< ದಾನಿಯೇಲನು 11 >

1 ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು.
Mən Midiyalı Daranın padşahlığının birinci ilində ona dayaq olmaq və onu qorumaq üçün yanında qaldım.
2 ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.
İndi həqiqəti sənə bildirirəm: Fars ölkəsində daha üç padşah olacaq. Dördüncüsünün isə hamısından çox var-dövləti olacaq və bunun hesabına qüvvətlənəndə hamını Yunan padşahlığına qarşı qaldıracaq.
3 ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾ ಪ್ರಭುತ್ವದಿಂದ ಆಳುತ್ತಾ, ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.
Sonra igid bir padşah gələcək, çox qüdrətli hökmdar olacaq və öz istədiyini edəcək.
4 ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.
Ancaq onun gəldiyi vaxt padşahlığı dağılıb göylərin dörd küləyinin səmtinə bölünəcək, onun nəslinə keçməyəcək və hökmranlığı kimi güclü olmayacaq. Çünki onun padşahlığı dağılacaq və nəslindən olmayan adamlara qalacaq.
5 ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು.
Cənub padşahı güclənəcək, ancaq sərkərdələrindən biri ondan daha güclü olacaq, hökmranlıq edəcək və qüdrətli hökmdar olacaq.
6 ಕೆಲವು ವರ್ಷಗಳಾದ ಮೇಲೆ ಅವರು ಸೇರಿಕೊಳ್ಳುವರು. ದಕ್ಷಿಣ ದಿಕ್ಕಿನ ರಾಜನ ಕುಮಾರಿಯು ಉತ್ತರ ರಾಜ್ಯದ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು. ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಲು ಆಗದು; ಅವನೂ, ಅವನ ತೋಳೂ ನಿಲ್ಲವು; ಅವಳೂ, ಅವಳನ್ನು ಕರೆದು ತಂದವರೂ, ಪಡೆದವನೂ, ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.
Ancaq bir neçə ildən sonra onlar razılığa gələcək. Cənub padşahının qızı şimal padşahının yanına gedəcək ki, sülh sazişi bağlasın. Amma bu qadın öz mövqeyini saxlaya bilməyəcək. Şimal padşahının ömrü də, hakimiyyəti də uzun sürməyəcək. Qadın, onu müşayiət edənlər, atası və o vaxt ona dayaq duranlar təslim ediləcək.
7 ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಅವರೊಡನೆ ಯುದ್ಧಮಾಡಿ, ಅವರನ್ನು ಗೆಲ್ಲುವರು.
Lakin o qadının nəslindən biri cənub padşahının yerinə keçəcək. O, şimal padşahının ordusuna hücum edib onun qalasına girəcək. Onlarla vuruşub üstün gələcək.
8 ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.
Hətta onların allahlarını, tökmə bütlərini qiymətli qızıl və gümüş qabları ilə birlikdə Misirə çəkib aparacaq. Bir neçə il ərzində şimal padşahını rahat buraxacaq.
9 ಬಳಿಕ ಉತ್ತರ ದಿಕ್ಕಿನ ರಾಜನು ದಕ್ಷಿಣ ದಿಕ್ಕಿನ ರಾಜನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗುವನು.
Hərçənd o da cənub padşahının ölkəsinə hücum edəcək, ancaq öz torpağına qayıdacaq.
10 ೧೦ ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.
Sonra şimal padşahının oğulları silahlanıb çoxlu qoşun toplayacaq. Qoşun sel kimi gəlib keçəcək və irəliləyərək cənub padşahının qalasına hücum edəcək.
11 ೧೧ ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು.
Cənub padşahı qəzəblənib çıxacaq və onunla – şimal padşahı ilə vuruşacaq. O da böyük bir qoşun çıxaracaq, lakin bu qoşun cənub padşahına təslim ediləcək.
12 ೧೨ ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.
Qoşun məğlub olanda cənub padşahı ürəyi qürrələnərək on minlərlə adamı həlak edəcək, ancaq qələbəsi uzun sürməyəcək.
13 ೧೩ ತರುವಾಯ ಉತ್ತರ ದಿಕ್ಕಿನ ರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹಳ ವರ್ಷಗಳ ನಂತರ ಮಹಾ ಸೈನ್ಯದಿಂದಲೂ, ಅಧಿಕ ಆಯುಧಗಳ ಸಮೇತವಾಗಿಯೂ ಬರುವನು.
Çünki şimal padşahı qayıdıb əvvəlkindən daha böyük qoşun çıxaracaq və bir neçə ildən sonra tam silahlanmış böyük bir ordu ilə gələcək.
14 ೧೪ ಆ ಕಾಲದಲ್ಲಿ ಅನೇಕರು ದಕ್ಷಿಣ ದಿಕ್ಕಿನ ರಾಜನಿಗೆ ಎದುರು ನಿಲ್ಲುವರು. ಇದಲ್ಲದೆ ನಿನ್ನ ಜನರಲ್ಲಿ ಹಿಂಸಕರು ಕನಸನ್ನು ನಿಜ ಮಾಡಬೇಕೆಂದು ದಂಗೆ ಏಳುವರು. ಆದರೆ ಬಿದ್ದುಹೋಗುವರು.
