< ದಾನಿಯೇಲನು 3 >
1 ೧ ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
Raja Nebukadnezar membuat sebuah patung emas yang tingginya enam puluh hasta dan lebarnya enam hasta yang didirikannya di dataran Dura di wilayah Babel.
2 ೨ ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.
Lalu raja Nebukadnezar menyuruh orang mengumpulkan para wakil raja, para penguasa, para bupati, para penasihat negara, para bendahara, para hakim, para ahli hukum dan semua kepala daerah, untuk menghadiri pentahbisan patung yang telah didirikannya itu.
3 ೩ ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.
Lalu berkumpullah para wakil raja, para penguasa, para bupati, para penasihat negara, para bendahara, para hakim, para ahli hukum dan semua kepala daerah, untuk menghadiri pentahbisan patung yang telah didirikan raja Nebukadnezar itu.
4 ೪ ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.
Dan berserulah seorang bentara dengan suara nyaring: "Beginilah dititahkan kepadamu, hai orang-orang dari segala bangsa, suku bangsa dan bahasa:
5 ೫ ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
demi kamu mendengar bunyi sangkakala, seruling, kecapi, rebab, gambus, serdam dan berbagai-bagai jenis bunyi-bunyian, maka haruslah kamu sujud menyembah patung yang telah didirikan raja Nebukadnezar itu;
6 ೬ ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.
siapa yang tidak sujud menyembah, akan dicampakkan seketika itu juga ke dalam perapian yang menyala-nyala!"
7 ೭ ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
Sebab itu demi segala bangsa mendengar bunyi sangkakala, seruling, kecapi, rebab, gambus dan berbagai-bagai jenis bunyi-bunyian, maka sujudlah orang-orang dari segala bangsa, suku bangsa dan bahasa, dan menyembah patung emas yang telah didirikan raja Nebukadnezar itu.
8 ೮ ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು
Pada waktu itu juga tampillah beberapa orang Kasdim menuduh orang Yahudi.
9 ೯ ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು!
Berkatalah mereka kepada raja Nebukadnezar: "Ya raja, kekallah hidup tuanku!
10 ೧೦ ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.
Tuanku raja telah mengeluarkan titah, bahwa setiap orang yang mendengar bunyi sangkakala, seruling, kecapi, rebab, gambus, serdam dan berbagai-bagai jenis bunyi-bunyian, harus sujud menyembah patung emas itu,
11 ೧೧ “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
dan bahwa siapa yang tidak sujud menyembah, akan dicampakkan ke dalam perapian yang menyala-nyala.
12 ೧೨ ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.
Ada beberapa orang Yahudi, yang kepada mereka telah tuanku berikan pemerintahan atas wilayah Babel, yakni Sadrakh, Mesakh dan Abednego, orang-orang ini tidak mengindahkan titah tuanku, ya raja: mereka tidak memuja dewa tuanku dan tidak menyembah patung emas yang telah tuanku dirikan."
13 ೧೩ ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.
Sesudah itu Nebukadnezar memerintahkan dalam marahnya dan geramnya untuk membawa Sadrakh, Mesakh dan Abednego menghadap. Setelah orang-orang itu dibawa menghadap raja,
14 ೧೪ ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?
berkatalah Nebukadnezar kepada mereka: "Apakah benar, hai Sadrakh, Mesakh dan Abednego, bahwa kamu tidak memuja dewaku dan tidak menyembah patung emas yang kudirikan itu?
15 ೧೫ “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
Sekarang, jika kamu bersedia, demi kamu mendengar bunyi sangkakala, seruling, kecapi, rebab, gambus, serdam dan berbagai-bagai jenis bunyi-bunyian, sujudlah menyembah patung yang kubuat itu! Tetapi jika kamu tidak menyembah, kamu akan dicampakkan seketika itu juga ke dalam perapian yang menyala-nyala. Dan dewa manakah yang dapat melepaskan kamu dari dalam tanganku?"
16 ೧೬ ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
Lalu Sadrakh, Mesakh dan Abednego menjawab raja Nebukadnezar: "Tidak ada gunanya kami memberi jawab kepada tuanku dalam hal ini.
