< ಧರ್ಮೋಪದೇಶಕಾಂಡ 16 >

1 ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.
Shikeni mwezi wa Abibu, na kuiadhimisha Pasaka ya Bwana Mungu wenu, kwa sababu katika mwezi wa Abibu, Mungu aliwatoa Misri usiku.
2 ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.
Mtatoa dhabihu ya Pasaka ya mnyama kwa Bwana Mungu wenu kutoka kundi lenu la mbuzi na kondoo au la ngʼombe, mahali pale ambapo Bwana atapachagua kama makao kwa ajili ya Jina lake.
3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.
Msile nyama hiyo pamoja na mikate iliyotiwa chachu, lakini kwa siku saba mtakula mikate isiyotiwa chachu, mikate ya kujitesa, kwa sababu mliondoka Misri kwa haraka, ili kwamba siku zote za maisha yenu mpate kukumbuka wakati wenu wa kuondoka Misri.
4 ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು.
Chachu isionekane katika mali zenu katika nchi yenu yote kwa siku saba. Nyama yoyote ya dhabihu mtakayotoa jioni ya siku ya kwanza isibakizwe mpaka asubuhi.
5 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,
Kamwe msitoe dhabihu ya Pasaka katika mji wowote ambao Bwana Mungu wenu amewapa,
6 ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.
isipokuwa mahali atakapopachagua kama makao kwa ajili ya Jina lake. Hapo ndipo lazima mtoe dhabihu ya Pasaka jioni, jua litakapotua, iwe kumbukumbu yenu ya kutoka Misri.
7 ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.
Okeni na mle mahali pale ambapo Bwana Mungu wenu atakapopachagua, kisha asubuhi mrudi kwenye mahema yenu.
8 ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.
Kwa siku sita mtakula mikate isiyotiwa chachu na siku ya saba fanyeni kusanyiko kwa ajili ya Bwana Mungu wenu na msifanye kazi.
9 ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,
Mhesabu majuma saba tangu wakati mnapoanza kuchukua mundu kuvuna nafaka.
10 ೧೦ ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
Kisha msherehekee Sikukuu ya Majuma kwa Bwana Mungu wenu kwa kutoa sadaka ya hiari kwa kadiri ya baraka ambayo Bwana Mungu wenu amewapa.
11 ೧೧ ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
Shangilieni mbele za Bwana Mungu wenu mahali atakapopachagua kama makao ya Jina lake, ninyi, wana wenu na binti zenu, watumishi wenu wa kiume na wa kike, Walawi walio katika miji yenu, na wageni, yatima na wajane waishio miongoni mwenu.
12 ೧೨ ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.
Kumbukeni kwamba mlikuwa watumwa kule Misri na mfuate amri hizi kwa uangalifu.
13 ೧೩ ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
Adhimisheni sikukuu ya vibanda kwa siku saba baada ya kukusanya mazao yenu ya nafaka na kukamua zabibu.
14 ೧೪ ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
Mfurahie sikukuu yenu, ninyi, wana wenu, binti zenu, watumishi wenu wa kiume na wa kike, Walawi, wageni, yatima na wajane ambao wanaishi katika miji yenu.
15 ೧೫ ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.
Kwa siku saba mtaiadhimisha sikukuu ya Bwana Mungu wenu katika mahali atakapopachagua Bwana. Kwa kuwa Bwana Mungu wenu atawabariki katika mavuno yenu na katika kazi zote za mikono yenu na furaha yenu itakamilika.
16 ೧೬ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.
Wanaume wenu wote lazima wajitokeze mara tatu kwa mwaka mbele za Bwana Mungu wenu mahali atakapopachagua: kwa ajili ya Sikukuu ya Mikate Isiyotiwa Chachu, Sikukuu ya Majuma, na Sikukuu ya Vibanda. Hakuna mtu atakayejitokeza mbele za Bwana mikono mitupu:
17 ೧೭ ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.
Kila mmoja wenu ni lazima alete zawadi kulingana na jinsi ambavyo Bwana Mungu wenu alivyowabariki.
18 ೧೮ ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.
Wateue waamuzi na maafisa kwa kila kabila lenu katika kila mji ambao Bwana Mungu wenu anawapa, nao watawaamua watu kwa usawa.
19 ೧೯ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
Msipotoshe haki wala msifanye upendeleo. Msikubali rushwa kwa sababu rushwa hupofusha macho ya wenye busara na kugeuza maneno ya wenye haki.
20 ೨೦ ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
Mfuate haki na haki peke yake, ili mweze kuishi na kuimiliki nchi ambayo Bwana Mungu wenu anawapa.
21 ೨೧ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.
Msisimamishe nguzo yoyote ya Ashera kando ya madhabahu mliyomjengea Bwana Mungu wenu,
22 ೨೨ ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.
wala msisimamishe jiwe la kuabudu, kwa maana Bwana Mungu wenu anavichukia vitu hivi.

< ಧರ್ಮೋಪದೇಶಕಾಂಡ 16 >