< ಧರ್ಮೋಪದೇಶಕಾಂಡ 10 >

1 ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.
בָּעֵ֨ת הַהִ֜וא אָמַ֧ר יְהוָ֣ה אֵלַ֗י פְּסָל־לְךָ֞ שְׁנֵֽי־לֻוחֹ֤ת אֲבָנִים֙ כָּרִ֣אשֹׁנִ֔ים וַעֲלֵ֥ה אֵלַ֖י הָהָ֑רָה וְעָשִׂ֥יתָ לְּךָ֖ אֲר֥וֹן עֵֽץ׃
2 ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.
וְאֶכְתֹּב֙ עַל־הַלֻּחֹ֔ת אֶת־הַדְּבָרִ֔ים אֲשֶׁ֥ר הָי֛וּ עַל־הַלֻּחֹ֥ת הָרִאשֹׁנִ֖ים אֲשֶׁ֣ר שִׁבַּ֑רְתָּ וְשַׂמְתָּ֖ם בָּאָרֽוֹן׃
3 ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.
וָאַ֤עַשׂ אֲרוֹן֙ עֲצֵ֣י שִׁטִּ֔ים וָאֶפְסֹ֛ל שְׁנֵי־לֻחֹ֥ת אֲבָנִ֖ים כָּרִאשֹׁנִ֑ים וָאַ֣עַל הָהָ֔רָה וּשְׁנֵ֥י הַלֻּחֹ֖ת בְּיָדִֽי׃
4 ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.
וַיִּכְתֹּ֨ב עַֽל־הַלֻּחֹ֜ת כַּמִּכְתָּ֣ב הָרִאשׁ֗וֹן אֵ֚ת עֲשֶׂ֣רֶת הַדְּבָרִ֔ים אֲשֶׁ֣ר דִּבֶּר֩ יְהוָ֨ה אֲלֵיכֶ֥ם בָּהָ֛ר מִתּ֥וֹךְ הָאֵ֖שׁ בְּי֣וֹם הַקָּהָ֑ל וַיִּתְּנֵ֥ם יְהוָ֖ה אֵלָֽי׃
5 ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.
וָאֵ֗פֶן וָֽאֵרֵד֙ מִן־הָהָ֔ר וָֽאָשִׂם֙ אֶת־הַלֻּחֹ֔ת בָּאָר֖וֹן אֲשֶׁ֣ר עָשִׂ֑יתִי וַיִּ֣הְיוּ שָׁ֔ם כַּאֲשֶׁ֥ר צִוַּ֖נִי יְהוָֽה׃
6 (ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
וּבְנֵ֣י יִשְׂרָאֵ֗ל נָֽסְע֛וּ מִבְּאֵרֹ֥ת בְּנֵי־יַעֲקָ֖ן מוֹסֵרָ֑ה שָׁ֣ם מֵ֤ת אַהֲרֹן֙ וַיִּקָּבֵ֣ר שָׁ֔ם וַיְכַהֵ֛ן אֶלְעָזָ֥ר בְּנ֖וֹ תַּחְתָּֽיו׃
7 ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)
מִשָּׁ֥ם נָסְע֖וּ הַגֻּדְגֹּ֑דָה וּמִן־הַגֻּדְגֹּ֣דָה יָטְבָ֔תָה אֶ֖רֶץ נַ֥חֲלֵי מָֽיִם׃
8 ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
בָּעֵ֣ת הַהִ֗וא הִבְדִּ֤יל יְהוָה֙ אֶת־שֵׁ֣בֶט הַלֵּוִ֔י לָשֵׂ֖את אֶת־אֲר֣וֹן בְּרִית־יְהוָ֑ה לַעֲמֹד֩ לִפְנֵ֨י יְהוָ֤ה לְשָֽׁרְתוֹ֙ וּלְבָרֵ֣ךְ בִּשְׁמ֔וֹ עַ֖ד הַיּ֥וֹם הַזֶּֽה׃
9 ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.
עַל־כֵּ֞ן לֹֽא־הָיָ֧ה לְלֵוִ֛י חֵ֥לֶק וְנַחֲלָ֖ה עִם־אֶחָ֑יו יְהוָה֙ ה֣וּא נַחֲלָת֔וֹ כַּאֲשֶׁ֥ר דִּבֶּ֛ר יְהוָ֥ה אֱלֹהֶ֖יךָ לֽוֹ׃
10 ೧೦ ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.
וְאָנֹכִ֞י עָמַ֣דְתִּי בָהָ֗ר כַּיָּמִים֙ הָרִ֣אשֹׁנִ֔ים אַרְבָּעִ֣ים י֔וֹם וְאַרְבָּעִ֖ים לָ֑יְלָה וַיִּשְׁמַ֨ע יְהוָ֜ה אֵלַ֗י גַּ֚ם בַּפַּ֣עַם הַהִ֔וא לֹא־אָבָ֥ה יְהוָ֖ה הַשְׁחִיתֶֽךָ׃
11 ೧೧ ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು.