17 ೧೭ ‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
Jika Allah kami yang kami puja sanggup melepaskan kami, maka Ia akan melepaskan kami dari perapian yang menyala-nyala itu, dan dari dalam tanganmu, ya raja;
18 ೧೮ ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.
tetapi seandainya tidak, hendaklah tuanku mengetahui, ya raja, bahwa kami tidak akan memuja dewa tuanku, dan tidak akan menyembah patung emas yang tuanku dirikan itu."
19 ೧೯ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
Maka meluaplah kegeraman Nebukadnezar, air mukanya berubah terhadap Sadrakh, Mesakh dan Abednego; lalu diperintahkannya supaya perapian itu dibuat tujuh kali lebih panas dari yang biasa.
20 ೨೦ ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
Kepada beberapa orang yang sangat kuat dari tentaranya dititahkannya untuk mengikat Sadrakh, Mesakh dan Abednego dan mencampakkan mereka ke dalam perapian yang menyala-nyala itu.
21 ೨೧ ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
Lalu diikatlah ketiga orang itu, dengan jubah, celana, topi dan pakaian-pakaian mereka yang lain, dan dicampakkan ke dalam perapian yang menyala-nyala.
22 ೨೨ ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.
Karena titah raja itu keras, dipanaskanlah perapian itu dengan luar biasa, sehingga nyala api itu membakar mati orang-orang yang mengangkat Sadrakh, Mesakh dan Abednego itu ke atas.
23 ೨೩ ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.
Tetapi ketiga orang itu, yakni Sadrakh, Mesakh dan Abednego, jatuh ke dalam perapian yang menyala-nyala itu dengan terikat.
24 ೨೪ ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.
Kemudian terkejutlah raja Nebukadnezar lalu bangun dengan segera; berkatalah ia kepada para menterinya: "Bukankah tiga orang yang telah kita campakkan dengan terikat ke dalam api itu?" Jawab mereka kepada raja: "Benar, ya raja!"
25 ೨೫ ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.
Katanya: "Tetapi ada empat orang kulihat berjalan-jalan dengan bebas di tengah-tengah api itu; mereka tidak terluka, dan yang keempat itu rupanya seperti anak dewa!"
26 ೨೬ ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
Lalu Nebukadnezar mendekati pintu perapian yang bernyala-nyala itu; berkatalah ia: "Sadrakh, Mesakh dan Abednego, hamba-hamba Allah yang maha tinggi, keluarlah dan datanglah ke mari!" Lalu keluarlah Sadrakh, Mesakh dan Abednego dari api itu.
27 ೨೭ ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
Dan para wakil raja, para penguasa, para bupati dan para menteri raja datang berkumpul; mereka melihat, bahwa tubuh orang-orang ini tidak mempan oleh api itu, bahwa rambut di kepala mereka tidak hangus, jubah mereka tidak berubah apa-apa, bahkan bau kebakaranpun tidak ada pada mereka.
28 ೨೮ ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
Berkatalah Nebukadnezar: "Terpujilah Allahnya Sadrakh, Mesakh dan Abednego! Ia telah mengutus malaikat-Nya dan melepaskan hamba-hamba-Nya, yang telah menaruh percaya kepada-Nya, dan melanggar titah raja, dan yang menyerahkan tubuh mereka, karena mereka tidak mau memuja dan menyembah allah manapun kecuali Allah mereka.
29 ೨೯ ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
Sebab itu aku mengeluarkan perintah, bahwa setiap orang dari bangsa, suku bangsa atau bahasa manapun ia, yang mengucapkan penghinaan terhadap Allahnya Sadrakh, Mesakh dan Abednego, akan dipenggal-penggal dan rumahnya akan dirobohkan menjadi timbunan puing, karena tidak ada allah lain yang dapat melepaskan secara demikian itu."
30 ೩೦ ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.
Lalu raja memberikan kedudukan tinggi kepada Sadrakh, Mesakh dan Abednego di wilayah Babel.