< ದಾನಿಯೇಲನು 8 >
1 ೧ ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.
나 다니엘에게 처음에 나타난 이상 후 벨사살 왕 삼년에 다시 이상이 나타나니라
2 ೨ ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.
내가 이상을 보았는데 내가 그것을 볼 때에 내 몸은 엘람도 수산성에 있었고 내가 이상을 보기는 을래 강변에서니라
3 ೩ ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.
내가 눈을 들어본즉 강 가에 두 뿔 가진 수양이 섰는데 그 두 뿔이 다 길어도 한 뿔은 다른 뿔보다도 길었고 그 긴 것은 나중에 난 것이더라
4 ೪ ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.
내가 본즉 그 수양이 서와 북과 남을 향하여 받으나 그것을 당할 짐승이 하나도 없고 그 손에서 능히 구할 이가 절대로 없으므로 그것이 임의로 행하고 스스로 강대하더라
5 ೫ ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.
내가 생각할 때에 한 수염소가 서편에서부터 와서 온 지면에 두루 다니되 땅에 닿지 아니하며 그 염소 두 눈 사이에는 현저한 뿔이 있더라
6 ೬ ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು, ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.
그것이 두 뿔 가진 수양 곧 내가 본바 강가에 섰던 양에게로 나아가되 분노한 힘으로 그것에게로 달려가더니
7 ೭ ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.
내가 본즉 그것이 수양에게로 가까이 나아가서는 더욱 성내어 그 수양을 땅에 엎드러뜨리고 짓밟았으나 능히 수양을 그 손에서 벗어나게 할 이가 없었더라
8 ೮ ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.
수염소가 스스로 심히 강대하여 가더니 강성할 때에 그 큰 뿔이 꺾이고 그 대신에 현저한 뿔 넷이 하늘 사방을 향하여 났더라
9 ೯ ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.
그 중 한 뿔에서 또 작은 뿔 하나가 나서 남편과 동편과 또 영화로운 땅을 향하여 심히 커지더니
10 ೧೦ ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.
그것이 하늘 군대에 미칠만큼 커져서 그 군대와 별 중에 몇을 땅에 떨어뜨리고 그것을 짓밞고
11 ೧೧ ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.
또 스스로 높아져서 군대의 주재를 대적하며 그에게 매일 드리는 제사를 제하여 버렸고 그의 성소를 헐었으며
12 ೧೨ ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.
범죄함을 인하여 백성과 매일 드리는 제사가 그것에게 붙인 바 되었고 그것이 또 진리를 땅에 던지며 자의로 행하여 형통하였더라
13 ೧೩ ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.
내가 들은즉 거룩한 자가 말하더니 다른 거룩한 자가 그 말하는 자에게 묻되 이상에 나타난바 매일 드리는 제사와 망하게 하는 죄악에 대한 일과 성소와 백성이 내어준바 되며 짓밟힐 일이 어느 때까지 이를꼬 하매
14 ೧೪ ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು” ಎಂದು ಹೇಳಿದನು.
그가 내게 이르되 이천 삼백 주야까지니 그 때에 성소가 정결하게 함을 입으리라 하였느니라
15 ೧೫ ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು.
나 다니엘이 이 이상을 보고 그 뜻을 알고자 할 때에 사람 모양 같은 것이 내 앞에 섰고
16 ೧೬ ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.
내가 들은즉 을래 강 두 언덕 사이에서 사람의 목소리가 있어 외쳐 이르되 가브리엘아 이 이상을 이 사람에게 깨닫게 하라 하더니
17 ೧೭ ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
그가 나의 선 곳으로 나아왔는데 그 나아올 때에 내가 두려워서 얼굴을 땅에 대고 엎드리매 그가 내게 이르되 인자야 깨달아 알라 이 이상은 정한 때 끝에 관한 것이니라
18 ೧೮ ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,
그가 내게 말할 때에 내가 얼굴을 땅에 대고 엎드리어 깊이 잠들매 그가 나를 어루만져서 일으켜 세우며
19 ೧೯ “ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.
가로되 진노하시는 때가 마친 후에 될 일을 내가 네게 알게 하리니 이 이상은 정한 때 끝에 관한 일임이니라
20 ೨೦ ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು.
네가 본바 두 뿔 가진 수양은 곧 메대와 바사 왕들이요
21 ೨೧ ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.
털이 많은 수염소는 곧 헬라 왕이요 두 눈 사이에 있는 큰 뿔은 곧 그 첫째 왕이요
22 ೨೨ ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನೆಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವುದಿಲ್ಲ.
이 뿔이 꺾이고 그 대신에 네 뿔이 났은즉 그 나라 가운데서 네 나라가 일어나되 그 권세만 못하리라
23 ೨೩ ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.
이 네 나라 마지막 때에 패역자들이 가득할 즈음에 한 왕이 일어나리니 그 얼굴은 엄장하며 궤휼에 능하며
24 ೨೪ ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.
그 권세가 강할 것이나 자기의 힘으로 말미암은 것이 아니며 그가 장차 비상하게 파괴를 행하고 자의로 행하여 형통하며 강한 자들과 거룩한 백성을 멸하리라
25 ೨೫ ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.
그가 꾀를 베풀어 제 손으로 궤휼을 이루고 마음에 스스로 큰 체하며 또 평화한 때에 많은 무리를 멸하며 또 스스로 서서 만왕의 왕을 대적할 것이나 그가 사람의 손을 말미암지 않고 깨어지리라
26 ೨೬ ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.
이미 말한바 주야에 대한 이상이 확실하니 너는 그 이상을 간수하라 이는 여러 날 후의 일임이니라
27 ೨೭ ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.
이에 나 다니엘이 혼절하여 수일을 앓다가 일어나서 왕의 일을 보았느니라 내가 그 이상을 인하여 놀랐고 그 뜻을 깨닫는 사람도 없었느니라