< ದಾನಿಯೇಲನು 1 >

1 ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
За третього року царюва́ння Йояки́ма, Юдиного царя, прийшов Навуходоно́сор, цар вавилонський, до Єрусалиму, та й обліг його́.
2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.
І дав Госпо́дь в його руку Йояки́ма, Юдиного царя, та частину по́суду Божого дому, і він відправив їх до кра́ю вавилонського, до дому свого бога, а по́суд відправив до скарбни́чного дому свого бога.
3 ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ
І сказав цар до Ашпеназа, начальника його е́внухів, щоб приве́сти з Ізраїлевих синів, і з царсько́го, і з шляхе́тського роду,
4 ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.
юнакі́в, що нема в них жодної ва́ди, і вони вродли́вого ви́гляду та розумні в усякій мудрості, і здібні до знання́, і розуміють науку, і щоб у них була́ мото́рність служи́ти в царсько́му пала́ці, і щоб навчати їх книг та мови халдеїв.
5 ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.
І призна́чив їм цар щоденну пожи́ву, з царсько́ї ї́жі та з вина, що сам його пив, а на їхнє вихова́ння — три роки, а по закі́нченні їх стануть вони перед царськи́м обличчям.
6 ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.
І були́ серед них з Юдиних синів Даниїл, Ана́нія, Мисаї́л та Аза́рія.
7 ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
А нача́льник е́внухів дав їм інші імена́, і дав Даниїлові ім'я́ Валтаса́р, а Ананії — Шадра́х, а Мисаїлові — Меша́х, а Азарії — Авед-Не́ґо.
8 ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.
І поклав Даниїл собі на серце, що він не оскверни́ться ї́жею царя та питво́м, що той сам його пив, і просив від начальника е́внухів, щоб не оскверни́тися.
9 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.
І дав Бог Даниїлові ласку та милість перед начальником е́внухів.
10 ೧೦ ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ತೆಗೆಯಿಸಲು ನೀವು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು.
І сказав начальник е́внухів до Даниїла: „Боюсь я свого пана царя, бо він ви́значив вашу ї́жу та ваше питво́. Бо коли б він побачив ваше обличчя худішим, ніж у тих юнакі́в, що вашого віку, то ви зробите мою голову винуватою перед царем“.
11 ೧೧ ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು
І сказав Даниїл до старшо́го, якого начальник е́внухів призна́чив над Даниїлом, Ананією, Мисаїлом та Азарією:
12 ೧೨ ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.
„Ви́пробуй но своїх рабів десять день, і нехай дають нам із ярини́, — і ми бу́демо їсти, та воду — і бу́демо пити.
13 ೧೩ ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು.
І нехай з'я́вляться перед тобою наші обличчя та обличчя тих юнакі́в, що їдять царську́ їжу, — і згідно з тим, що побачиш, зроби зо своїми рабами“.
14 ೧೪ ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.
І той послухався їх у цьому, і випробо́вував їх десять день.
15 ೧೫ ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.
А по десяти днях їхній вигляд ви́явився кращим, і вони були здорові́ші на тілі, аніж усі ті юнаки́, що їли царську́ ї́жу.
16 ೧೬ ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.
І цей старший відно́сив їхню їжу та вино їхнього пиття́, а давав їм ярину́.
17 ೧೭ ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.
А ці че́тверо юнакі́в, — дав їм Бог пізна́ння та розумі́ння в кожній книжці та мудрості, а Даниїл розумівся на всякому виді́нні та снах.
18 ೧೮ ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.
А на кінець тих днів, коли цар сказав приве́сти їх, то начальник е́внухів привів їх перед обличчя Навуходоно́сорове.
19 ೧೯ ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.
І цар розмовляв з ними, і зо всіх них жоден не був зна́йдений таким, як Даниїл, Ана́нія, Мисаї́л та Аза́рія. І вони ставали перед царськи́м обличчям.
20 ೨೦ ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
А всяку справу мудрости та розуму, що шукав від них цар, то він знайшов їх уде́сятеро мудрішими від усіх чарівникі́в та заклиначі́в, що були́ в усьому його царстві.
21 ೨೧ ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.
І був Даниїл там аж до першого року царя Кі́ра.

< ದಾನಿಯೇಲನು 1 >