< ಧರ್ಮೋಪದೇಶಕಾಂಡ 14 >
1 ೧ ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.
son: child you(m. p.) to/for LORD God your not to cut and not to set: make bald spot between eye your to/for to die
2 ೨ ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
for people holy you(m. s.) to/for LORD God your and in/on/with you to choose LORD to/for to be to/for him to/for people possession from all [the] people which upon face: surface [the] land: planet
3 ೩ ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಬಾರದು.
not to eat all abomination
4 ೪ ನೀವು ತಿನ್ನಬಹುದಾದ ಪಶುಜಾತಿಗಳು ಯಾವುವೆಂದರೆ ದನ, ಕುರಿ, ಆಡು,
this [the] animal which to eat cattle sheep sheep and sheep goat
5 ೫ ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ (ಕಾಡುಟಗರು) ಎಂಬಿವುಗಳೇ.
deer and gazelle and roebuck and wild goat and ibex and antelope and mountain goat
6 ೬ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.
and all animal to divide hoof and to cleave cleft two hoof to ascend: regurgitate cud in/on/with animal [obj] her to eat
7 ೭ ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.
surely [obj] this not to eat from to ascend: regurgitate [the] cud and from to divide [the] hoof [the] to cleave [obj] [the] camel and [obj] [the] hare and [obj] [the] rock badger for to ascend: regurgitate cud they(masc.) and hoof not to divide unclean they(masc.) to/for you
8 ೮ ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು.
and [obj] [the] swine for to divide hoof he/she/it and not cud unclean he/she/it to/for you from flesh their not to eat and in/on/with carcass their not to touch
9 ೯ ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ: ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆ ಇದ್ದು ದೇಹವೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
[obj] this to eat from all which in/on/with water all which to/for him fin and scale to eat
10 ೧೦ ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ದೇಹವು ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅದು ನಿಮಗೆ ಅಶುದ್ಧ.
and all which nothing to/for him fin and scale not to eat unclean he/she/it to/for you
11 ೧೧ ಎಲ್ಲಾ ಶುದ್ಧ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಹುದು.
all bird pure to eat
12 ೧೨ ನೀವು ತಿನ್ನಬಾರದವುಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು, ಕ್ರೌಂಚ,
and this which not to eat from them [the] eagle and [the] vulture and [the] vulture
13 ೧೩ ಗಿಡಗ, ಹಕ್ಕಿಸಾಲೆ, ಸಕಲವಿಧವಾದ ಹದ್ದು,
and [the] glede and [obj] [the] falcon and [the] hawk to/for kind her
and [obj] all raven to/for kind his
15 ೧೫ ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,
and [obj] daughter [the] ostrich and [obj] [the] ostrich and [obj] [the] gull and [obj] [the] hawk to/for kind his
16 ೧೬ ಗೂಬೆ, ಹೆಗ್ಗೂಬೆ, ಕರೇಟು,
[obj] [the] owl and [obj] [the] owl and [the] chameleon
17 ೧೭ ಚೀಲಮೂಗಿ, ರಣಹದ್ದು, ನೀರುಕಾಗೆ,
and [the] pelican and [obj] [the] carrion [to] and [obj] [the] cormorant
18 ೧೮ ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಕಣ್ಣಕಪಡಿ.
and [the] stork and [the] heron to/for kind her and [the] hoopoe and [the] bat
19 ೧೯ ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವೂ ನಿಮಗೆ ಅಶುದ್ಧ. ಅವುಗಳನ್ನು ನೀವು ತಿನ್ನಬಾರದು.
and all swarm [the] bird unclean he/she/it to/for you not to eat
20 ೨೦ ರೆಕ್ಕೆಯುಳ್ಳವುಗಳಲ್ಲಿ ಶುದ್ಧ ಜಾತಿಯವುಗಳನ್ನು ಮಾತ್ರ ನೀವು ತಿನ್ನಬಹುದು.
all bird pure to eat
21 ೨೧ ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
not to eat all carcass to/for sojourner which in/on/with gate: town your to give: give her and to eat her or to sell to/for foreign for people holy you(m. s.) to/for LORD God your not to boil kid in/on/with milk mother his
22 ೨೨ ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು.
to tithe to tithe [obj] all produce seed your [the] to come out: produce [the] land: country year year
23 ೨೩ ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.
and to eat to/for face: before LORD God your in/on/with place which to choose to/for to dwell name his there tithe grain your new wine your and oil your and firstborn cattle your and flock your because to learn: learn to/for to fear: revere [obj] LORD God your all [the] day: always
24 ೨೪ ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನು ಉಂಟುಮಾಡಿದ ಕಾಲದಲ್ಲಿ,
and for to multiply from you [the] way: journey for not be able to lift: bear him for to remove from you [the] place which to choose LORD God your to/for to set: make name his there for to bless you LORD God your
25 ೨೫ ಅವುಗಳನ್ನು ಮಾರಿಬಿಟ್ಟು, ಆ ಹಣದ ಗಂಟನ್ನು ಆತನು ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿರಿ.
and to give: give in/on/with silver: money and to confine [the] silver: money in/on/with hand your and to go: went to(wards) [the] place which to choose LORD God your in/on/with him
26 ೨೬ ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.
and to give: give [the] silver: money in/on/with all which to desire soul: myself your in/on/with cattle and in/on/with flock and in/on/with wine and in/on/with strong drink and in/on/with all which to ask you soul: appetite your and to eat there to/for face: before LORD God your and to rejoice you(m. s.) and house: household your
27 ೨೭ ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು.
and [the] Levi which in/on/with gate: town your not to leave: neglect him for nothing to/for him portion and inheritance with you
28 ೨೮ ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು.
from end three year to come out: send [obj] all tithe produce your in/on/with year [the] he/she/it and to rest in/on/with gate: town your
29 ೨೯ ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.
and to come (in): come [the] Levi for nothing to/for him portion and inheritance with you and [the] sojourner and [the] orphan and [the] widow which in/on/with gate: town your and to eat and to satisfy because to bless you LORD God your in/on/with all deed: work hand your which to make: do