< ಧರ್ಮೋಪದೇಶಕಾಂಡ 11 >
1 ೧ ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.
তোমাদের ঈশ্বর সদাপ্রভুকে ভালোবাসবে আর তিনি যা চান তা করবে, এবং তাঁর অনুশাসন, বিধান ও আদেশ সবসময় পালন করবে।
2 ೨ ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ,
আজ তোমরা মনে রেখো যে তোমাদের সন্তানেরা তোমাদের ঈশ্বর সদাপ্রভুর শিক্ষার বিষয়ে দেখেনি ও তাঁর মহিমা, তাঁর শক্তিশালী হাত, তাঁর বাড়িয়ে দেওয়া হাতের অভিজ্ঞতা লাভ করেনি;
3 ೩ ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ,
যে সকল চিহ্নকাজ তিনি মিশরের মধ্যে, মিশরের রাজা ফরৌণের এবং তাঁর সমগ্র দেশের উপর করেছিলেন;
4 ೪ ಐಗುಪ್ತ್ಯರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ,
তিনি মিশরীয় সৈন্যদলের প্রতি যা করেছিলেন, তাদের ঘোড়া ও রথগুলির প্রতি, এবং তারা যখন তোমাদের পিছনে তাড়া করে আসছিল তখন কেমন করে তিনি লোহিত সাগরের জলে তাদের ডুবিয়ে দিয়েছিলেন আর কেমন করে সদাপ্রভু তাদের সম্পূর্ণরূপে ধ্বংস করে দিয়েছিলেন তাও তারা দেখেনি।
5 ೫ ನೀವು ಈ ಸ್ಥಳಕ್ಕೆ ಸೇರುವ ತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರಮಾಡಿದ್ದನ್ನೂ,
তোমরা এখানে এসে না পৌঁছানো পর্যন্ত তিনি প্রান্তরে তোমাদের জন্য যা করেছিলেন তা তোমাদের সন্তানেরা দেখেনি,
6 ೬ ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ.
এবং তিনি রূবেণের ছেলে ইলীয়াবের সন্তান দাথন ও অবীরামের প্রতি যা করেছিলেন, যখন ইস্রায়েলীদের মাঝখানে পৃথিবী মুখ খুলে তাদের ও তাদের পরিবারের লোকজন, তাদের তাঁবু এবং তাদের সমস্ত জীবন্ত প্রাণীকে গিলে ফেলেছিল।
7 ೭ ಯೆಹೋವನು ನಡಿಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ.
কিন্তু সদাপ্রভুর এসব বড়ো বড়ো কাজ তোমরাই নিজের চোখে দেখেছ।
8 ೮ ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ
অতএব আজ আমি তোমাদের এসব আজ্ঞা দিচ্ছি, যেন তোমরা শক্তিশালী হও এবং জর্ডন পার হয়ে যে দেশ অধিকার করতে যাচ্ছ তা যেন দখল করতে পারো,
9 ೯ ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.
আর যেন সদাপ্রভু তোমাদের পূর্বপুরুষদের ও তাদের বংশধরদের যে দেশ দেওয়ার জন্য শপথ করেছিলেন, সেই দুধ আর মধু প্রবাহী দেশে অনেক দিন বসবাস করতে পারো।
10 ೧೦ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.
তোমরা যে দেশটি দখল করতে যাচ্ছ সেটি মিশর দেশের মতো নয়, যেখান থেকে তোমরা এসেছ, সেখানে তোমরা বীজ বুনতে আর সবজি ক্ষেতের মতো পা দিয়ে জল সেচতে।
11 ೧೧ ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.
কিন্তু জর্ডন পার হয়ে যে দেশটি তোমরা দখল করতে যাচ্ছ সেটি পাহাড় আর উপত্যকায় ভরা যা আকাশের বৃষ্টির জলপান করে।
12 ೧೨ ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.
সেই দেশের যত্ন তোমাদের ঈশ্বর সদাপ্রভু করেন; বছরের প্রথম থেকে শেষ পর্যন্ত সবসময় তোমাদের ঈশ্বর সদাপ্রভুর চোখ তার উপরে আছে।
13 ೧೩ ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,
অতএব আমি আজ তোমাদের যে সকল আজ্ঞা দিচ্ছি—তোমাদের ঈশ্বর সদাপ্রভুকে ভালোবাসো ও সমস্ত হৃদয় ও প্রাণ দিয়ে তাঁর সেবা করো
14 ೧೪ ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.
তাহলে আমি সব ঋতুতে বৃষ্টি দেব, শরৎ ও বসন্তে, যেন তোমরা শস্য, নতুন দ্রাক্ষারস ও জলপাই তেল সংগ্রহ করতে পারো।
15 ೧೫ ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.
আমি তোমাদের পশুদের জন্য মাঠে ঘাস হতে দেব, এবং তোমরা খাবে ও তৃপ্ত হবে।
16 ೧೬ ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,
তোমরা কিন্তু সতর্ক থাকো, তা না হলে তোমরা ছলনায় পড়ে সদাপ্রভুর কাছ থেকে সরে যাবে এবং অন্যান্য দেবতাদের সেবা ও পূজা করবে।
17 ೧೭ ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.
