< ಧರ್ಮೋಪದೇಶಕಾಂಡ 10 >
1 ೧ ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.
En aquel tiempo Jehová me dijo: Alísate dos tablas de piedra como las primeras, y sube a mí al monte, y hazte un arca de madera;
2 ೨ ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.
Y escribiré en aquellas tablas las palabras que estaban en las tablas primeras, que quebraste; y ponerlas has en el arca.
3 ೩ ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.
E hice un arca de madera de cedro, y alisé dos tablas de piedra como las primeras, y subí al monte con las dos tablas en mi mano.
4 ೪ ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.
Y escribió en las tablas, conforme a la primera escritura, las diez palabras que Jehová os había hablado en el monte de en medio del fuego el día de la congregación, y diómelas Jehová.
5 ೫ ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.
Y volví, y descendí del monte, y puse las tablas en el arca, que había hecho, y allí están, como Jehová me mandó.
6 ೬ (ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
Después los hijos de Israel partieron de Berot de los hijos de Jacán a Mosera: allí murió Aarón, y allí fue sepultado; y tuvo el sacerdocio por él su hijo Eleazar.
7 ೭ ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)
De allí partieron a Gadgad; y de Gadgad a Jetebata tierra de arroyos de aguas.
8 ೮ ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
En aquel tiempo apartó Jehová la tribu de Leví, para que llevase el arca del concierto de Jehová, para que estuviese delante de Jehová para servirle, y para bendecir en su nombre hasta hoy;
9 ೯ ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.
Por lo cual Leví no tuvo parte ni heredad, con sus hermanos: Jehová es su heredad, como Jehová tu Dios le dijo.
10 ೧೦ ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.
Y yo estuve en el monte, como los primeros días, cuarenta días y cuarenta noches, y Jehová me oyó también esta vez, y Jehová no quiso destruirte.
11 ೧೧ ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು.
Y díjome Jehová: Levántate, anda para que partas delante del pueblo, para que entren, y hereden la tierra, que juré a sus padres que les había de dar.
12 ೧೨ ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
Ahora pues, Israel, ¿qué pide Jehová tu Dios de ti, sino que temas a Jehová tu Dios, que andes en todos sus caminos, y que le ames, y sirvas a Jehová tu Dios con todo tu corazón, y con toda tu alma;
13 ೧೩ ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು
Que guardes los mandamientos de Jehová, y sus estatutos, que yo te mando hoy, para que hayas bien?
14 ೧೪ ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.
He aquí, de Jehová tu Dios son los cielos y los cielos de los cielos: la tierra y todas las cosas que están en ella.
15 ೧೫ ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.
Solamente de tus padres se agradó Jehová, para amarlos: y escogió su simiente después de ellos, a vosotros, de todos los pueblos, como parece en este día.
16 ೧೬ ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.
Circuncidád pues el prepucio de vuestro corazón: y no endurezcáis más vuestra cerviz.
17 ೧೭ ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
Porque Jehová vuestro Dios es Dios de dioses, y Señor de señores, Dios grande, poderoso y terrible, que no acepta personas, ni toma cohecho:
18 ೧೮ ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
Que hace derecho al huérfano y a la viuda: que ama también al extranjero dándole pan y vestido.
19 ೧೯ ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.
Amaréis pues al extranjero: porque extranjeros fuisteis vosotros en tierra de Egipto.
20 ೨೦ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
A Jehová tu Dios temerás, a él servirás, a él te allegarás, y por su nombre jurarás.
21 ೨೧ ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
El será tu alabanza, y él será tu Dios, que ha hecho contigo estas grandes y terribles cosas, que tus ojos han visto.
22 ೨೨ ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.
Con setenta almas descendieron tus padres a Egipto, y ahora Jehová te ha hecho como las estrellas del cielo en multitud.