< ದಾನಿಯೇಲನು 4 >
1 ೧ ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!
রাজা নেবুখাদনেজার, সমস্ত পৃথিবীতে বসবাসকারী প্রত্যেক জাতি ও ভাষার মানুষের প্রতি: তোমাদের অনেক উন্নতি হোক!
2 ೨ ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
পরাৎপর ঈশ্বর আমার জন্য যে অলৌকিক চিহ্ন ও আশ্চর্য কাজ করেছেন তা সব তোমাদের জানানো আমি উচিত মনে করছি।
3 ೩ ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”
তাঁর চিহ্নসকল কত মহান,
4 ೪ “ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು.
আমি, নেবুখাদনেজার, পরিতৃপ্তি ও সমৃদ্ধিতে রাজপ্রাসাদে বাস করছিলাম।
5 ೫ ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.
কিন্তু একদিন এক স্বপ্ন দেখলাম যা আমাকে ভীত করল। যখন আমি বিছানায় শুয়ে ছিলাম, তখন যেসব চিন্তা ও দর্শন মনে এল তা আমাকে আতঙ্কিত করল।
6 ೬ ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.
তাই আদেশ দিলাম যে এই স্বপ্নের মানে আমাকে ব্যাখ্যা করবার জন্য ব্যাবিলনের সমস্ত জ্ঞানীদের আমার সামনে হাজির করা হোক।
7 ೭ “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.
যখন সব মন্ত্রবেত্তা, যাদুকর, জ্যোতিষী ও গণকেরা এসে হাজির হল, আমি স্বপ্নটি তাদের বললাম কিন্তু তারা কেউ এর মানে আমাকে ব্যাখ্যা করতে পারল না।
8 ೮ ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,
অবশেষে, দানিয়েল আমার সামনে এল এবং আমি স্বপ্নটি তাকে বললাম। আমার দেবতার নামানুসারে তাকে বেল্টশৎসর বলা হত কারণ পুণ্য দেবতাদের আত্মা তার অন্তরে ছিল।
9 ೯ ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.
আমি বললাম, “হে মন্ত্রবেত্তাদের প্রধান বেল্টশৎসর, আমি জানি পুণ্য দেবতাদের আত্মা তোমার অন্তরে আছে এবং কোনো রহস্যই তোমার অসাধ্য নয়। এই হল আমার স্বপ্ন; আমাকে এর মানে বুঝিয়ে দাও।
10 ೧೦ ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.
বিছানায় শুয়ে থাকা অবস্থায় আমি এসব দর্শন পেলাম: আমি তাকিয়ে দেখলাম, পৃথিবীর মাঝখানে আমার সামনে একটি গাছ, যা ছিল উচ্চতায় প্রকাণ্ড।
11 ೧೧ ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.
গাছটি ক্রমাগত বেড়ে বৃহৎ ও শক্তিশালী হয়ে উঠল, উচ্চতায় আকাশ ছুঁল এবং পৃথিবীর সব প্রান্ত পর্যন্ত দৃশ্যমান হল।
12 ೧೨ ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.
তার সুন্দর পাতা ছিল ও পর্যাপ্ত ফল ছিল এবং তার মধ্যে সকলের আহার ছিল। মাঠের বন্যপশুরা এই গাছের তলায় আশ্রয় খুঁজে পেল এবং পাখিরা ডালপালায় বাস করল; সকল প্রাণী এই গাছটি থেকে খাবার পেল।
13 ೧೩ ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,
“পরে আমি বিছানায় শুয়ে দর্শনে দেখলাম, আমার সামনে এক পবিত্র ব্যক্তি, এক দূত, যিনি স্বর্গ থেকে নেমে আসছিলেন।
14 ೧೪ ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!
তিনি জোর গলায় ঘোষণা করলেন: ‘গাছটি কেটে ফেলো ও তার ডালপালাগুলি ছেঁটে দাও, পাতাগুলি ঝেড়ে ফেলো এবং ফলগুলি ছড়িয়ে-ছিটিয়ে দাও। এই গাছের আশ্রয় থেকে পশুরা এবং ডালপালা থেকে পাখিরা পালিয়ে যাক।
15 ೧೫ ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ.
কিন্তু শুধু মূলকাণ্ড ও শিকড়, লোহা ও পিতলের শিকল দিয়ে বাঁধা অবস্থায়, মাটিতে পড়ে থাক; ও মাঠের ঘাসের মধ্যে পড়ে থাক। “‘সে আকাশের শিশিরে ভিজুক এবং পশুদের সঙ্গে পৃথিবীর গাছপালার মধ্যে তার বাসস্থান হোক।
16 ೧೬ ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.