এতে তোমাদের উপর সদাপ্রভুর ক্রোধের আগুন জ্বলে উঠবে এবং তিনি আকাশের দরজা বন্ধ করে দেবেন, যার ফলে বৃষ্টিও হবে না এবং জমিতে ফসলও হবে না, এবং যে চমৎকার দেশটি সদাপ্রভু তোমাদের দিচ্ছেন সেখান থেকে তোমরা অল্প সময়ের মধ্যেই শেষ হয়ে যাবে।
18 ೧೮ ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.
তোমাদের অন্তরে ও মনে আমার এই কথাগুলি গেঁথে রাখবে; তা মনে রাখার চিহ্ন হিসেবে হাতে বেঁধে রাখবে এবং কপালে লাগিয়ে রাখবে।
19 ೧೯ ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.
সেগুলি তোমাদের সন্তানদের শেখাবে, ঘরে বসে কথা বলার সময় আর যখন তাদের সঙ্গে হাঁটবে, যখন শোবার সময় ও বিছানা থেকে উঠবার সময়।
20 ೨೦ ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು.
সেগুলি তোমাদের বাড়ির দরজার চৌকাঠে ও তোমাদের দ্বারে লিখে রাখবে,
21 ೨೧ ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.
যেন সদাপ্রভু তোমাদের পূর্বপুরুষদের যে দেশ দেওয়ার জন্য শপথ করেছিলেন সেখানে তোমরা ও তোমাদের সন্তানেরা ততকাল বেঁচে থাকো যতকাল এই পৃথিবীর উপর মহাকাশ থাকবে।
22 ೨೨ ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು.
আমি যে সমস্ত আজ্ঞা তোমাদের দিচ্ছি সেগুলি যদি তোমরা যত্নের সঙ্গে পালন করো—তোমাদের ঈশ্বর সদাপ্রভুকে ভালোবাসো, তাঁর বাধ্যতায় চলো এবং তাঁকে আঁকড়ে ধরে থাকো
23 ೨೩ ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.
তাহলে তোমাদের সামনে থেকে সদাপ্রভু এসব জাতিকে তাড়িয়ে দেবেন, আর তোমরা তোমাদের থেকে বড়ো বড়ো এবং শক্তিশালী জাতিকে বেদখল করবে।
24 ೨೪ ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.
তোমরা যে জায়গায় পা ফেলবে সেই জায়গাই তোমাদের হবে: তোমাদের সীমানা বাড়বে প্রান্তর থেকে লেবানন পর্যন্ত এবং ইউফ্রেটিস নদী থেকে ভূমধ্যসাগর পর্যন্ত।
25 ೨೫ ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.
তোমাদের বিরুদ্ধে কেউ দাঁড়াতে পারবে না। তোমরা সেই দেশের যেখানেই যাবে তোমাদের ঈশ্বর সদাপ্রভু তাঁর প্রতিজ্ঞা অনুসারে সেখানকার লোকদের মনে তোমাদের সম্বন্ধে আতঙ্ক ও ভয় ছড়িয়ে দেবেন।
26 ೨೬ ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.
দেখো, আজ আমি তোমাদের সামনে আশীর্বাদ ও অভিশাপ রাখলাম,
27 ೨೭ ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ,
আজ আমি তোমাদের কাছে তোমাদের ঈশ্বর সদাপ্রভুর যে আজ্ঞাগুলি দিলাম তা যদি তোমরা পালন করো, তবে এই আশীর্বাদ তোমাদের হবে;
28 ೨೮ ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.
কিন্তু যদি তোমরা তোমাদের ঈশ্বর সদাপ্রভুর আজ্ঞাগুলি অমান্য করো এবং যে পথে চলবার আদেশ আজ আমি দিয়েছি তা থেকে সরে গিয়ে তোমাদের অজানা অন্য দেবতার পিছনে যাও, তবে তোমাদের উপর অভিশাপ নেমে আসবে।
29 ೨೯ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.
অধিকার করার জন্য তোমরা যে দেশে ঢুকতে যাচ্ছ তোমাদের ঈশ্বর সদাপ্রভু যখন সেই দেশে তোমাদের নিয়ে যাবেন তখন, তোমরা গরিষীম পর্বতের উপর থেকে সেই আশীর্বাদের কথা ঘোষণা করবে আর অভিশাপের কথা এবল পর্বতের উপর থেকে ঘোষণা করবে।
30 ೩೦ ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.
তোমরা তো জানো, এই পাহাড়গুলি জর্ডনের ওপাড়ে, পশ্চিমদিকে, যেদিকে সূর্য অস্ত যায়, মোরির বড়ো বড়ো গাছের কাছে, গিল্গলের কাছাকাছি অরাবায় বসবাসকারী কনানীয়দের দেশে।
31 ೩೧ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ
তোমাদের ঈশ্বর সদাপ্রভু তোমাদের যে দেশ দিচ্ছেন, সেই দেশ অধিকার করবার জন্য তোমরা জর্ডন নদী পার হতে যাচ্ছ। তোমরা যখন তা দখল করে সেখানে বসবাস করতে থাকবে,
32 ೩೨ ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.
তখন আজ আমি তোমাদের যেসব অনুশাসন ও নির্দেশ দিলাম তা অবশ্যই তোমরা পালন করে চলবে।