< ದಾನಿಯೇಲನು 6 >
1 ೧ ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.
Darius fandt for godt at lægge riget under 120 satraper, fordelt over hele Riget;
2 ೨ ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.
og over dem satte han tre Rigsråder, af hvilke Daniel var den ene, for at Satraperne skulde aflægge Regnskab for dem, så Kongen intet Tab led.
3 ೩ ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
Da nu Daniel udmærkede sig fremfor de andre Rigsråder og Satraperne, eftersom der var en ypperlig Ånd i ham, og Kongen derfor tænkte på at sætte ham over hele Riget,
4 ೪ ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.
søgte Rigsråderne og Satraperne at finde en eller anden Brøde i hans Embedsførelse; men de kunde ikke finde nogen Brøde eller Brist, da han var tro og der ingen Efterladenhed eller Brist var at finde hos ham.
5 ೫ ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು.
Så sagde disse Mænd: "Vi finder ingen Sag mod denne Daniel, medmindre vi kan finde noget i hans Gudsdyrkelse."
6 ೬ ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!
Derfor stormede disse Rigsråder og Satraper til Kongen og talte således til ham: "Kong Darius leve evindelig!
7 ೭ ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.
Alle Rigsråderne, Landshøvdingerne, Satraperne, Rådsherrerne og Statholderne er enedes om, at et Kongebud bør udstedes og et Forbud udgå om, at enhver, som i tredive Dage beder en Bøn til nogen anden end dig, o konge, det være sig til en Gud eller et Menneske, skal kastes i Løvekulen.
8 ೮ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.
Derfor skal du, o Konge, udstede Forbudet og lade en Skrivelse udgå, som efter Medernes og Persernes ubryddelige Lov ikke kan tages tilbage."
9 ೯ ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.
Derfor lod kong Darius en Skrivelse udgå med dette Forbud.
10 ೧೦ ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
Men så snart Daniel fik at vide, at Skrivelsen var udgået, gik han ind i sit Hus; i dets Stue på Taget havde han åbne Vinduer i Retning mod Jerusalem, og han faldt på Knæ tre Gange om Dagen og bad og priste sin Gud, ganske som han tilforn havde gjort.
11 ೧೧ ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು.
Da stormede hine Mænd ind og fandt Daniel i Færd med at bede og bønfalde sin Gud.
12 ೧೨ ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು.
Så gik de til kongen og bragte det kongelige Forbud på Tale, idet de spurgte: "Har du ikke udstedt et Forbud om, at enhver, som i tredive Dage beder til nogen anden end dig, o Konge, det være sig til en Gud eller et Menneske, skalkastes i Løvekulen?" Kongen svarede: "Sagen står fast efter Medernes og Persernes ubryddelige Lov."
13 ೧೩ ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.
Så svarede de Kongen: "Daniel, en af de bortførte Judæere, ænser hverken dig, o Konge, eller Forbudet, du udstedte, men beder sin Bøn tre Gange om Dagen!"
14 ೧೪ ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.
Da Kongen hørte dette, blev han såre nedslået og overvejede, hvorledes han kunde redde Daniel, og lige til Solens Nedgang søgte han at finde en Udvej til at hjælpe ham.
15 ೧೫ ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು.
Men så stormede hine Mænd til Kongen og sagde: "Vid, o Konge, at det er medisk og persisk Ret, at intet Forbud og ingen Lov, som Kongen udsteder, kan tages tilbage!"
16 ೧೬ ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.
Da blev Daniel på Kongens Bud hentet og kastet i Løvekulen; men Kongen sagde til Daniel: "Din Gud, som du vedblivende dyrker, redde dig!"
17 ೧೭ ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.
Så blev der hentet en Sten og lagt over Kulens Åbning; og Kongen forseglede den med sin egen og sine Stormænds Seglring, at der ingen Ændring skulde ske i Daniels Sag.
18 ೧೮ ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.
Derpå gik Kongen til sit Palads, hvor han fastede hele Natten. Han lod ingen Kvinder komme ind til sig, og Søvnen veg fra ham.
19 ೧೯ ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.
Ved Daggry, da det lysnede, stod han op og skyndte sig hen til Løvekulen.
20 ೨೦ ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.
Og da han nærmede sig den, råbte han klagende til Daniel. Kongen tog til Orde og sagde til Daniel: "Daniel, du den levende Guds Tjener! Mon din Gud, som du vedblivende dyrker, kunde redde dig fra Løverne?"
21 ೨೧ ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!
Da svarede Daniel Kongen: "Kongen leve evindelig!
22 ೨೨ ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
Min Gud sendte sin Engel og lukkede Løvernes Gab, så de ikke har gjort mig nogen Men, fordi jeg er fundet skyldfri for hans Åsyn og heller ikke har forbrudt mig imod dig, o Konge!"
23 ೨೩ ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
Og Kongen blev såre glad og lod Daniel drage op af Kulen; og da det var sket, viste det sig, at han ikke havde lidt nogen som helst Men, eftersom han havde troet på sin Gud.
24 ೨೪ ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.
Men hine Mænd, som havde bagtalt Daniel, blev på Kongens Bud hentet og kastet i Løvekulen tillige med deres Børn og Hustruer, og næppe havde de nået Kulens Bund, før Løverne kastede sig over dem og knuste alle Ben i dem.
25 ೨೫ ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!
Derpå skrev Kong Darius til alle Folk, Stammer og Tungemål på hele Jorden: "Fred være med eder i rigt Mål!
26 ೨೬ “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;
Hermed byder jeg, at man, så vidt mit Rige strækker sig, skal frygte og bæve for Daniels Gud. Thi han er den levende Gud og bliver i Evighed: hans Rige kan ikke forgå, og hans Herredømme er uden Ende.
27 ೨೭ ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
Det er ham, der redder og udfrier, og han gør Tegn og, Undere i Himmelen og på Jorden, han, som reddede Daniel af Løvernes Vold!"
28 ೨೮ ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.
Og Daniel vedblev at have Lykken med sig under Dariuss og Perseren Kyroses Regering.