< ದಾನಿಯೇಲನು 7 >
1 ೧ ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.
१बाबेलाचा राजा बेलशस्सर याच्या राज्याच्या पहिल्या वर्षी दानीएल आपल्या पलंगावर पडलेला असता त्यास स्वप्न पडले आणि दृष्टांत त्याच्या मनात फिरू लागले मग त्याने ते स्वप्न आणि त्यातील महत्वाच्या घटना लिहून काढत्या.
2 ೨ ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.
२दानीएलाने म्हटले, “रात्रीच्या माझ्या दृष्टांतात मी पाहीले स्वर्गातील चार वारे महासागरावर घोळत होते.
3 ೩ ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.
३चार मोठी श्वापदे जी एकमेकांपासून वेगळी होती, अशी समुद्रातून बाहेर आली.
4 ೪ ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.
४पहिले सिंहासारखे असून त्यास गरुडाचे पंख होते. असा मी पाहत असता त्याचे पंख उपटून त्यास जमिनीवर मानवाप्रमाणे दोन पायावर उभे केले. त्यास मानवाचे हृदय देण्यात आले होते.
5 ೫ ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.
५नंतर दुसरे श्वापद अस्वलासारखे होते त्याच्या दातामध्ये तिन फासोळया धरल्या होत्या. त्यास सांगण्यात आले ‘उठ, पुढे पुष्कळ मांस खा.’
6 ೬ ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು.
६त्यानंतर मी पुन्हा पाहीले तो आणखी एक श्वापद चित्त्याप्रमाणे होते त्याच्या पाठीवर पक्षासारखे चार पंख होते. आणि त्यास चार शिरे होती. त्यास राज्य करण्यासाठी आधिकार दिला होता.
7 ೭ ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.
७त्यानंतर मी रात्री माझ्या स्वप्नात चौथे श्वापद पाहीले, विक्राळ, भयानक आणि अतिशय मजबूत असे ते होते. त्यास मोठे लोखंडी दात होते, ते सर्व काही चावून त्याचा चुरा करी. आणि उरलेले पायाखाली तुडवी ते इतरांपेक्षा वेगळे होते. आणि त्यास दहा शिंगे होती.
8 ೮ ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.
८मी ती शिंगे पाहत असतांना, मग त्यांच्यातून आणखी लहान शिंगे निघाले आणि आधिच्या शिंगातून तीन मुळासह उपटली गेली मी पाहिले त्या शिंगास मानवासारखे डोळे होते आणि मोठ्या फुशारक्या मारणारे तोंड होते.
9 ೯ “ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.
९मी पाहत होतो तेव्हा, आसने मांडण्यात आली; आणि एक पुराणपुरूष आसनावर बसला. त्याची वस्त्रे हिमाप्रमाणे शुभ्र होती आणि त्याचे केस लोकरीसारखे स्वच्छ होते. त्याचे आसन आग्नीज्वाला होते. आणि त्याची चाके जळणारा अग्नी होते.
10 ೧೦ ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
१०त्याच्या समोर अग्नीची नदी वाहत होती, हजारो लोक त्याची सेवा करीत होते, लाखो लोक समोर उभे होते, न्यायसभा चालू होती आणि पुस्तके उघडी होती.
11 ೧೧ ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
११मी सतत त्याकडे पाहत होतो कारण ते लहान शिंग फुशारकी मारत होते. मी पाहत असता त्या श्वापदाचा वध करण्यात आला त्याच्या शरीराचे तूकडे करून ते जाळण्यास देण्यात आले.
12 ೧೨ ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.
१२इतर चार श्वापदाचे प्राण हरण करून त्यांना काही काळ जिवंत ठेवण्यात आले.
13 ೧೩ ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
१३त्या रात्रीच्या माझ्या दृष्टांतात मी पाहिले, आकाशातील मेघावर स्वार होऊन कोणी मानवपूत्रासारखा येताना मी पाहिला तो पुराणपुरूषाकडे आला व त्यास त्याने जवळ केले.
14 ೧೪ ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
१४आणि त्यास प्रभुत्व व वैभव व राज्य दिले, ते असे की, सर्व लोक, राष्ट्रे व भाषा यांनी त्याची सेवा करावी; त्याचे प्रभुत्व सनातन प्रभुत्व आहे, ते टळून जायचे नाही, आणि जे नष्ट व्हायचे नाही असे त्याचे राज्य आहे.