O zaman bir çoxu cənub padşahına qarşı çıxacaq. Görüntü yerinə yetsin deyə sənin xalqından qoluzorlular da ayağa qalxacaq, ancaq uğur qazanmayacaq.
15 ೧೫ ಉತ್ತರ ದಿಕ್ಕಿನ ರಾಜನು ಬಂದು ದಿಬ್ಬ ಹಾಕಿ, ಕೋಟೆ ಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.
Şimal padşahı gəlib hasarlara torpaq yığaraq istehkamlı şəhəri alacaq. Cənubun qüvvələri onun qarşısında tab gətirməyəcək, seçmə qoşunu da müqavimət göstərə bilməyəcək.
16 ೧೬ ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.
İstilaçı şimal padşahı istədiyini edəcək və heç kəs onun qarşısında dura bilməyəcək. Gözəl ölkədə bir müddət qalacaq və oranı viran etməyə qadir olacaq.
17 ೧೭ ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.
Şimal padşahı ölkəsinin bütün qüvvələri ilə birgə gəlməyi qərara alacaq. Sülh sazişinin şərtlərini təklif edib yerinə yetirəcək və cənub padşahlığını məhv etmək üçün ona gənc bir arvad verəcək, ancaq hiyləsi baş tutmayacaq və ona kömək olmayacaq.
18 ೧೮ ಆ ಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹಳ ದೇಶಗಳನ್ನು ಆಕ್ರಮಿಸುವನು. ಆದರೆ ಅವನು ಮಾಡುವ ನಿಂದೆಯನ್ನು ಒಬ್ಬ ಸರದಾರನು ನಿಲ್ಲಿಸಿ ಬಿಡುವುದಲ್ಲದೆ, ಅದು ಅವನ ಮೇಲೆಯೇ ತಿರುಗುವಂತೆ ಮಾಡುವನು.
Sonra nəzərini sahil ölkələrinə çevirəcək və onların çoxunu alacaq. Ancaq bir sərkərdə onun etdiyi təhqirə son qoyacaq, hətta təhqirini öz başına gətirəcək.
19 ೧೯ ಆ ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು.
Sonra nəzərini öz ölkəsinin qalalarına tərəf çevirəcək. Ancaq büdrəyib yıxılacaq və ondan bir əsər qalmayacaq.
20 ೨೦ ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು, ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇಮಿಸುವನು. ಅವನು ಕೆಲವು ದಿನಗಳೊಳಗೆ ನಾಶವಾಗುವನು. ಅವನ ನಾಶ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.
Onun yerinə keçən padşah padşahlıq izzəti üçün öz vergiyığanını göndərəcək, ancaq az müddət sonra o da həlak olacaq. Amma bu, üsyan yaxud müharibə zamanı olmayacaq.
21 ೨೧ “ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.
Onun yerinə padşahlıq izzətinə layiq olmayan namərd bir adam keçəcək. O gözlənilmədən gəlib yaltaqlıqla hakimiyyəti qəsb edəcək.
22 ೨೨ ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.
Sel kimi istilaçı qoşunlar onun önündən silinib-süpürüləcək, onlar da, əhdin başçısı da məhv olacaq.
23 ೨೩ ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸ ಮಾಡುವನು; ಸ್ವಲ್ಪ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.
Onunla ittifaq bağlandıqdan sonra o hiylə işlədəcək və gəlib kiçik bir millətlə güc qazanacaq.
24 ೨೪ ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.
O gözlənilmədən ən münbit torpaqları istila edəcək, atalarının və babalarının görmədiyi işləri görəcək. Talan və qarət olunmuş mal-dövləti adamlarına paylayacaq və qalalara hücum etmək niyyətində olacaq, amma bu uzun sürməyəcək.
25 ೨೫ ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.
Sonra güc və cəsarət toplayıb böyük bir qoşunla cənub padşahına qarşı çıxacaq. Cənub padşahı da böyük və çox güclü bir ordu ilə döyüşə girəcək, ancaq müqavimət göstərə bilməyəcək, çünki ona qarşı qəsd quracaqlar.
26 ೨೬ ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು.
Onunla bir süfrədə oturanlar onu məhv edəcək. Ordusu silinib-süpürüləcək və çoxlu tələfat olacaq.
27 ೨೭ ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.
Bu padşahların hər ikisinin ürəyində pislik olacaq və bir süfrə arxasında yalan danışacaqlar. Ancaq heç bir şey baş tutmayacaq, çünki onların sonu müəyyən vaxtda olacaq.
28 ೨೮ ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.
Şimal padşahı böyük sərvətlə öz ölkəsinə qayıdacaq. Onun müqəddəs əhdə qarşı pis niyyəti olacaq və hərəkətə gəlib öz ölkəsinə dönəcək.