וַיֹּ֤אמֶר יְהוָה֙ אֵלַ֔י ק֛וּם לֵ֥ךְ לְמַסַּ֖ע לִפְנֵ֣י הָעָ֑ם וְיָבֹ֙אוּ֙ וְיִֽרְשׁ֣וּ אֶת־הָאָ֔רֶץ אֲשֶׁר־נִשְׁבַּ֥עְתִּי לַאֲבֹתָ֖ם לָתֵ֥ת לָהֶֽם׃ פ
12 ೧೨ ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
וְעַתָּה֙ יִשְׂרָאֵ֔ל מָ֚ה יְהוָ֣ה אֱלֹהֶ֔יךָ שֹׁאֵ֖ל מֵעִמָּ֑ךְ כִּ֣י אִם־לְ֠יִרְאָה אֶת־יְהוָ֨ה אֱלֹהֶ֜יךָ לָלֶ֤כֶת בְּכָל־דְּרָכָיו֙ וּלְאַהֲבָ֣ה אֹת֔וֹ וְלַֽעֲבֹד֙ אֶת־יְהוָ֣ה אֱלֹהֶ֔יךָ בְּכָל־לְבָבְךָ֖ וּבְכָל־נַפְשֶֽׁךָ׃
13 ೧೩ ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು
לִשְׁמֹ֞ר אֶת־מִצְוֹ֤ת יְהוָה֙ וְאֶת־חֻקֹּתָ֔יו אֲשֶׁ֛ר אָנֹכִ֥י מְצַוְּךָ֖ הַיּ֑וֹם לְט֖וֹב לָֽךְ׃
14 ೧೪ ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.
הֵ֚ן לַיהוָ֣ה אֱלֹהֶ֔יךָ הַשָּׁמַ֖יִם וּשְׁמֵ֣י הַשָּׁמָ֑יִם הָאָ֖רֶץ וְכָל־אֲשֶׁר־בָּֽהּ׃
15 ೧೫ ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.
רַ֧ק בַּאֲבֹתֶ֛יךָ חָשַׁ֥ק יְהוָ֖ה לְאַהֲבָ֣ה אוֹתָ֑ם וַיִּבְחַ֞ר בְּזַרְעָ֣ם אַחֲרֵיהֶ֗ם בָּכֶ֛ם מִכָּל־הָעַמִּ֖ים כַּיּ֥וֹם הַזֶּה׃
16 ೧೬ ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.
וּמַלְתֶּ֕ם אֵ֖ת עָרְלַ֣ת לְבַבְכֶ֑ם וְעָ֨רְפְּכֶ֔ם לֹ֥א תַקְשׁ֖וּ עֽוֹד׃
17 ೧೭ ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
כִּ֚י יְהוָ֣ה אֱלֹֽהֵיכֶ֔ם ה֚וּא אֱלֹהֵ֣י הָֽאֱלֹהִ֔ים וַאֲדֹנֵ֖י הָאֲדֹנִ֑ים הָאֵ֨ל הַגָּדֹ֤ל הַגִּבֹּר֙ וְהַנּוֹרָ֔א אֲשֶׁר֙ לֹא־יִשָּׂ֣א פָנִ֔ים וְלֹ֥א יִקַּ֖ח שֹֽׁחַד׃
18 ೧೮ ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
עֹשֶׂ֛ה מִשְׁפַּ֥ט יָת֖וֹם וְאַלְמָנָ֑ה וְאֹהֵ֣ב גֵּ֔ר לָ֥תֶת ל֖וֹ לֶ֥חֶם וְשִׂמְלָֽה׃
19 ೧೯ ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.
וַאֲהַבְתֶּ֖ם אֶת־הַגֵּ֑ר כִּֽי־גֵרִ֥ים הֱיִיתֶ֖ם בְּאֶ֥רֶץ מִצְרָֽיִם׃
20 ೨೦ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
אֶת־יְהוָ֧ה אֱלֹהֶ֛יךָ תִּירָ֖א אֹת֣וֹ תַעֲבֹ֑ד וּב֣וֹ תִדְבָּ֔ק וּבִשְׁמ֖וֹ תִּשָּׁבֵֽעַ׃
21 ೨೧ ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
ה֥וּא תְהִלָּתְךָ֖ וְה֣וּא אֱלֹהֶ֑יךָ אֲשֶׁר־עָשָׂ֣ה אִתְּךָ֗ אֶת־הַגְּדֹלֹ֤ת וְאֶת־הַנּֽוֹרָאֹת֙ הָאֵ֔לֶּה אֲשֶׁ֥ר רָא֖וּ עֵינֶֽיךָ׃
22 ೨೨ ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.
בְּשִׁבְעִ֣ים נֶ֔פֶשׁ יָרְד֥וּ אֲבֹתֶ֖יךָ מִצְרָ֑יְמָהּ וְעַתָּ֗ה שָֽׂמְךָ֙ יְהוָ֣ה אֱלֹהֶ֔יךָ כְּכוֹכְבֵ֥י הַשָּׁמַ֖יִם לָרֹֽב׃

< ಧರ್ಮೋಪದೇಶಕಾಂಡ 10 >