< ದಾನಿಯೇಲನು 9 >
1 ೧ ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
It was the first year of Darius the Mede, son of Ahasuerus, after he had become king of the Babylonians.
2 ೨ ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.
During the first year of his reign, I, Daniel, understood from the Scriptures as given to the prophet Jeremiah that the time of seventy years for Jerusalem to lie desolate would soon be fulfilled.
3 ೩ ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.
So I turned to the Lord God in prayer. I fasted and wore sackcloth and ashes, and I pleaded with him in prayer to act.
4 ೪ ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,
I prayed to the Lord my God, and confessed, saying, “Lord, you are a great and awesome God! You always keep your promises and show your trustworthy love to those who love you and keep your commandments.
5 ೫ ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು
But we have sinned, we have done wrong. We have acted wickedly, we have rebelled against you. We have turned away from your commandments and your laws.
6 ೬ ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.
We have not paid attention to your servants the prophets who spoke in your name to our kings and leaders and forefathers, and to everybody in the country.
7 ೭ ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.
Lord, you always do what is right, but we continue to be ashamed to this very day—we the people of Judah, the inhabitants of Jerusalem, and all Israel, those nearby and those far away, those of every country where you have driven them because of their unfaithfulness to you.
8 ೮ ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.
Public shame is ours Lord, and on our kings and princes and forefathers, because we have sinned against you.
9 ೯ ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.
Yet you, the Lord our God, are compassionate and forgiving, even though we have rebelled against you.
10 ೧೦ ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.
We have not obeyed what you, the Lord God, have told us. We have not followed your law that you gave us through your servants the prophets.
11 ೧೧ ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.
The whole of Israel has broken your law and turned away from you, not listening to what you had to say. That's why the condemnation that comes from our broken promise has been poured out on us—because of our sin, as made clear in the Law of Moses, the servant of the Lord.
12 ೧೨ ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.
You have carried out what you warned us about, against us and against our rulers—such a terrible punishment brought upon Jerusalem, the worst that has ever happened in the whole world.
13 ೧೩ ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.
Just as the Law of Moses said, all this punishment has fallen on us, but we still have not asked you, the Lord our God, to be favorable to us, turning away from our sins and paying attention to your truth.
14 ೧೪ ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.
You were ready to punish us, and you were right to do everything you have done, for we didn't listen to you.
15 ೧೫ ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.
You, our Lord God, by your great power brought us out of Egypt, making a name for yourself that lasts even until now. But we have sinned, we have done wicked things.
16 ೧೬ ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.
So Lord, because you are so good, please turn away from your anger and fury against Jerusalem, your holy mountain. Because of our sins and those of our forefathers, Jerusalem and your people are mocked by all our neighbors.
17 ೧೭ ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.
Now, our Lord, please listen to the prayer and pleading of your servant, and for your own sake look kindly on your abandoned sanctuary.
18 ೧೮ ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.
Please listen carefully and open your eyes and see the terrible state we are in, and the city that bears your name. We're not making these requests to you for this because of our goodness, but because of your great mercy.
19 ೧೯ ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”
Lord, please listen! Lord, please forgive! Please pay attention and do something! For your own sake, my God, don't delay, for your city and your people are identified by your name.”
20 ೨೦ ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.
I continued speaking, praying and confessing my sins and those of my people Israel, pleading before the Lord my God on behalf of Jerusalem, his holy mountain.
21 ೨೧ ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.
While I was still praying, Gabriel, whom I'd seen previously when I'd had the vision, came flying rapidly towards me at the time of the evening sacrifice.
22 ೨೨ ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.
He gave me the following explanation, saying, “Daniel, I've come to give you insight and understanding.
23 ೨೩ ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.
As soon as you started praying, the answer was given, and I have come to explain it to you because God loves you very much. So please listen to the explanation and understand the meaning of the vision.
24 ೨೪ ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
Seventy weeks has been allotted to your people and your holy city to deal with the rebellion, to put an end to sin, to forgive wrongdoing, to bring in everlasting goodness, to confirm the vision and the prophecy, and to anoint the Most Holy Place.
25 ೨೫ ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.
You need to know and understand that from the time the command is given to restore and rebuild Jerusalem, until the Messiah, seven weeks plus sixty-two weeks will elapse. It will be built with streets and defenses, in spite of the difficult times.
26 ೨೬ ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
After sixty-two weeks the Messiah will be put to death, and will be brought to nothing. A ruler will come to power whose army will destroy the city and the sanctuary. Its end will come like a flood. War and devastation will continue until that period of time is completed.
27 ೨೭ ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”
He will confirm the agreement with many people for one week, but in the middle of the week he will put an end to sacrifices and offerings. The idolatry that causes devastation will be supported until the end when the same fate is poured out on the one who devastates.”