ ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.
Üç həftə bitənə qədər mən dadlı yemək yemədim, ət və şərab dilimə dəymədi və heç bir ətirli yağ sürtmədim.
4 ೪ ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ
Birinci ayın iyirmi dördüncü günü mən böyük Dəclə çayının kənarında idim.
5 ೫ ಟೈಗ್ರಿಸ್ ಮಹಾನದಿಯ ದಡದ ಮೇಲೆ ಇದ್ದು ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು;
Başımı qaldırıb gördüm ki, qarşımda kətan paltar geyinmiş, beli xalis qızılla qurşanan bir nəfər var.
6 ೬ ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು.
Onun bədəni sarı yaqut kimi, üzü şimşəyə bənzər, gözləri yanar məşəllər tək, qolları və ayaqları cilalanmış tunc kimi işıldayırdı, danışıq səsi kütlənin gurultusu kimi idi.
7 ೭ ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.
Yalnız mən Daniel bu görüntünü gördüm, mənimlə birgə olan adamlar isə bunu görmədi. Ancaq onların arasına elə vəlvələ düşdü ki, gizlənmək üçün qaçdılar.
8 ೮ ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.
Mən tək qaldım. Bu böyük görüntünü görəndə məndə qüvvət qalmadı, üzümün siması dəyişdi və taqətdən düşdüm.
9 ೯ ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು.
Mən onun danışıq səsini eşitdim. Danışıq səsini eşidəndə dərin yuxuya getdim və üzüstə düşüb torpağa uzandım.
10 ೧೦ ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು.
Bu vaxt mənə bir əl toxundu və məni əllərimlə dizlərimin üstünə qoydu.
11 ೧೧ ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.
O mənə dedi: «Ey Allahın sevimlisi olan Daniel! Sənə dediyim sözləri dərk et və ayağa qalx, çünki indi sənin yanına göndərilmişəm». O bu sözləri deyəndə mən titrəyərək ayağa qalxdım.
12 ೧೨ ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.
O mənə dedi: «Qorxma, Daniel! Dərrakə qazanmağa meyl edib, Allahın önündə özünü aşağı tutmağı qərara aldığın üçün ilk gündən sözlərin eşidildi və mən sənin sözlərinə görə gəldim.
13 ೧೩ ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,
Lakin Fars ölkəsinin hamisi olan mələk iyirmi bir gün mənə qarşı dayandı. O zaman baş mələklərdən biri olan Mikael köməyimə gəldi, çünki mən orada Fars ölkəsinin hamisi olan mələklə birgə qalmışdım.
14 ೧೪ ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.
İndi gəldim ki, gələcəkdə xalqının başına nə gələcəyini sənə başa salım, çünki bu görüntü gələcək dövrə aiddir».
15 ೧೫ ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.
O belə sözlər söyləyərkən mən üzüstə yerə yıxılıb dinməz qaldım.
16 ೧೬ ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.
Bu vaxt bəşər övladına bənzəyən bir nəfər dodaqlarıma toxundu. Mən ağzımı açıb danışmağa başladım və qarşımda durana dedim: «Ağam, bu görüntüyə görə əzaba qərq oldum və taqətim qalmadı.
17 ೧೭ ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ” ಎಂದು ಹೇಳಿದೆನು.
Mən qulun ağamla necə danışa bilərəm? Çünki mənim gücüm tükəndi və canımda nəfəs qalmadı».
18 ೧೮ ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.
Onda insan simasında olan həmin şəxs yenə mənə toxunub güc verdi.
19 ೧೯ ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”
O dedi: «Ey Allahın sevimlisi, qorxma, sənə sülh olsun, möhkəm ol, möhkəm ol!» O mənimlə danışanda mən qüvvət tapıb dedim: «Ey ağam, danış, çünki sən mənə güc verdin».
20 ೨೦ ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು.
O dedi: «Bilirsənmi mən niyə sənin yanına gəlmişəm? İndi mən Fars hamisi olan mələklə mübarizə etməyə qayıdıram. Mən gəlincə Yunan hamisi olan mələk gələcək.
21 ೨೧ ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”
Ancaq əvvəlcə mən həqiqət Kitabında yazılmış şeyləri sənə bildirəcəyəm. Onlara qarşı mübarizədə başçınız Mikaeldən başqa mənə köməkçi olan heç kəs yoxdur.