< ಧರ್ಮೋಪದೇಶಕಾಂಡ 12 >
1 ೧ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ:
Estos son los estatutos y las ordenanzas que observaréis para hacer en la tierra que Yahvé, el Dios de tus padres, te ha dado para que la poseas todos los días que viviréis sobre la tierra.
2 ೨ ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.
Destruiréis todos los lugares en los que las naciones que desposeeréis sirvieron a sus dioses: en los montes altos, en las colinas y debajo de todo árbol verde.
3 ೩ ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.
Derribarreis sus altares, harás pedazos sus columnas y quemaréis con fuego sus postes de Asera. Cortarás las imágenes grabadas de sus dioses. Borrareis su nombre de ese lugar.
4 ೪ ಅವರು ಮಾಡಿದ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು.
No lo harás con el Señor, vuestro Dios.
5 ೫ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
Pero al lugar que Yahvé vuestro Dios elija de entre todas tus tribus, para poner allí su nombre, buscaréis su morada, e iréis allí.
6 ೬ ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.
Llevaréis allí vuestros holocaustos, vuestros sacrificios, vuestros diezmos, la ofrenda mecida de vuestra mano, vuestros votos, vuestras ofrendas voluntarias y los primogénitos de vuestro ganado y de vuestras ovejas.
7 ೭ ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.
Allí comeréis delante de Yahvé vuestro Dios, y os alegraréis de todo lo que hagáis, vosotros y vuestras familias, en lo que Yahvé tu Dios te ha bendecido.
8 ೮ ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.
No haréis todo lo que hacemos hoy aquí, cada uno lo que es correcto a sus propios ojos;
9 ೯ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವತ್ತಿಗೆ ಸೇರಿ ನೀವು ಇನ್ನೂ ವಿಶ್ರಾಂತಿ ಹೊಂದಲಿಲ್ಲವಲ್ಲಾ.
porque todavía no habéis llegado al descanso y a la herencia que Yahvé vuestro Dios os da.
10 ೧೦ ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,
Pero pasaréis el Jordán y habitaréis en la tierra que Yahvé tu Dios os hace heredar, y él os hará descansar de todos vuestros enemigos que te rodean, para que habitéis con seguridad,
11 ೧೧ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.
entonces sucederá que al lugar que Yahvé vuestro Dios elija, para hacer que su nombre habite allí, llevaréis todo lo que yo os mando: vuestros holocaustos, vuestros sacrificios, vuestros diezmos, la ofrenda mecida de vuestra mano, y todos tus votos selectos que hagas a Yahvé.
12 ೧೨ ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.
Os alegraréis ante Yahvé vuestro Dios: vuestros hijos, vuestras hijas, vuestros siervos, vuestras siervas y el levita que está dentro de vuestras puertas, porque él no tiene parte ni herencia contigo.
13 ೧೩ ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.
Ten cuidado de no ofrecer tus holocaustos en todos los lugares que veas;
14 ೧೪ ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.
sino en el lugar que Yahvé elija en una de tus tribus, allí ofrecerás tus holocaustos, y allí harás todo lo que yo te mando.
15 ೧೫ ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.
Sin embargo, podrás matar y comer carne dentro de todas tus puertas, según todo el deseo de tu alma, según la bendición de Yahvé vuestro Dios que te ha dado. Los impuros y los limpios podrán comer de ella, como de la gacela y del ciervo.
16 ೧೬ ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.
Sólo que tú no comeréis la sangre. La derramaréis sobre la tierra como si fuera agua.
17 ೧೭ ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
No podrás comer dentro de tus puertas el diezmo de tu grano, ni el de tu vino nuevo, ni el de tu aceite, ni el primogénito de tu rebaño o de tu manada, ni ninguno de tus votos que hayas hecho, ni tus ofrendas voluntarias, ni la ofrenda de tu mano;
18 ೧೮ ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.
sino que los comerás delante de Yahvé vuestro Dios en el lugar que Yahvé vuestro Dios elija: tú, tu hijo, tu hija, tu siervo, tu sierva y el levita que esté dentro de tus puertas. Te alegrarás ante el Señor tu Dios en todo lo que hagas.
19 ೧೯ ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು, ಜ್ಞಾಪಕವಿರಲಿ.
Ten cuidado de no abandonar al levita mientras vivas en tu tierra.
20 ೨೦ ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.
Cuando Yahvé vuestro Dios amplíe tu frontera, como te ha prometido, y tú digas: “Quiero comer carne”, porque tu alma desea comer carne, podrás comer carne, según el deseo de tu alma.
21 ೨೧ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.
Si el lugar que Yahvé, tu Dios, elige para poner su nombre está demasiado lejos de ti, entonces matarás de tu rebaño y de tus ovejas, que Yahvé te ha dado, como yo te he mandado; y podrás comer dentro de tus puertas, según todo el deseo de tu alma.
22 ೨೨ ಜಿಂಕೆದುಪ್ಪಿಗಳನ್ನು ಶುದ್ಧರೂ ಮತ್ತು ಅಶುದ್ಧರೂ ತಿನ್ನುವ ಪ್ರಕಾರ ದನ ಮತ್ತು ಕುರಿಗಳನ್ನೂ ತಿನ್ನಬಹುದು.
Así como se come la gacela y el ciervo, así comerás tú. El impuro y el limpio podrán comer de ella por igual.
23 ೨೩ ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ.
Sólo asegúrate de no comer la sangre, porque la sangre es la vida. No comerás la vida con la carne.
24 ೨೪ ಅದನ್ನು ತಿನ್ನದೆ, ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.
No la comerás. La derramarás sobre la tierra como si fuera agua.
25 ೨೫ ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.
No la comerás, para que te vaya bien a ti y a tus hijos después de ti, cuando hagas lo que es justo a los ojos de Yahvé.
26 ೨೬ ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.
Sólo tomarás tus cosas sagradas que tengas, y tus votos, y te irás al lugar que Yahvé elija.
27 ೨೭ ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು.
Ofrecerás tus holocaustos, la carne y la sangre, sobre el altar del Señor, tu Dios. La sangre de tus sacrificios se derramará sobre el altar del Señor, tu Dios, y comerás la carne.
28 ೨೮ ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.
Observa y escucha todas estas palabras que te mando, para que te vaya bien a ti y a tus hijos después de ti para siempre, cuando hagas lo que es bueno y recto a los ojos del Señor tu Dios.
29 ೨೯ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ
Cuando Yahvé, tu Dios, elimine a las naciones de delante de ti donde entras para despojarlas, y las despojes y habites en su tierra,
30 ೩೦ ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.
ten cuidado de no caer en la trampa de seguirlas después de que sean destruidas de delante de ti, y de no indagar en sus dioses, diciendo: “¿Cómo sirven estas naciones a sus dioses? Yo haré lo mismo”.
31 ೩೧ ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
No harás así con Yahvé, tu Dios, porque toda abominación a Yahvé, que él odia, la han hecho con sus dioses; pues incluso queman a sus hijos y a sus hijas en el fuego a sus dioses.
32 ೩೨ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.
Todo lo que yo te mande, eso cuidaréis de hacerlo. No le añadirás ni le quitarás nada.