15 ೧೫ “ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.
१५मग मज दानीएलचा जीव घाबरा झाला. मला झालेल्या दृष्टांतामुळे माझे मन विचलीत झाले.
16 ೧೬ ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ,
१६सिंहासनाच्या जवळ उभे असणाऱ्यांपैकी एकाकडे मी गेलो व या सर्व गोष्टींचा अर्थ त्यास विचारला. तेव्हा त्याने मला सर्व गोष्टीचा अर्थ समजावून सांगितला.
17 ೧೭ ‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು.
१७ती मोठी चार श्वापदे म्हणजे पृथ्वीवर उदयास येणारे चार राजे आहेत.
18 ೧೮ ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.
१८पण सर्वोच्च देवाच्या संतांना राज्य प्राप्त होईल, ते युगानयुग त्यांच्या ताब्यात राहील.
19 ೧೯ ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು.
१९नंतर मला त्या चौथ्या श्वापदा विषयी बोलण्याची इच्छा झाली, जे इतरांपेक्षा वेगळे होते. त्याचे दात लोखंडाचे भयंकर असे होते आणि त्याची नखे पितळेची होती, ते चावून चुरा करी. आणि उरलेले जे होते त्याचे पायाखाली तूकडे करी.
20 ೨೦ ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ
२०मला त्याची दहा शिंगे आणि त्याचे गुढ जाणायचे होते जी त्याच्या डोक्यावर होती. एक शिंग त्यामध्ये आणखी निघाले त्यामुळे तीन शिंगे तूटून पडली त्या शिंगाला डोळे असून तोंड होते त्यातून ते मोठमोठ्या गोष्टी बोलत होते. त्या शिंगाची जाडी इतरांपेक्षा जास्त होती. या सगळ्यांचा अर्थ काय म्हणून मी इच्छा दर्शविली.
21 ೨೧ ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ,
२१मी पाहिले त्या शिंगाने पवित्र जनांविरोधात युध्द करून त्यांच्यावर विजय मिळवला.
22 ೨೨ ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”
२२आणि पुराणपुरूष येईपर्यंत ते त्यांच्यावर प्रबळ होत गेले. मग परात्पर देवाच्या पवित्र जनांस न्याय दिला, राज्य आपल्या मालकीचे करून घेतले, असा समय आला.
23 ೨೩ ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು.
२३त्याने सांगितले चौथे श्वापद हे पृथ्वीवर चौथे राज्य होईल; हे इतर राज्यांपेक्षा वेगळे राहील ते सर्व पृथ्वीला ग्रासून टाकील, आणि तिचे पायाखाली तूकडे करीन.
24 ೨೪ ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು.
२४आता दहा शिंगाविषयी या राज्यातून दहा राजांचा उदय होईल; आणि त्यातून आणखी एक राजा निघेल. तो राजा वेगळा असेल आणि तो तीन राजांना पादाक्रांत करील.
25 ೨೫ ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
२५तो सर्वोच्च देवाच्या विरोधात बोलेल, आणि देवाच्या पवित्र जनांचा छळ करील नेमलेले सण आणि नियम बदलण्याचा तो प्रयत्न करील. या सर्व गोष्टी त्याच्या हातात तिन वर्षे आणि सहा महिण्यासाठी दिल्या जातील.
26 ೨೬ ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.
२६पण तिथे न्यायसभा होईल, आणि त्याचे राजकीय सामर्थ्य परत घेण्यात येतील. त्याचा नाश होऊन कायमचा नष्ट करण्यात येईल.
27 ೨೭ ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
२७राज्य, प्रभूत्व आणि अखिल पृथ्वीवरचे वैभव सर्वोच्च देवाच्या पवित्र जनांना देण्यात येईल. त्याचे राज्य अनंतकालचे आहे; आणि इतर त्याची सेवा करून त्याचे आज्ञापालन करतील.”
28 ೨೮ ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.
२८या गोष्टींचा उलगडा इथे संपतो. मी दानीएल या विचारांनी व्याकूळ झालो. माझे तोंड उतरले; पण मी या सर्व गोष्टी मनात ठेवल्या.