< ದಾನಿಯೇಲನು 12 >
1 ೧ “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.
Y en ese momento, Miguel tomará su lugar, el gran príncipe, que es el defensor de los hijos de tu pueblo; y habrá tiempos de angustias, como nunca hubo desde el momento en que hubo una nación, hasta entonces; y en ese tiempo tu gente estará a salvo, todos los que están registrados en el libro.
2 ೨ ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
Y algunos de los que duermen en el polvo de la tierra saldrán de su sueño, algunos para la vida eterna y otros para la vergüenza y confusión eterna.
3 ೩ ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
Y los sabios brillarán como la luz del cielo extendido; y aquellos por quienes muchos se han convertido en justicia, serán como las estrellas por los siglos de los siglos.
4 ೪ ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
Pero en cuanto a ti, oh Daniel, deja que las palabras se mantengan en secreto y el libro se enrolle y se mantenga cerrado hasta el tiempo del fin; muchos correrán de aquí para allá y el conocimiento aumentará.
5 ೫ ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.
Entonces, Yo, Daniel, vi a otros dos, uno al borde del río de este lado y otro al borde del río del otro lado.
6 ೬ ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು.
Y le dije al hombre vestido de lino, que estaba sobre las aguas del río: ¿Cuánto tiempo pasará hasta el final de estas maravillas?
7 ೭ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
Luego, al oírme, el hombre vestido de lino, que estaba sobre el río, levantando su mano derecha y su mano izquierda hacia el cielo, hizo un juramento por el que vive para siempre de que sería un tiempo, tiempos, y medio; y cuando el poder de la destrucción del pueblo santo llegue a su fin, todas estas cosas terminarán.
8 ೮ ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು,
Y las palabras vinieron a mis oídos, pero su sentido no me quedó claro; entonces dije: Oh mi señor, ¿cuál es el sentido de estas cosas?
9 ೯ ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.
Y él dijo: Sigue tu camino, Daniel: porque las palabras son secretas y selladas hasta el tiempo del fin;
10 ೧೦ ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
Muchos serán refinados, emblanquecidos y purificados; y los malhechores harán el mal; porque ninguno de los malhechores entenderá; pero los sabios entenderán.
11 ೧೧ ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
Y desde el momento en que se quita la ofrenda quemada regular, y se levanta algo inmundo que causa temor, habrá mil doscientos noventa días.
12 ೧೨ ಕಾದುಕೊಂಡು, ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳುವವನು ಧನ್ಯನು.
Una bendición será para el hombre que sigue esperando, y llega a los mil trescientos treinta y cinco días.
13 ೧೩ ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.
Pero tú, sigue tu camino hasta el fin, y descansarás y te levantarás en tu suerte; porque estarás en tu lugar al final de los días.