< ಧರ್ಮೋಪದೇಶಕಾಂಡ 13 >
1 ೧ ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,
for to arise: rise in/on/with entrails: among your prophet or to dream dream and to give: give to(wards) you sign: miraculous or wonder
2 ೨ “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.
and to come (in): come [the] sign: miraculous and [the] wonder which to speak: speak to(wards) you to/for to say to go: follow after God another which not to know them and to serve: minister them
3 ೩ ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.
not to hear: hear to(wards) word [the] prophet [the] he/she/it or to(wards) to dream [the] dream [the] he/she/it for to test LORD God your [obj] you to/for to know there you to love: lover [obj] LORD God your in/on/with all heart your and in/on/with all soul your
4 ೪ ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
after LORD God your to go: walk and [obj] him to fear: revere and [obj] commandment his to keep: obey and in/on/with voice his to hear: obey and [obj] him to serve: minister and in/on/with him to cleave [emph?]
5 ೫ ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
and [the] prophet [the] he/she/it or to dream [the] dream [the] he/she/it to die for to speak: speak revolt upon LORD God your [the] to come out: send [obj] you from land: country/planet Egypt and [the] to ransom you from house: home servant/slave to/for to banish you from [the] way: conduct which to command you LORD God your to/for to go: walk in/on/with her and to burn: purge [the] bad: evil from entrails: among your
6 ೬ ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
for to incite you brother: male-sibling your son: child mother your or son: child your or daughter your or woman: wife bosom: embrace your or neighbor your which like/as soul your in/on/with secrecy to/for to say to go: went and to serve: minister God another which not to know you(m. s.) and father your
7 ೭ ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ
from God [the] people which around you [the] near to(wards) you or [the] distant from you from end [the] land: country/planet and till end [the] land: country/planet
8 ೮ ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು.
not be willing to/for him and not to hear: hear to(wards) him and not to pity eye your upon him and not to spare and not to cover upon him
9 ೯ ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು.
for to kill to kill him hand: power your to be in/on/with him in/on/with first to/for to die him and hand: power all [the] people in/on/with last
10 ೧೦ ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.
and to stone him in/on/with stone and to die for to seek to/for to banish you from upon LORD God your [the] to come out: send you from land: country/planet Egypt from house: home servant/slave
11 ೧೧ ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು.
and all Israel to hear: hear and to fear [emph?] and not to add: again to/for to make: do like/as Chronicles [the] bad: evil [the] this in/on/with entrails: among your
12 ೧೨ ನಿಮ್ಮ ದೇವರಾದ ಯೆಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯದಲ್ಲಿ,
for to hear: hear in/on/with one city your which LORD God your to give: give to/for you to/for to dwell there to/for to say
13 ೧೩ ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,
to come out: come human son: young animal Belial from entrails: among your and to banish [obj] to dwell city their to/for to say to go: went and to serve: minister God another which not to know
14 ೧೪ ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು
and to seek and to search and to ask be good and behold truth: true to establish: right [the] word: promised to make: do [the] abomination [the] this in/on/with entrails: among your
15 ೧೫ ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.
to smite to smite [obj] to dwell [the] city ([the] he/she/it *Q(K)*) to/for lip: edge sword to devote/destroy [obj] her and [obj] all which in/on/with her and [obj] animal her to/for lip: edge sword
16 ೧೬ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.
and [obj] all spoil her to gather to(wards) midst street/plaza her and to burn in/on/with fire [obj] [the] city and [obj] all spoil her entire to/for LORD God your and to be mound forever: enduring not to build still
17 ೧೭ “ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.
and not to cleave in/on/with hand your anything from [the] devoted thing because to return: turn back LORD from burning anger face: anger his and to give: give to/for you compassion and to have compassion you and to multiply you like/as as which to swear to/for father your
18 ೧೮ ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.
for to hear: obey in/on/with voice LORD God your to/for to keep: obey [obj] all commandment his which I to command you [the] day to/for to make: do [the] upright in/on/with eye: seeing LORD God your