29 ೨೯ ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು.
Müəyyən bir vaxt yenə cənubu istila edəcək, ancaq nəticə əvvəlki kimi olmayacaq.
30 ೩೦ ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.
Kittim gəmiləri ona qarşı gələcək və o, ruhdan düşüb geri dönəcək. Qəzəblənib müqəddəs əhdə qarşı çıxacaq və yenə müqəddəs əhdə xəyanət edənlərlə yaxşı davranacaq.
31 ೩೧ ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.
Onun göndərdiyi qoşunlar qalxıb qalanı – Müqəddəs məkanı murdarlayacaq, daimi yandırma qurbanını dayandıracaq və viranəlik gətirən iyrənc şeyi orada qoyacaqlar.
32 ೩೨ ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.
O, əhdə xəyanət edənləri yaltaqlıqla yoldan azdıracaq, lakin öz Allahını tanıyan xalq qüvvətlənib hərəkətə gələcək.
33 ೩೩ ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.
Xalqın ağıllı adamları çoxunu öyrədəcək, ancaq bir müddət qılıncla öldürüləcək, yandırılacaq, əsir düşəcək və qarət ediləcəklər.
34 ೩೪ ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.
Onlar məğlub olanda bir qədər kömək alacaqlar, ancaq çox adam riyakarcasına onlara qoşulacaq.
35 ೩೫ ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.
Ağıllı adamlardan bəzisi həlak olacaq ki, qalanları axır zamana qədər paklanıb təmizlənsin və ləkəsiz olsun. Çünki axır zaman yenə də müəyyən vaxtda olacaq.
36 ೩೬ “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.
Bu padşah istədiyini edəcək, qürurlanaraq özünü bütün allahlardan üstün sayacaq, allahlar Allahına qarşı eşidilməmiş küfr söyləyəcək və Allahın qəzəbi icra olunana qədər uğur qazanacaq, çünki müəyyən edilən şey yerinə yetməlidir.
37 ೩೭ ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.
Heç bir allaha – nə öz atalarının allahlarına, nə də qadınların sevdiyi ilahəyə ehtiram göstərməyəcək, çünki özünü bütün allahlardan üstün sayacaq.
38 ೩೮ ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು.
Ancaq onun əvəzinə qalalar allahını izzətləndirəcək, atalarının tanımadığı bir allahı qızıl, gümüş, qiymətli daşlar və gözəl əşyalarla izzətləndirəcək.
39 ೩೯ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವುದು; ಬಹಳ ಜನರ ಮೇಲೆ ಆಳ್ವಿಕೆಯನ್ನು ನಡೆಸುವನು; ದೇಶವನ್ನು ಕ್ರಯಕ್ಕೆ ಹಂಚುವನು.
O, yad allaha ümid etməklə ən güclü qalalara hücum edəcək. Onu qəbul edənləri həddindən artıq izzətləndirəcək, çoxlu adama başçı qoyacaq və mükafat olaraq torpağı bölüşdürəcək.
40 ೪೦ “ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.
Axır zamanda isə cənub padşahı onunla vuruşacaq. Şimal padşahı öz döyüş arabaları, atlıları və çoxlu gəmiləri ilə qasırğa kimi onun üstünə hücum çəkəcək, müxtəlif ölkələri istila edəcək və onlardan sel kimi keçəcək.
41 ೪೧ ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.
Gözəl ölkəyə də girəcək. Çoxlu ölkə işğal olunacaq, ancaq Edom, Moav və Ammonluların başçıları onun əlindən qurtaracaq.
42 ೪೨ ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತ ದೇಶವೂ ತನ್ನನ್ನು ರಕ್ಷಿಸಿಕೊಳ್ಳದು.
O, müxtəlif ölkələrə zərbə vuracaq, Misir ölkəsi də xilas ola bilməyəcək.
43 ೪೩ ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.
Misirin qızıl-gümüş xəzinələrini və bütün sərvətlərini ələ keçirəcək. Liviyalılar və Kuşlular da ona tabe olacaq.
44 ೪೪ ಹೀಗಿರಲು ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವುದು ಅವನು ಅತಿ ರೋಷಗೊಂಡು ಬಹಳ ಜನರನ್ನು ಧ್ವಂಸ ಮಾಡಿ, ನಿರ್ನಾಮ ಮಾಡುವುದಕ್ಕೆ ಹೊರಡುವನು.
Ancaq şərqdən və şimaldan gələn xəbərlər onu narahat edəcək. Bir çoxlarını öldürüb məhv etmək üçün böyük qızğınlıqla yola düşəcək.
45 ೪೫ ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”
Öz padşah çadırlarını dənizlə gözəl müqəddəs dağın arasında quracaq. Ancaq onun aqibəti çatacaq və heç kəs ona kömək edə bilməyəcək.

< ದಾನಿಯೇಲನು 11 >