< ದಾನಿಯೇಲನು 9 >

1 ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
בִּשְׁנַת אַחַת לְדָרְיָוֶשׁ בֶּן־אֲחַשְׁוֵרוֹשׁ מִזֶּרַע מָדָי אֲשֶׁר הָמְלַךְ עַל מַלְכוּת כַּשְׂדִּֽים׃
2 ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.
בִּשְׁנַת אַחַת לְמָלְכוֹ אֲנִי דָּֽנִיֵּאל בִּינֹתִי בַּסְּפָרִים מִסְפַּר הַשָּׁנִים אֲשֶׁר הָיָה דְבַר־יְהוָה אֶל־יִרְמִיָה הַנָּבִיא לְמַלֹּאות לְחָרְבוֹת יְרוּשָׁלַ͏ִם שִׁבְעִים שָׁנָֽה׃
3 ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.
וָאֶתְּנָה אֶת־פָּנַי אֶל־אֲדֹנָי הָֽאֱלֹהִים לְבַקֵּשׁ תְּפִלָּה וְתַחֲנוּנִים בְּצוֹם וְשַׂק וָאֵֽפֶר׃
4 ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,
וָֽאֶתְפַּֽלְלָה לַיהוָה אֱלֹהַי וָאֶתְוַדֶּה וָאֹֽמְרָה אָנָּא אֲדֹנָי הָאֵל הַגָּדוֹל וְהַנּוֹרָא שֹׁמֵר הַבְּרִית וְֽהַחֶסֶד לְאֹהֲבָיו וּלְשֹׁמְרֵי מִצְוֺתָֽיו׃
5 ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು
חָטָאנוּ וְעָוִינוּ והרשענו הִרְשַׁעְנוּ וּמָרָדְנוּ וְסוֹר מִמִּצְוֺתֶךָ וּמִמִּשְׁפָּטֶֽיךָ׃
6 ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.
וְלֹא שָׁמַעְנוּ אֶל־עֲבָדֶיךָ הַנְּבִיאִים אֲשֶׁר דִּבְּרוּ בְּשִׁמְךָ אֶל־מְלָכֵינוּ שָׂרֵינוּ וַאֲבֹתֵינוּ וְאֶל כָּל־עַם הָאָֽרֶץ׃
7 ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.
לְךָ אֲדֹנָי הַצְּדָקָה וְלָנוּ בֹּשֶׁת הַפָּנִים כַּיּוֹם הַזֶּה לְאִישׁ יְהוּדָה וּלְיוֹשְׁבֵי יְרֽוּשָׁלִַם וּֽלְכָל־יִשְׂרָאֵל הַקְּרֹבִים וְהָרְחֹקִים בְּכָל־הָֽאֲרָצוֹת אֲשֶׁר הִדַּחְתָּם שָׁם בְּמַעֲלָם אֲשֶׁר מָֽעֲלוּ־בָֽךְ׃
8 ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.
יְהוָה לָנוּ בֹּשֶׁת הַפָּנִים לִמְלָכֵינוּ לְשָׂרֵינוּ וְלַאֲבֹתֵינוּ אֲשֶׁר חָטָאנוּ לָֽךְ׃
9 ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.
לַֽאדֹנָי אֱלֹהֵינוּ הָרַחֲמִים וְהַסְּלִחוֹת כִּי מָרַדְנוּ בּֽוֹ׃
10 ೧೦ ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.
וְלֹא שָׁמַעְנוּ בְּקוֹל יְהוָה אֱלֹהֵינוּ לָלֶכֶת בְּתֽוֹרֹתָיו אֲשֶׁר נָתַן לְפָנֵינוּ בְּיַד עֲבָדָיו הַנְּבִיאִֽים׃
11 ೧೧ ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.
