< ಧರ್ಮೋಪದೇಶಕಾಂಡ 15 >
1 ೧ ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.
Ob koncu vsakih sedmih let boš naredil odpust.
2 ೨ ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.
To je način odpusta. Vsak upnik, ki posoja, mora svojemu bližnjemu to odpustiti. Tega ne bo terjal od svojega bližnjega ali od svojega brata, ker je to imenovano Gospodov odpust.
3 ೩ ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.
Od tujca lahko to ponovno zahtevaš, toda kar je tvoje, s tvojim bratom, bo tvoja roka odpustila,
4 ೪ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,
razen ko med vami ne bo nobenega revnega, kajti Gospod te bo silno blagoslovil v deželi, ki ti jo daje Gospod, tvoj Bog, za dediščino, da jo vzameš v last,
5 ೫ ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನೀವು ಅಭಿವೃದ್ಧಿ ಹೊಂದುವುದರಿಂದ ನಿಮ್ಮಲ್ಲಿ ಬಡವರೇ ಇರುವುದಿಲ್ಲ.
samo če previdno prisluhneš glasu Gospoda, svojega Boga, da obeležuješ izpolnjevanje vseh teh zapovedi, ki sem ti jih ta dan zapovedal.
6 ೬ ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.
Kajti Gospod, tvoj Bog, te blagoslavlja, kakor ti je obljubil in posojal boš mnogim narodom, toda ti si ne boš izposojal in kraljeval boš nad mnogimi narodi, toda oni ne bodo kraljevali nad teboj.
7 ೭ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
Če je med vami revež enega izmed tvojih bratov znotraj katerihkoli izmed tvojih velikih vrat, v tvoji deželi, ki ti jo daje Gospod, tvoj Bog, ne boš zakrknil svojega srca niti svoje roke zaprl pred svojim revnim bratom,
8 ೮ ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.
temveč mu boš na široko odprl svojo roko in zagotovo mu boš posodil dovolj za njegovo potrebo, v tem, kar mu manjka.
9 ೯ ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.
Pazi se, da ne bi bilo misli v tvojem zlobnem srcu, rekoč: ›Sedmo leto, leto odpusta, se približuje‹ in je tvoje oko zlobno zoper tvojega revnega brata in mu ničesar ne daš in on zoper tebe kliče h Gospodu in to ti bo greh.
10 ೧೦ ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
Zagotovo mu boš dal in tvoje srce ne bo užaloščeno, ko mu daješ, zato ker te bo za to stvar Gospod, tvoj Bog, blagoslovil v vseh tvojih delih in v vsem, k čemur boš položil svojo roko.
11 ೧೧ ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.
Kajti revni ne bo nikoli izginil iz dežele. Zatorej ti zapovedujem, rekoč: ›Svojo roko boš na široko odprl svojem bratu, svojemu revnemu in svojemu pomoči potrebnemu v svoji deželi.‹
12 ೧೨ ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.
In če ti bo prodan tvoj brat, Hebrejec ali Hebrejka in ti služi šest let, ga boš potem v sedmem letu od sebe pustil svobodnega.
13 ೧೩ ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.
In ko ga svobodnega pošlješ od sebe, mu ne boš pustil, da gre proč prazen.
14 ೧೪ ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.
Velikodušno ga boš opremil iz svojega tropa in iz svojega mlatišča in iz svoje vinske stiskalnice. Dal mu boš od tega, s čimer te je Gospod, tvoj Bog, blagoslovil.
15 ೧೫ ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.
Spomnil se boš, da si bil suženj v egiptovski deželi in Gospod, tvoj Bog, te je odkupil, zato ti danes zapovedujem to stvar.
16 ೧೬ ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,
Zgodilo se bo, če ti reče: ›Ne bom šel proč od tebe, ‹ ker ljubi tebe in tvojo hišo, ker mu je dobro s teboj,
17 ೧೭ ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.
potem boš vzel šilo in ga na vratih prebodel skozi njegovo uho in on bo tvoj služabnik na veke. In prav tako boš podobno storil svoji dekli.
18 ೧೮ ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.
Ne bo se ti zdelo težko, ko ga svobodnega pošlješ proč od sebe, kajti vreden ti je bil dvojnega najetega služabnika, v tem, ko ti je služil šest let in Gospod, tvoj Bog, te bo blagoslovil v vsem, kar delaš.
19 ೧೯ ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
Vse prvence, ki pridejo iz tvoje črede in iz tvojega tropa, boš posvetil Gospodu, svojemu Bogu. Nobenega dela ne boš opravljal s prvencem svojega bikca niti strigel prvenca svoje ovce.
20 ೨೦ ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.
To boš leto za letom jedel pred Gospodom, svojim Bogom, ti in tvoja družina, na kraju, ki ga bo Gospod izbral.
21 ೨೧ ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.
In če je na njem kakršnakoli pomanjkljivost kakor, če je hrom ali slep ali ima kakršnokoli bolezensko pomanjkljivost, ga ne boš žrtvoval Gospodu, svojemu Bogu.
22 ೨೨ ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.
Jedel ga boš znotraj svojih velikih vrat. Nečista in čista oseba ga bo jedla enako kakor srnjaka in kakor jelena.
23 ೨೩ ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.
Samo njegove krvi ne boš jedel. Na tla jo boš izlil kakor vodo.