সাত কাল পর্যন্ত তার মানুষের মন নিয়ে তাকে পশুর মন দেওয়া হোক।
17 ೧೭ ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
“‘এই সিদ্ধান্ত দূতদের মাধ্যমে ঘোষিত হল, পবিত্র ব্যক্তিগণ এই রায় ঘোষণা করলেন, যেন সব জীবিত মানুষ জানতে পারে যে পরাৎপর ঈশ্বর পৃথিবীর সব রাজ্যের উপর সার্বভৌম এবং যে ব্যক্তিকে চান তার হাতে তিনি সেই রাজত্বভার অর্পণ করেন এবং ঈশ্বর এই রাজ্যগুলি শাসনের জন্য বিনয়ী লোকেদের মনোনীত করেন।’
18 ೧೮ ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”
“আমি, রাজা নেবুখাদনেজার এই স্বপ্নই দেখেছিলাম। এখন, বেল্টশৎসর, আমাকে এর মানে কি তা বুঝিয়ে বলো কেননা আমার রাজ্যের কোনো জ্ঞানী এর মানে আমাকে ব্যাখ্যা করতে পারে না। কিন্তু তুমি পারবে, কারণ পবিত্র দেবতাদের আত্মা তোমার মধ্যে উপস্থিত।”
19 ೧೯ ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!
তখন দানিয়েল, যাকে বেল্টশৎসর বলা হত, কিছুক্ষণের জন্য খুব হতবুদ্ধি হয়ে রইল; স্বপ্নের মানে তাকে আতঙ্কিত করল। তাই রাজা বললেন, “বেল্টশৎসর, এই স্বপ্ন বা তার অর্থ যেন তোমাকে ভীত না করে।” বেল্টশৎসর উত্তর দিলেন, “হে আমার প্রভু, শুধু যদি এই স্বপ্ন আপনার পরিবর্তে আপনার শত্রুদের উপর বর্তাত ও এর অর্থ আপনার বিপক্ষের প্রতি ঘটত!
20 ೨೦ “ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ,
যে গাছটি আপনি দেখেছিলেন, যা বৃদ্ধি পেয়েছিল ও শক্তিশালী হয়েছিল, যার উচ্চতা আকাশ ছুঁয়েছিল, সমস্ত পৃথিবীতে দৃশ্যমান হয়ে উঠেছিল,
21 ೨೧ ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ,
যার পাতা সুন্দর ও প্রচুর ফল ছিল, সকলকে আহার দিয়েছিল, বন্যপশুদের আশ্রয় দিয়েছিল এবং যার ডালে পাখিরা বাসা বেঁধেছিল,
22 ೨೨ ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.
হে মহারাজ, আপনিই সেই গাছ! আপনি মহান এবং শক্তিশালী হয়েছেন; আপনার গৌরব বৃদ্ধি পেয়ে আকাশ ছুঁয়েছে এবং আপনার আধিপত্য পৃথিবীর দূরদূরান্ত পর্যন্ত বিস্তৃত হয়েছে।
23 ೨೩ “ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.
“হে মহারাজ আপনি এক পবিত্র ব্যক্তিকে দেখলেন, এক দূত, যিনি স্বর্গ থেকে নেমে আসছিলেন; তিনি বললেন, ‘গাছটি কেটে একেবারে নষ্ট করে দাও, শুধু মূল কাণ্ডটি রেখে দাও, লোহা ও পিতলের শিকল দিয়ে ওটাকে বেঁধে রাখো, ঘাসের মধ্যে থাক, আর শিকড় মাটিতে পড়ে থাক। সে আকাশের শিশিরে ভিজুক, বন্যপশুদের সঙ্গে বাস করুক, যতদিন না পর্যন্ত তার জন্য সাত কাল অতিক্রম হচ্ছে।’
24 ೨೪ “ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.
“হে মহারাজ, স্বপ্নের মানে এই এবং পরাৎপর ঈশ্বর আমার প্রভু মহারাজের বিরুদ্ধে এই আদেশ জারি করেছেন:
25 ೨೫ ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.
মানুষের সমাজ থেকে আপনাকে তাড়িয়ে দেওয়া হবে এবং আপনি বন্যপশুদের সঙ্গে বাস করবেন; বলদের মতো আপনি ঘাস খাবেন ও আকাশের শিশিরে ভিজবেন। সাত কাল পার হবে যতদিন না পর্যন্ত আপনি স্বীকার করবেন যে পরাৎপর ঈশ্বর পৃথিবীর সমস্ত রাজ্যের উপর সার্বভৌম এবং যাকে তাঁর খুশি তার হাতে তিনি রাজত্বভার অর্পণ করেন।
26 ೨೬ ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.