וְכָל־יִשְׂרָאֵל עָֽבְרוּ אֶת־תּוֹרָתֶךָ וְסוֹר לְבִלְתִּי שְׁמוֹעַ בְּקֹלֶךָ וַתִּתַּךְ עָלֵינוּ הָאָלָה וְהַשְּׁבֻעָה אֲשֶׁר כְּתוּבָה בְּתוֹרַת מֹשֶׁה עֶֽבֶד־הָֽאֱלֹהִים כִּי חָטָאנוּ לֽוֹ׃
12 ೧೨ ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.
וַיָּקֶם אֶת־דבריו דְּבָרוֹ ׀ אֲשֶׁר־דִּבֶּר עָלֵינוּ וְעַל שֹֽׁפְטֵינוּ אֲשֶׁר שְׁפָטוּנוּ לְהָבִיא עָלֵינוּ רָעָה גְדֹלָה אֲשֶׁר לֹֽא־נֶעֶשְׂתָה תַּחַת כָּל־הַשָּׁמַיִם כַּאֲשֶׁר נֶעֶשְׂתָה בִּירוּשָׁלָֽ͏ִם׃
13 ೧೩ ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.
כַּאֲשֶׁר כָּתוּב בְּתוֹרַת מֹשֶׁה אֵת כָּל־הָרָעָה הַזֹּאת בָּאָה עָלֵינוּ וְלֹֽא־חִלִּינוּ אֶת־פְּנֵי ׀ יְהוָה אֱלֹהֵינוּ לָשׁוּב מֵֽעֲוֺנֵנוּ וּלְהַשְׂכִּיל בַּאֲמִתֶּֽךָ׃
14 ೧೪ ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.
וַיִּשְׁקֹד יְהוָה עַל־הָרָעָה וַיְבִיאֶהָ עָלֵינוּ כִּֽי־צַדִּיק יְהוָה אֱלֹהֵינוּ עַל־כָּל־מַֽעֲשָׂיו אֲשֶׁר עָשָׂה וְלֹא שָׁמַעְנוּ בְּקֹלֽוֹ׃
15 ೧೫ ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.
וְעַתָּה ׀ אֲדֹנָי אֱלֹהֵינוּ אֲשֶׁר הוֹצֵאתָ אֶֽת־עַמְּךָ מֵאֶרֶץ מִצְרַיִם בְּיָד חֲזָקָה וַתַּֽעַשׂ־לְךָ שֵׁם כַּיּוֹם הַזֶּה חָטָאנוּ רָשָֽׁעְנוּ׃
16 ೧೬ ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.
אֲדֹנָי כְּכָל־צִדְקֹתֶךָ יָֽשָׁב־נָא אַפְּךָ וַחֲמָתְךָ מֵעִֽירְךָ יְרוּשָׁלַ͏ִם הַר־קָדְשֶׁךָ כִּי בַחֲטָאֵינוּ וּבַעֲוֺנוֹת אֲבֹתֵינוּ יְרוּשָׁלַ͏ִם וְעַמְּךָ לְחֶרְפָּה לְכָל־סְבִיבֹתֵֽינוּ׃
17 ೧೭ ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.
וְעַתָּה ׀ שְׁמַע אֱלֹהֵינוּ אֶל־תְּפִלַּת עַבְדְּךָ וְאֶל־תַּחֲנוּנָיו וְהָאֵר פָּנֶיךָ עַל־מִקְדָּשְׁךָ הַשָּׁמֵם לְמַעַן אֲדֹנָֽי׃
18 ೧೮ ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.
הַטֵּה אֱלֹהַי ׀ אָזְנְךָ וּֽשֲׁמָע פקחה פְּקַח עֵינֶיךָ וּרְאֵה שֹֽׁמְמֹתֵינוּ וְהָעִיר אֲשֶׁר־נִקְרָא שִׁמְךָ עָלֶיהָ כִּי ׀ לֹא עַל־צִדְקֹתֵינוּ אֲנַחְנוּ מַפִּילִים תַּחֲנוּנֵינוּ לְפָנֶיךָ כִּי עַל־רַחֲמֶיךָ הָרַבִּֽים׃
19 ೧೯ ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”
אֲדֹנָי ׀ שְׁמָעָה אֲדֹנָי ׀ סְלָחָה אֲדֹנָי הַֽקֲשִׁיבָה וַעֲשֵׂה אַל־תְּאַחַר לְמַֽעֲנְךָ אֱלֹהַי כִּֽי־שִׁמְךָ נִקְרָא עַל־עִירְךָ וְעַל־עַמֶּֽךָ׃
20 ೨೦ ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.
וְעוֹד אֲנִי מְדַבֵּר וּמִתְפַּלֵּל וּמִתְוַדֶּה חַטָּאתִי וְחַטַּאת עַמִּי יִשְׂרָאֵל וּמַפִּיל תְּחִנָּתִי לִפְנֵי יְהוָה אֱלֹהַי עַל הַר־קֹדֶשׁ אֱלֹהָֽי׃
21 ೨೧ ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.
וְעוֹד אֲנִי מְדַבֵּר בַּתְּפִלָּה וְהָאִישׁ גַּבְרִיאֵל אֲשֶׁר רָאִיתִי בֶחָזוֹן בַּתְּחִלָּה מֻעָף בִּיעָף נֹגֵעַ אֵלַי כְּעֵת מִנְחַת־עָֽרֶב׃
22 ೨೨ ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.
וַיָּבֶן וַיְדַבֵּר עִמִּי וַיֹּאמַר דָּנִיֵּאל עַתָּה יָצָאתִי לְהַשְׂכִּילְךָ בִינָֽה׃
23 ೨೩ ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.
בִּתְחִלַּת תַּחֲנוּנֶיךָ יָצָא דָבָר וַאֲנִי בָּאתִי לְהַגִּיד כִּי חֲמוּדוֹת אָתָּה וּבִין בַּדָּבָר וְהָבֵן בַּמַּרְאֶֽה׃
24 ೨೪ ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
שָׁבֻעִים שִׁבְעִים נֶחְתַּךְ עַֽל־עַמְּךָ ׀ וְעַל־עִיר קָדְשֶׁךָ לְכַלֵּא הַפֶּשַׁע ולחתם וּלְהָתֵם חטאות חַטָּאת וּלְכַפֵּר עָוֺן וּלְהָבִיא צֶדֶק עֹֽלָמִים וְלַחְתֹּם חָזוֹן וְנָבִיא וְלִמְשֹׁחַ קֹדֶשׁ קָֽדָשִֽׁים׃
25 ೨೫ ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.
וְתֵדַע וְתַשְׂכֵּל מִן־מֹצָא דָבָר לְהָשִׁיב וְלִבְנוֹת יְרֽוּשָׁלִַם עַד־מָשִׁיחַ נָגִיד שָׁבֻעִים שִׁבְעָה וְשָׁבֻעִים שִׁשִּׁים וּשְׁנַיִם תָּשׁוּב וְנִבְנְתָה רְחוֹב וְחָרוּץ וּבְצוֹק הָעִתִּֽים׃
26 ೨೬ ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
וְאַחֲרֵי הַשָּׁבֻעִים שִׁשִּׁים וּשְׁנַיִם יִכָּרֵת מָשִׁיחַ וְאֵין לוֹ וְהָעִיר וְהַקֹּדֶשׁ יַשְׁחִית עַם נָגִיד הַבָּא וְקִצּוֹ בַשֶּׁטֶף וְעַד קֵץ מִלְחָמָה נֶחֱרֶצֶת שֹׁמֵמֽוֹת׃
27 ೨೭ ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”
וְהִגְבִּיר בְּרִית לָרַבִּים שָׁבוּעַ אֶחָד וַחֲצִי הַשָּׁבוּעַ יַשְׁבִּית ׀ זֶבַח וּמִנְחָה וְעַל כְּנַף שִׁקּוּצִים מְשֹׁמֵם וְעַד־כָּלָה וְנֶחֱרָצָה תִּתַּךְ עַל־שֹׁמֵֽם׃

< ದಾನಿಯೇಲನು 9 >