আদেশ অনুযায়ী মূলকাণ্ড ও শিকড় অক্ষত রাখার অর্থ হল যে, আপনি যখন স্বর্গের কর্তৃত্বের কথা স্বীকার করবেন, তখন আপনার রাজত্ব আপনাকে ফিরিয়ে দেওয়া হবে।
27 ೨೭ ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
অতএব, হে মহারাজ, আমার পরামর্শ গ্রহণ করুন: ন্যায় আচরণ করে পাপের জীবন পরিত্যাগ করুন ও পীড়িতদের প্রতি দয়া করে দুষ্ট জীবন বর্জন করুন। তাতে হয়তো আপনার সমৃদ্ধি বজায় থাকবে।”
28 ೨೮ ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.
এসবই রাজা নেবুখাদনেজারের জীবনে ঘটেছিল।
29 ೨೯ ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ,
বারো মাস পরে, রাজা যখন ব্যাবিলনের রাজপ্রাসাদের ছাদে হাঁটছিলেন,
30 ೩೦ “ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.
তিনি বললেন, “এই কি সেই মহান ব্যাবিলন নয়, যা আমি আপন পরাক্রমে নিজের মহিমা প্রকাশের উদ্দেশে রাজকীয় ভবন রূপে গড়ে তুলেছি?”
31 ೩೧ ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;
কথাগুলি যখন তার মুখেই ছিল, স্বর্গ থেকে এক কণ্ঠস্বর ভেসে এল, “তোমার জন্য এই আদেশ জারি করা হয়েছে, রাজা নেবুখাদনেজার, তোমার রাজকীয় কর্তৃত্ব তোমার কাছে থেকে কেড়ে নেওয়া হয়েছে।
32 ೩೨ ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
মানুষের সমাজ থেকে তোমাকে তাড়িয়ে দেওয়া হবে এবং বন্যপশুদের সঙ্গে তুমি বাস করবে; তুমি বলদের মতো ঘাস খাবে। সাত কাল এভাবেই কেটে যাবে যতদিন না পর্যন্ত তুমি স্বীকার করবে যে পরাৎপর ঈশ্বর পৃথিবীর সমস্ত রাজ্যের উপর সার্বভৌম এবং যাকে তাঁর খুশি তার হাতে তিনি রাজত্বভার অর্পণ করেন।”
33 ೩೩ ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
তৎক্ষণাৎ নেবুখাদনেজারের সম্বন্ধে যা বলা হয়েছিল তা পূর্ণ হল। মানুষের সমাজ থেকে তাকে তাড়িয়ে দেওয়া হল এবং বলদের মতো সে ঘাস খেল। আকাশের নিচে তার সারা শরীর শিশিরে ভিজল যতদিন না পর্যন্ত তার চুল ঈগল পাখির পালকের মতো বেড়ে উঠল ও তার নখ পাখির নখের মতো হয়ে উঠল।
34 ೩೪ ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
সেই সময় শেষ হওয়ার পরে, আমি, নেবুখাদনেজার, স্বর্গের দিকে চোখ তুলে দেখলাম এবং আমার সুবুদ্ধি ফিরিয়ে দেওয়া হল; তখন আমি পরাৎপর ঈশ্বরের ধন্যবাদ করলাম; যিনি নিত্যস্থায়ী তাঁর প্রশংসা ও সমাদর করলাম।
35 ೩೫ ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
পৃথিবীর সব মানুষেরা
36 ೩೬ ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.
যে সময়ে আমার সুবুদ্ধি ফিরিয়ে দেওয়া হল, আমার রাজ্যের গৌরবার্থে, সেই সময়েই আমার সম্মান ও প্রতিপত্তিও আমাকে ফিরিয়ে দেওয়া হল। আমার উপদেষ্টা ও বিশিষ্ট ব্যক্তি সকলে আমাকে খুঁজে বের করল। আমাকে রাজসিংহাসনে পুনরায় প্রতিষ্ঠিত করা হল এবং আমার মহিমা আগের তুলনায় অনেক বৃদ্ধি পেল।
37 ೩೭ ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.
এখন, আমি, নেবুখাদনেজার, স্বর্গের রাজার প্রশংসা, গৌরব ও সমাদর করি কারণ তিনি যা করেন তা সঠিক ও তাঁর সমস্ত পথ ন্যায্য। আর যারা অহংকারে জীবন কাটায় তাদের তিনি নম্র করতে সক্ষম।